ಹರಿಹರ (Davangere District) : ಹರಿಹರ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದ ಸಮಾರೋಪ ಸಮಾರಂಭ ಪದವಿ ಪೂರ್ವ ಶಿಕ್ಷಣ ಇಲಾಖೆ ದಾವಣಗೆರೆ ಜಿಲ್ಲೆ ಹಾಗೂ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜು ಅಮರಾವತಿ ಹರಿಹರ ಆಶ್ರಯದಲ್ಲಿ ಸಂತ ಅಲೋಶಿಯಸ್ ಕ್ರೀಡಾಂಗಣದಲ್ಲಿ ನೆರವೇರಿತು.
ಸಂಸ್ಥೆಯ ನಿರ್ದೇಶಕ ಫಾದರ್ ಎರಿಕ್ ಮಥಾಯಸ್ ಎಸ್ ಜೆ ಬಾಲಕ-ಬಾಲಕಿಯರ ವಿಭಾಗದಲ್ಲಿ ಅತ್ಯುತ್ತಮ ಸಾಧನೆ ತೋರಿದ ಕಾಲೇಜುಗಳಿಗೆ ಸಮಗ್ರ ಪ್ರಶಸ್ತಿಯನ್ನು ಹಾಗೂ ವೈಯುಕ್ತಿಕ ಚಾಂಪಿಯನ್ ಪ್ರಶಸ್ತಿ ನೀಡಿ ಗೌರವಿಸಿದರು.
ಬಾಲಕಿಯರ ವಿಭಾಗದಲ್ಲಿ ಗಿರಿಯಮ್ಮ ಪದವಿಪೂರ್ವ ಕಾಲೇಜು 92 ಅಂಕಗಳೊಂದಿಗೆ ಸಮಗ್ರ ಪ್ರಶಸ್ತಿ ಪಡೆದರೆ, ಬಾಲಕರ ವಿಭಾಗದಲ್ಲಿ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜು 129 ಅಂಕಗಳೊಂದಿಗೆ ಸತತ 11ನೇ ಬಾರಿ ಸಮಗ್ರ ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.
ಬಾಲಕರ ವಿಭಾಗದಲ್ಲಿ ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿ ಯನ್ನು ಅಂಬೇಡ್ಕರ್ ಪದವಿಪೂರ್ವ ಕಾಲೇಜು ಇಲ್ಲಿನ ವಿದ್ಯಾರ್ಥಿ ಪ್ರಜ್ವಲ್ ಯು.ಎಸ್ ರವರು ಪಡೆದುಕೊಂಡರು. ಬಾಲಕಿಯರ ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿಯನ್ನು ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನ ಕುಮಾರಿ ನಿಶ್ಚಿತಾ ಪಾಟೀಲ್ ತಮ್ಮದಾಗಿಸಿಕೊಂಡರು.
ಈ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಸಂತ ಅಲೋಶಿಯಸ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಪುಷ್ಪಲತಾ ಅರಸ್, ದಾವಣಗೆರೆ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಶೇಖರಪ್ಪ , ಎಸ್ ಜೆ,ಸಂತ ಅಲೋಶಿಯಸ್ ಇಂಟರ್ನ್ಯಾಷನಲ್ ಶಾಲೆಯ ಪ್ರಾಂಶುಪಾಲ ಫಾದರ್ ವಿನೋದ್ ಎ ಜೆ ಎಸ್ ಜೆ ಹಾಗೂ ತಾಲೂಕಿನ ವಿವಿಧ ಕಾಲೇಜಿನ ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರು ಉಪಸ್ಥಿತರಿದ್ದರು.
Read also : Davanagere | ಜನರ ಸಮಸ್ಯೆಗೆ ಸ್ಪಂದಿಸಲು ಜನ ಸಂಪರ್ಕ ಕಚೇರಿ : ಡಾ. ಪ್ರಭಾ ಮಲ್ಲಿಕಾರ್ಜುನ್
ಹರಿಹರ ತಾಲೂಕು ಕ್ರೀಡಾ ಸಂಚಾಲಕ ಮಂಜುನಾಥ ಟಿ ಎಸ್ ಈ ಯಶಸ್ವಿ ಕ್ರೀಡಾ ಕೂಟ ಆಯೋಜಿಸುವಲ್ಲಿ ಸಹಕರಿಸಿದ ಶಿಕ್ಷಣ ಇಲಾಖೆ, ಕಾಲೇಜು ಆಡಳಿತ ಮಂಡಳಿ, ಉಪನ್ಯಾಸಕ -ಉನ್ಯಾಸಕೇತರ ವೃಂದ, ಉತ್ತಮ ತೀರ್ಪುಗಾರಿಕೆ ನೀಡುವಲ್ಲಿ ಸಹಕರಿಸಿದ ತೀರ್ಪುಗಾರರಿಗೆ, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.
ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜು ಅಪ್ರತಿಮ ಸಾಧನೆ
ಬಾಲಕರ ವಿಭಾಗದಲ್ಲಿ 7 ಚಿನ್ನ, 5 ಬೆಳ್ಳಿ, 8 ಕಂಚಿನ ಪದಕಗಳನ್ನು ಪಡೆದುದಲ್ಲದೆ, ಬಾಲಕರ ಫುಟ್ಬಾಲ್, ಕಬಡ್ಡಿ, ಶಟಲ್ ಬ್ಯಾಡ್ಮಿಂಟನ್,ಟೆನಿಕಾಯ್ಟ್, ಹ್ಯಾಂಡ್ ಬಾಲ್,ಚೆಸ್ ನಲ್ಲಿ ಪ್ರಥಮ ಸ್ಥಾನ, ವಾಲಿಬಾಲ್,ಖೋ-ಖೋ ದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿತು. ಬಾಲಕಿಯರ ವಿಭಾಗದಲ್ಲಿ 7 ಚಿನ್ನ,4 ಬೆಳ್ಳಿ ,6 ಕಂಚಿನ ಪದಕಗಳನ್ನು ಪಡೆದುಕೊಳ್ಳುವುದರ ಜೊತೆಗೆ ಬಾಲಕಿಯರ ಫುಟ್ಬಾಲ್,ಚೆಸ್ ನಲ್ಲಿ ಪ್ರಥಮ, ವಾಲಿಬಾಲ್, ಶಟಲ್ ಬ್ಯಾಡ್ಮಿಂಟನ್, ಹ್ಯಾಂಡ್ ಬಾಲ್ ನಲ್ಲಿ ದ್ವಿತೀಯ ಸ್ಥಾನ ಪಡೆದು ಹರಿಹರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿತು.