ಆಗಸ್ಟ್ 23 ರಂದು “ಪದ್ಮಾವತಿ ಫಿಲಂಸ್” ನಿರ್ಮಾಣದ “ಆ ದಿನಗಳು” (those days) ಖ್ಯಾತಿಯ ಕೆ.ಎಂ .ಚೈತನ್ಯ ನಿರ್ದೇಶನದ ಟೈಗರ್ ವಿನೋದ್ ಪ್ರಭಾಕರ್ ಅಭಿನಯದ 25ನೇ ಚಿತ್ರ “ಬಲರಾಮನ ದಿನಗಳು” ಚಿತ್ರ (KANNADA MOVIE) ತಂಡದಿಂದ “ಬಿಗ್ ಅನೌನ್ಸ್ಮೆಂಟ್*
ಟೈಗರ್ ವಿನೋದ್ ಪ್ರಭಾಕರ್ ಅಭಿನಯದ 25 ನೇ ಚಿತ್ರ “ಬಲರಾಮನ ದಿನಗಳು” ಚಿತ್ರವನ್ನು ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಅವರು ನಿರ್ಮಾಣ ಮಾಡುತ್ತಿದ್ದಾರೆ. “ಆ ದಿನಗಳು” ಖ್ಯಾತಿಯ ಕೆ.ಎಂ.ಚೈತನ್ಯ ರವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ಚಿತ್ರದ ಪೋಸ್ಟರ್ ಬಿಡುಗಡೆಯಾಗಿತ್ತು. ಈ ಚಿತ್ರದ ಮೊದಲ ಪೋಸ್ಟರ್ ಎಲ್ಲರ ಗಮನ ಸೆಳೆದಿತ್ತು. ಆಗಸ್ಟ್ 23 ರಂದು “ಬಲರಾಮನ ದಿನಗಳು” ಚಿತ್ರದ (Days of Balarama) ಕುರಿತು ಬಿಗ್ ಅನೌನ್ಸ್ ಮೆಂಟ್ ಮಾಡುವುದಾಗಿ ಚಿತ್ರತಂಡ ತಿಳಿಸಿದೆ. ಅದೇನಿರಬಹುದೆಂಬ ಕುತೂಹಲ ಅಭಿಮಾನಿಗಳಿಗಿದೆ.
Read also : ವಿಭಿನ್ನ ಕಥಾಹಂದರ ಹೊಂದಿರುವ “ಹಗ್ಗ” ಚಿತ್ರ ಆಗಸ್ಟ್ ನಲ್ಲಿ ತೆರೆಗೆ
ಒಟ್ಟಿನಲ್ಲಿ ಪದ್ಮಾವತಿ ಫಿಲಂಸ್ ನಿರ್ಮಾಣದ, ಕೆ.ಎಂ.ಚೈತನ್ಯ ಹಾಗೂ ವಿನೋದ್ ಪ್ರಭಾಕರ್ ಕಾಂಬಿನೇಶನ್ ನಲ್ಲಿ ಮೂಡಿ ಬರುತ್ತಿರುವ ಈ ಚಿತ್ರ ಆರಂಭದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ.