Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪ್ರೀತಿ, ಸೌಹಾರ್ದತೆ ಹೆಚ್ಚಿಸುವ ಹಬ್ಬ ಸಂಕ್ರಾಂತಿ:ಯೋಗ ತಜ್ಞ ಡಾ.ರಾಘವೇಂದ್ರ ಗುರೂಜಿ
ತಾಜಾ ಸುದ್ದಿ

ಪ್ರೀತಿ, ಸೌಹಾರ್ದತೆ ಹೆಚ್ಚಿಸುವ ಹಬ್ಬ ಸಂಕ್ರಾಂತಿ:ಯೋಗ ತಜ್ಞ ಡಾ.ರಾಘವೇಂದ್ರ ಗುರೂಜಿ

Dinamaana Kannada News
Last updated: January 14, 2026 7:21 am
Dinamaana Kannada News
Share
Davanagere
SHARE

ದಾವಣಗೆರೆ ಜ.14: ಮಕರ ಸಂಕ್ರಾಂತಿ ಹಬ್ಬದಂದು ವಿಶೇಷವಾಗಿ ಎಳ್ಳು, ಬೆಲ್ಲ, ಕೊಬ್ಬರಿ ಎಲ್ಲವನ್ನು ಬೆರಸಿ ಸಿಹಿ ಹಂಚಿ ಪರಸ್ಪರ ಪ್ರೀತಿ ಮತ್ತು ಸೌಹಾರ್ದತೆಯನ್ನು ಹೆಚ್ಚಿಸುವ ಹೊಸ ವರ್ಷದ ಮೊದಲನೇ ಹಬ್ಬ ಇದಾಗಿದೆ ಎಂದು ಆದರ್ಶ ಯೋಗ ಪ್ರತಿಷ್ಠಾನದ ಹಿರಿಯ ಯೋಗ ಗುರು ಡಾ|| ರಾಘವೇಂದ್ರ ಗುರೂಜಿಯವರು ಅಭಿಪ್ರಾಯಪಟ್ಟರು.

ಬುಧವಾರ ಮಕರ ಸಂಕ್ರಾಂತಿಯ ನಿಮಿತ್ತ ನಗರದ ದೇವರಾಜ ಅರಸ್ ಬಡಾವಣೆ ‘ಸಿ’ ಬ್ಲಾಕ್‍ನಲ್ಲಿರುವ ಆದರ್ಶ ಯೋಗ ಪ್ರತಿಷ್ಠಾನ (ರಿ), ದಾವಣಗೆರೆ ಶ್ರೀ ಮಹಮ್ಮಾಯಿ ವಿಶ್ವಯೋಗ ಮಂದಿರ ಹಾಗೂ ಯೋಗ ಚಿಕಿತ್ಸಾ ಕೇಂದ್ರ ಇಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂಕ್ರಾಂತಿ ಸುಗ್ಗಿಯ ಹಾಡುಗಳು ಸಂಗೀತ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಸಂಕ್ರಾಂತಿಯನ್ನು ದೇವತೆ ಎಂದು ನಂಬಲಾಗಿದೆ. ಸಂಕ್ರಾಂತಿ ದೇವಿಯು ಸಂಕರಾಸುರ ಎಂಬ ರಾಕ್ಷಸನನ್ನು ಸಂಹಾರ ಮಾಡಿದ ದಿನವಾದ್ದರಿಂದ ಸಂಕ್ರಾಂತಿ ಎಂಬ ಹೆಸರು ಪ್ರತೀತಿಯಲ್ಲಿದೆ. ಸಂಕ್ರಾಂತಿಯು ಹೊಸ ಪರ್ವವನ್ನು ಸೂಚಿಸುವ ದಿನವಾಗಿದ್ದು, ಸೂರ್ಯನು ತನ್ನ ದಿಕ್ಕನ್ನು ಬದಲಾಯಿಸುವ ದಿನವೇ ಮಕರ ಸಂಕ್ರಾಂತಿ, ಈ ದಿನವು ಸೂರ್ಯನ ಶಕ್ತಿಯು ಸಾವಿರ ಪಟ್ಟು ಹೆಚ್ಚಾಗಿದ್ದು, ಶ್ರದ್ಧಾಭಕ್ತಿಯಿಂದ ಯಾರು ಪ್ರಾರ್ಥನೆ ಸಲ್ಲಿಸುತ್ತಾರೋ ಅವರ ಸಕಲ ಇಷ್ಟಾರ್ಥಗಳು ನೆರವೇರುವುದು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ರೈತರು ಬೆಳೆದ ದವಸ ಧಾನ್ಯಗಳನ್ನು ಪೂಜಿಸಿ ಗೋಮಾತೆಯನ್ನು ಧನ್ಯತಾ ಭಾವನೆಯಿಂದ ಪೂಜಿಸಿ ಧನ್ಯರಾಗುವ ದಿನವಿಂದು ಎಂದು ಸಂಕ್ರಾಂತಿ ಹಬ್ಬದ ಸಂಕ್ಷಿಪ್ತ ಮಾಹಿತಿಯನ್ನು ಡಾ|| ಗುರೂಜಿಯವರು ತಿಳಿಸಿದರು.

ಪ್ರಾರಂಭದಲ್ಲಿ ಅಗ್ನಿಹೋತ್ರ ಹೋಮವನ್ನು ಮಾಡಿ ಸೂರ್ಯದೇವನಿಗೆ ಅಘ್ರ್ಯವನ್ನು ಅರ್ಪಿಸಲಾಯಿತು.

ನಂತರ ನಾಡಿನ ಉದಯೋನ್ಮುಖ ಗಾಯಕ ನಾಗೇಶ್ ಬಿ.ಎನ್. ರವರಿಂದ ಸಂಕ್ರಾಂತಿ ಸುಗ್ಗಿಯ ಹಾಡುಗಳು ಸಂಗೀತ ಕಾರ್ಯಕ್ರಮ ನಡೆಯಿತು. ಪ್ರತಿಷ್ಠಾನದ ವತಿಯಿಂದ ಕಲಾವಿದ ನಾಗೇಶ್‍ರವರಿಗೆ ಆತ್ಮೀಯವಾಗಿ ಮೈಸೂರು ಪೇಟ ತೊಡಿಸಿ ಶಾಲು ಹೊದಿಸಿ ಫಲಪುಷ್ಪ ತಾಂಬೂಲದೊಂದಿಗೆ ಸನ್ಮಾನಿಸಿ ಗೌರವಿಸಲಾಯಿತು.

ಹಿರಿಯ ಯೋಗ ಶಿಕ್ಷಕ ಲಲಿತ್‍ಕುಮಾರ್ ವಿ. ಜೈನ್ ಗಾಯಕ ನಾಗೇಶ್‍ರವರ ಪರಿಚಯ ಮಾಡಿ ಕಾರ್ಯಕ್ರಮ ನಿರೂಪಿಸಿದರು.

ಶ್ರೀಮತಿ ಗೌರಮ್ಮ ಮತ್ತು ರೇಖಾ ಕಲ್ಲೇಶ್ ಬಹು ಸುಂದರವಾಗಿ ಬಿಡಿಸಿದ ರಂಗೋಲಿಗಳು ಆಕರ್ಷಣೀಯವಾಗಿತ್ತು.

Read also : ವಿಬಿಜಿ ರಾಮಜಿ ಕಾಯ್ದೆ ಕೂಡಲೇ ರದ್ದುಪಡಿಸಿ:ಆವರಗೆರೆ ರಂಗನಾಥ್ 

ನಿವೃತ್ತ ತಹಶೀಲ್ದಾರ್ ವಿಶ್ವನಾಥಯ್ಯ ಕೆ.ಎಂ., ಪತ್ರಕರ್ತ ಪ್ರಕಾಶ್ ಹೆಚ್.ಎನ್., ವೃಷಭ್ ಮೆಡಿಕಲ್ಸ್‍ನ ಸುನೀಲ್, ಅರುಣೋದಯ ಬಟ್ಟೆ ಅಂಗಡಿ ಮಾಲೀಕರಾದ ಅಜಯ್ ಸೋಲಂಕಿ, ಪೂಜಾ ಸೋಲಂಕಿ, ಅಕ್ಷತಾ ಸೋಲಂಕಿ, ಸಮಾಜ ಕಲ್ಯಾಣ ಇಲಾಖೆಯ ಸಂತೋಷ್ ಹೆಚ್., ಛಾಯಾಗ್ರಾಹಕ ರುಶೀರಾ ಹೆಚ್., ಭರತ್ ವದೋನಿ, ಯೋಗ ಶಿಕ್ಷಕ ಮಹಂತೇಶ್ ಮತ್ತು ಶಿಷ್ಯವೃಂದ ಇನ್ನಿತರರು ಭಾಗವಹಿಸಿದ ಕಾರ್ಯಕ್ರಮದಲ್ಲಿ ಜ್ಯೋತಿಲಕ್ಷ್ಮೀ ವಾಸುದೇವ್, ಶ್ರೀಮತಿ ಸಂಧ್ಯಾ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಕೊನೆಯಲ್ಲಿ ಗುರೂಜಿಯವರು ಎಲ್ಲರಿಗೂ ಎಳ್ಳು ಬೆಲ್ಲ ಹಂಚಿದರು.

ದೇಶೀಯ ಪಾನೀಯ ಸೇವನೆಯೊಂದಿಗೆ ಮಕರ ಸಂಕ್ರಾಂತಿ ಕಾರ್ಯಕ್ರಮ ಸಂಪನ್ನಗೊಂಡಿತು.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ಯೋಗ ತಜ್ಞ ಡಾ.ರಾಘವೇಂದ್ರ ಗುರೂಜಿ
Share This Article
Twitter Email Copy Link Print
Previous Article Davanagere ವಿಬಿಜಿ ರಾಮಜಿ ಕಾಯ್ದೆ ಕೂಡಲೇ ರದ್ದುಪಡಿಸಿ:ಆವರಗೆರೆ ರಂಗನಾಥ್ 
Next Article Davanagere ಮೆಕ್ಕೆಜೋಳ ಖರೀದಿ ಕೇಂದ್ರ ನೋಂದಣಿಗೆ ಶಾಸಕ ಕೆ.ಎಸ್.ಬಸವಂತಪ್ಪ ಚಾಲನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davangere University : ಮೊಬೈಲ್ ಗೀಳು ಬಿಡಿ, ಪುಸ್ತಕ ಓದಿ : ಪ್ರೊ.ಕುಂಬಾರ

ದಾವಣಗೆರೆ  (Davangere)  : ಜ್ಞಾನಾರ್ಜನೆಯ ಜೊತೆಗೆ ಮಾನಸಿಕ ಆರೋಗ್ಯದ ಉದ್ದೇಶಕ್ಕಾಗಿ ವಿದ್ಯಾರ್ಥಿಗಳು ಮೊಬೈಲ್ ಗೀಳು ಬಿಟ್ಟು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು…

By Dinamaana Kannada News

ಹಣ, ಆಸ್ತಿ ಗಳಿಕೆಗಿಂತ ಪರಿಸರ ಮನುಕುಲದ ಸಂಪತ್ತು

ದಾವಣಗೆರೆ:  ಹಣ, ಆಸ್ತಿ ಗಳಿಕೆಗಿಂತಲೂ ಉತ್ತಮ ಪರಿಸರ ಮನುಕುಲದ ಸಂಪತ್ತು. ಆದ್ದರಿಂದ ಪರಿಸರ ಸಂರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುವ ಗಿಡ,…

By Dinamaana Kannada News

ದಾವಣಗೆರೆ|ಹೆಂಡತಿ ಕೊಲೆಗೆ ಯತ್ನ ಗಂಡನಿಗೆ 10 ವರ್ಷ ಜೈಲು

ದಾವಣಗೆರೆ : ಹೆಂಡತಿಗೆ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಗಂಡನಿಗೆ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು 10 ವರ್ಷ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?