ದಾವಣಗೆರೆ (Davanagere): ನಗರದಲ್ಲಿ ಕಲಾಕುಂಚ ಸಾಂಸ್ಕøತಿಕ ಸಂಸ್ಥೆ ವತಿಯಿಂದ ಆಯೋಜಿಸಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಯೋಗ ಕ್ಷೇತ್ರ ಹಾಗೂ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಪ್ರತಿಷ್ಠಿತ ಎಸ್‍ಎಎಸ್‍ಎಸ್ ಯೋಗ ಕೇಂದ್ರ ಸಂಸ್ಥಾಪಕ, ಯೋಗಗುರು ಡಾ.ಎನ್.ಪರಶುರಾಮ್ ಅವರಿಗೆ ‘ಕರ್ನಾಟಕ ರಾಜ್ಯ ಮುಕುಟ ಮಣಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ವಾಮದೇವಪ್ಪ, ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷರು, ಪದಾಧಿಕಾರಿಗಳು ಇದ್ದರು.
ಕರ್ನಾಟಕ ಮುಕುಟ ಮಣಿ ಪ್ರಶಸ್ತಿಗೆ ಭಾಜನರಾದ ಡಾ.ಎನ್.ಪರಶುರಾಮ್ ಅವರಿಗೆ ದಾವಣಗೆರೆ ಜಿಲ್ಲಾ ಯೋಗ ಒಕ್ಕೂಟದ ಅಧ್ಯಕ್ಷ ವಾಸುದೇವ್ ರಾಯ್ಕರ್, ದಾವಣಗೆರೆ ಎಎಸ್‍ಎಸ್ ಯೋಗ ಫೆಡರೇಷನ್ ಅಧ್ಯಕ್ಷ ರುದ್ರಪ್ಪ, ಉಪಾಧ್ಯಕ್ಷ ಗೋಪಾಲ್ ರಾವ್, ಖಜಾಂಚಿ ಎಸ್.ರಾಜಶೇಖರ್, ನಿರ್ದೇಶಕರಾದ ಜೆ.ಎಸ್.ವೀರೇಶ್, ಎಂ.ವೈ.ಸತೀಶ್, ಅಜ್ಜಯ, ರಾಘವೇಂದ್ರ ಚೌಹಣ್, ರಂಗಪ್ಪ, ನಾಗರಾಜ್, ಸಾವಿತ್ರಮ್ಮ, ಪತ್ರಕರ್ತ ಎ.ಎನ್.ನಿಂಗಪ್ಪ ಹಾಗೂ ಯೋಗ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.
Read also : Davanagere | ಆಸ್ತಿ ಆಸೆಗಾಗಿ ಚಿಕ್ಕಪನ ಕೊಲೆ : ಆರೋಪಿಗಳ ಬಂಧನ