ದಾವಣಗೆರೆ.ಅ.3 (Davangere) : ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಯೋಜನೆಯಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್.ಲೊಕೇಶ್ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ. ಪ .ಜಾತಿ ಹಾಗೂ ಬುಡಕಟ್ಟು ಉಪಯೋಜನೆಯಡಿ ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಯೋಜನೆಯಲ್ಲಿ ಬರುವ ವಿವಿಧ ಇಲಾಖೆಗಳು ಯಾವುದೇ ಫಲಾನುಭವಿ ಆಯ್ಕೆಯಲ್ಲಿ ಹಾಗೂ ಟೆಂಡರ್ ಪ್ರಕ್ರಿಯೆಯಲ್ಲಿ ವಿಳಂಬ ಮಾಡದೆ ಕಾರ್ಯನಿರ್ವಹಿಸಬೇಕು ತಿಳಿಸಿದರು.
ಪ್ರಸಕ್ತ ಸಾಲಿನ ವಿವಿಧ ಇಲಾಖೆಗಳು ವಿಶೇಷ ಘಟಕ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆಯಡಿಯಲ್ಲಿ ಎಸ್.ಸಿ.ಎಸ್.ಪಿ ಶೇ. 83.44 ಹಾಗೂ ಟಿ.ಎಸ್.ಪಿ ಶೇ.82.96 ರಷ್ಟು ಆಗಿದ್ದು. ಇದನ್ನು ಇನ್ನು ಹೆಚ್ಚಿನ ಮಟ್ಟದಲ್ಲಿ ಅನುಷ್ಠಾನ ಆಗಬೇಕು ಎಂದು ತಿಳಿಸಿದರು.
Read also : Davanagere | ದೌರ್ಜನ್ಯದಡಿ ಕೊಲೆಯಾದ ಕುಟುಂಬದ ಅವಲಂಭಿತರಿಗೆ ಸರ್ಕಾರಿ ನೌಕರಿ ಮತ್ತು ಪರಿಹಾರ : ಡಿಸಿ
ಎಸ್.ಸಿ.ಪಿ.ಯಡಿ 240.88 ಕೋಟಿ ಹಂಚಿಕೆಯಾಗಿ 89.98 ಕೋಟಿ ಬಿಡುಗಡೆ ಮಾಡಲಾಗಿದೆ, ಇದರಲ್ಲಿ 74.56 ವೆಚ್ಚ ಮಾಡಲಾಗಿದೆ. ಟಿಎಸ್‍ಪಿಯಡಿ 108.10 ಕೋಟಿ ಹಂಚಿಕೆಯಾಗಿದ್ದು 53.68 ಕೋಟಿ ಬಿಡುಗಡೆಯಾಗಿದ್ದು 44.10 ಕೋಟಿ ವೆಚ್ಚ ಮಾಡಲಾಗಿದೆ. ಈ ವರ್ಷದ ಅಂತ್ಯಕ್ಕೆ ಶೇ 100 ರಷ್ಟು ಸಾಧನೆಯನ್ನು ಎಲ್ಲಾ ಇಲಾಖೆಗಳು ಮಾಡಲು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲನಯ್ಕ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಕರಾದ ನಾಗರಾಜ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.