ದಾವಣಗೆರೆ, ಜ. 30, ವಿಜ್ಞಾನ ಮತ್ತು ಕಲಾ ವಸ್ತು ಪ್ರದರ್ಶನಗಳು ಮಕ್ಕಳ ಮುಂದಿನ ಶಿಕ್ಷಣಕ್ಕೆ ಸಹಕಾರಿಯಾಗಲಿವೆ ಎಂದು ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ ಕೆ.ಶೆಟ್ಟಿ ತಿಳಿಸಿದರು.
ನಗರದ ಪಿ.ಜೆ.ಬಡಾವಣೆಯಲ್ಲಿರುವ ಸಂತ ಪೌಲರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ ವಿಜ್ಞಾನ ಮತ್ತು ಕಲಾ ವಸ್ತುಪ್ರದರ್ಶನ ಉದ್ಘಾಟಿಸಿ ವೀಕ್ಷಣೆ ಮಾಡಿ ಅವರು ಮಾತನಾಡಿದರು.
Read also : ಫೆ.8,9 ಮಹರ್ಷಿ ವಾಲ್ಮೀಕಿ ಜಾತ್ರೆ|ಯಶಸ್ವಿಗೆ ಅಧಿಕಾರಿಗಳು ಕ್ರಮವಹಿಸಿ : ಬಸವನಗೌಡ ದದ್ದಲ್
ಈ ವಿಜ್ಞಾನ ಮತ್ತು ಕಲಾ ವಸ್ತು ಪ್ರದರ್ಶನದಲ್ಲಿ ಮಕ್ಕಳು ಶಿಕ್ಷಕರ ಮಾರ್ಗದರ್ಶನದಲ್ಲಿ ಚಂದ್ರಯಾನ-3, ಸೌರಶಕ್ತಿ, ಮಳೆ ನೀರಿನ ಕೊಯ್ಲು, ನೀರಿನ ಸಂರಕ್ಷಣೆ, ಸ್ಮಾರ್ಟ್ ಸಿಟಿ, ಐತಿಹಾಸಿಕ ಕಟ್ಟಡಗಳು ಸೇರಿದಂತೆ ಅನೇಕ ಹೊಸ ಮಾದರಿಗಳನ್ನು ಪ್ರದರ್ಶನ ಮಾಡಿದ್ದಾರೆ. ಹೊಸ ಹೊಸ ಅವಿಷ್ಕಾರಗಳ ಬಗ್ಗೆ ಮಕ್ಕಳು ತಿಳಿಯಲು ಇಂತಹ ವಸ್ತುಪ್ರದರ್ಶನಗಳು ಹೆಚ್ಚೆಚ್ಚು ನಡೆಯಲಿ ಎಂದರು.
ಸಂಸ್ಥೆ ಆಡಳಿತಾಧಿಕಾರಿ ಸಿಸ್ಟರ್ ರಶ್ಮಿ, ಪ್ರಭಾರ ಮುಖ್ಯೋಪಾಧ್ಯಾಯಿನಿ ವೈಲೆಟ್ ಕುಮಾರಿ, ಶಿಕ್ಷಕರಾದ ಟಿ.ಎಂ.ರವೀಂದ್ರ ಸ್ವಾಮಿ, ಪ್ರೇಮಾ ಇತರೆ ಶಿಕ್ಷಕರು, ಮಕ್ಕಳು ಇದ್ದರು.
