Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕಾಂಗ್ರೆಸ್ ನ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಸ್ತಂಗತ
ತಾಜಾ ಸುದ್ದಿ

ಕಾಂಗ್ರೆಸ್ ನ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಸ್ತಂಗತ

Dinamaana Kannada News
Last updated: December 14, 2025 4:05 pm
Dinamaana Kannada News
Share
Dr. Shamanur Shivashankarappa
SHARE

ದಾವಣಗೆರೆ: ದೇಶದ ಅತಿ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಯೋ ಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾದರು. ಇವರಿಗೆ 95 ವರ್ಷ ವಯಸ್ಸಾಗಿತ್ತು.

ಇವರಿಗೆ ಗಣಿ ಮತ್ತು ಭೂವಿಜ್ಞಾನ ಸಚಿವರೂ ಆಗಿರುವ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್, ಎಸ್.ಎಸ್.ಗಣೇಶ್, ಎಸ್.ಎಸ್.ಬಕ್ಕೇಶ್ ಸೇರಿದಂತೆ ಮೂವರು ಪುತ್ರರು. ನಾಲ್ವರು ಪುತ್ರಿಯರು ಹಾಗೂ ಸಂಸದೆ, ಸೊಸೆ ಡಾ.ಪ್ರಭಾ ಮಲ್ಲಿಕಾಜು ನ್ ಇದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.

seem1 dinamaana ads

ಶಾಮನೂರು ಕಲ್ಲಪ್ಪ ಸಾವಿತ್ರಮ್ಮ ದಂಪತಿ ಪುತ್ರರಾಗಿ 1931ರ ಜೂನ್ 16ರಂದು ಜನಿಸಿದ ಶಾಮನೂರು ಶಿವಶಂಕರಪ್ಪ ಮೂಲತಃ ಉದ್ಯಮಿ. ರಾಜಕೀಯ ಕ್ಷೇತ್ರ ಪ್ರವೇ ಶಿಸಿದ ಇವರು 6 ಬಾರಿ ಶಾಸಕರಾಗಿ, ಸಚಿವರಾಗಿ ಹಾಗೂ ಒಮ್ಮೆ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ಸುದೀರ್ಘ ಅವಧಿಗೆ ಕೆಪಿಸಿಸಿ ಖಜಾಂಚಿಯಾಗಿದ್ದರು.

1969ರಲ್ಲಿ ನಗರಸಭೆ ಮೂಲಕ ರಾಜಕೀಯ ಪ್ರವೇಶಿಸಿದ ಶಾಮನೂರು ಶಿವಶಂ ಕರಪ್ಪ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. 1994ರಲ್ಲಿ ಮೊದಲ ಬಾರಿಗೆ ವಿಧಾನಸಭೆಗೆ ಸ್ಪರ್ಧಿಸಿ ಆಯ್ಕೆಯಾದರು. ಆಗ ಅವರಿಗೆ 63 ವರ್ಷ ವಯಸ್ಸಾಗಿತ್ತು. ಶಾಸಕರಾಗಿ, ಸಂಸದರಾಗಿ ನಿರಂ ತರವಾಗಿ ಆಯ್ಕೆಯಾದ ಇವರು ವಯಸ್ಸಾದಂತೆ ರಾಜಕಾರಣದಲ್ಲಿ ಮೇಲೇರಿದರು.

ಶಾಮನೂರು ಶಿವಶಂಕರಪ್ಪ 2012ರಿಂದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿದ್ದರು. ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಎದ್ದಾಗ ‘ವೀರಶೈವ–ಲಿಂಗಾಯತ’ ಎರಡೂ ಒಂದೇ ಎಂದು ಪ್ರಬಲವಾಗಿ ಪ್ರತಿಪಾದಿಸಿದರು. ಇವರ ಅವಧಿಯಲ್ಲಿ ವೀರಶೈವ ಮಹಾಸಭಾದ ಹೆಸರು ವೀರಶೈವ–ಲಿಂಗಾಯತ ಮಹಾಸಭಾ ಎಂಬುದಾಗಿ ಪರಿವರ್ತ ನೆಯಾಯಿತು.

Read also : ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

ವೀರಶೈವ ಲಿಂಗಾಯತ ಮಠಾಧೀಶರನ್ನು ಒಗ್ಗೂಡಿಸಲು ಮುಂದಾಗಿದ್ದ ಶಾಮನೂರು ಶಿವಶಂಕರಪ್ಪ ಈ ನಿಟ್ಟಿನಲ್ಲಿ ಪ್ರಯತ್ನ ಆರಂಭಿಸಿದ್ದರು. ಮೊದಲ ಹೆಜ್ಜೆಯಾಗಿ ಪಂಚಪೀಠ ಮಠಾಧೀಶರ ಸಮ್ಮೇಳವನ್ನು ಆಯೋಜಿಸಿ ಯಶಸ್ಸು ಕಂಡಿದ್ದರು. ವಿರಕ್ತ ಮತ್ತು ಗುರುಪರಂಪರೆ ಒಗ್ಗೂಡಿದರೆ ಸಮಾಜ ಇನ್ನಷ್ಟು ಸಬಲವಾಗುತ್ತದೆ ಎಂಬ ಬಲವಾದ ನಂಬಿಕೆ ಅವರದಾಗಿತ್ತು.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ದಾವಣಗೆರೆ ದಕ್ಷಿಣ  ಕ್ಷೇತ್ರದಿಂದ ಸ್ಫರ್ಧಿಸಿದ 94ರ ಹರೆಯದ ಶಾಮನೂರು ಶಿವಶಂಕರಪ್ಪ ಗೆದ್ದು ಬೀಗಿದ್ದು, ಭಾರತದ ಅತಿ ಹಿರಿಯ ಶಾಸಕ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಶಾಮನೂರು ಶಿವಶಂಕರಪ್ಪ ಒಟ್ಟು 84,258 ಮತಗಳನ್ನು ಪಡೆದಿದ್ದರೆ, ಬಿಜೆಪಿಯ ಬಿಜಿ ಅಜಯಕುಮಾರ್ 56,410 ಮತಗಳನ್ನು ಗಳಿಸಿದ್ದರು. 27,888 ವೋಟ್ಗಳ ಅಂತರದಲ್ಲಿ ಶಾಮನೂರು ಭರ್ಜರಿ ಜಯ ಗಳಿಸಿದ್ದಾರೆ.

job news dinamaana ads
TAGGED:Dinamana.comDr. Shamanur ShivashankarappaKannada Newsಕನ್ನಡ ಸುದ್ದಿಡಾ.ಶಾಮನೂರು ಶಿವಶಂಕರಪ್ಪದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ
Next Article Dr. Shamanur Shivashankarappa ತೀರಿ ಹೋದ ಶಾಮನೂರು ತೀರದ ಸೆಕ್ಯುಲರ್ ನೆನಪುಗಳು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ನೆಲದ ಚದುರಿದ ಚಿತ್ರಗಳು

ಸಂವಿಧಾನವನ್ನು ಅಪಾರ್ಥ ಮಾಡಿಕೊಳ್ಳುವವರಿಗಿಂತ,ಅರ್ಥಮಾಡಿಕೊಂಡು ಅಸಹನೆಯನ್ನು ಆಸ್ಫೋಟಿಸುವವರ ಸಂಖ್ಯೆ ಹೆಚ್ಚಾಗ್ತಿರೋದು ಈ ಹೊತ್ತಿನ ದುರಂತ.  ಜಾತ್ಯತೀತತೆ ಧರ್ಮವನ್ನು ರಾಜಕಾರಣದಿಂದ,  ಸಾಹಿತ್ಯದಿಂದ,ಸಾರ್ವಜನಿಕ ಕ್ಷೇತ್ರಗಳಿಂದ …

By Dinamaana Kannada News

ಅಭಿಜಿತ್ ಅಭಿನಯದ “ಅಡವಿಕಟ್ಟೆ” ಈ ವಾರ ತೆರೆಗೆ

ಬೆಂಗಳೂರು :  ಹಿರಿಯ ನಟ ಅಭಿಜಿತ್‌ ಹಾಗೂ ನಾಗರಾಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ಅಡವಿಕಟ್ಟೆ" ಚಿತ್ರ ಈ ವಾರ ರಾಜ್ಯಾದ್ಯಂತ…

By Dinamaana Kannada News

ದಾವಣಗೆರೆ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಆಯ್ಕೆಪಟ್ಟಿ ಪ್ರಕಟ, ಆಕ್ಷೇಪಣೆಗಳಿಗೆ ಆಹ್ವಾನ

ದಾವಣಗೆರೆ ಆಗಸ್ಟ್ 13: ದಾವಣಗೆರೆ, ಜಗಳೂರು, ಹೊನ್ನಾಳಿ ಮತ್ತು ನ್ಯಾಮತಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇದ್ದ 26…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?