ದಾವಣಗೆರೆ (Davanagere) : ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿ ‘ದೃಷ್ಟಿಬೊಟ್ಟು’. ಸೆ. 9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ ಆರೂವರೆಗೆ ಈ ಧಾರಾವಾಹಿ ಪ್ರಸಾರವಾಗಲಿದೆ.
ಕಿರುತೆರೆ ತಾರೆ ವಿಜಯ್ ಸೂರ್ಯ . ನಾಯಕಿಯ ಪಾತ್ರದಲ್ಲಿ ಅರ್ಪಿತಾ ಮೋಹಿತೆ ಎಂಬ ಹೊಸ ನಟಿ ಕಾಣಿಸಿಕೊಂಡಿದ್ದಾರೆ. ಅಲ್ಲದೇ ಹಿರಿಯ ನಟಿ ಅಂಬಿಕಾ ಕೂಡ ಕಿರುತೆರೆಗೆ ಕಾಲಿಡುತ್ತಿದ್ದಾರೆ.
ದೀಪಶ್ರೀ, ರಾಘು ಶಿವಮೊಗ್ಗ, ಅಶೋಕ್ ಹೆಗ್ಡೆ ಸೇರಿದಂತೆ ಅನೇಕ ಕಿರಿ ಹಿರಿ ನಟನಟಿಯರು ಮನಸೂರೆಗೊಳ್ಳಲಿದ್ದಾರೆ.
ಈ ಕುರಿತು ಮಾತನಾಡಿರುವ ಕಲರ್ಸ್ ಕನ್ನಡದ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್, ಈ ಧಾರಾವಾಹಿಯ ಪ್ರತಿಯೊಂದು ಪಾತ್ರವೂ ವೀಕ್ಷಕರ ಮನಗೆಲ್ಲುವಂತಿದೆ. ಅತ್ಯಾಧುನಿಕ ಕ್ಯಾಮೆರಾಗಳನ್ನು ಬಳಸಿ ಚಿತ್ರೀಕರಣ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
Read also : Davangere theft case | ಸರಣಿ ಮನೆ ಕಳ್ಳತನ ಪ್ರಕರಣ : ಆರೋಪಿತರ ಬಂಧನ , 6.20.000 ಸ್ವತ್ತು ವಶಕ್ಕೆ
ಎರಡು ವಿಭಿನ್ನ ಕೌಟುಂಬಿಕ ಹಿನ್ನೆಲೆಗಳಿಂದ ಬಂದ ದೃಷ್ಟಿ ಎಂಬ ಹುಡುಗಿ ಹಾಗೂ ದತ್ತ ಶ್ರೀರಾಮ್ ಪಾಟೀಲ್ ಎಂಬ ಹುಡುಗನ ಬದುಕುಗಳು ಸಂಧಿಸಿದಾಗ ನಡೆಯುವ ಕುತೂಹಲಕರ ಕಥಾನಕವನ್ನು ‘ದೃಷ್ಟಿಬೊಟ್ಟು’ ಎಳೆಎಳೆಯಾಗಿ ಅನಾವರಣಗೊಳಿಸುತ್ತಾ ಹೋಗುತ್ತದೆ.
ಸೆ 9ರ ಸಂಜೆ 6:30ಕ್ಕೆ ತಪ್ಪದೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಮೊದಲ ಸಂಚಿಕೆಯನ್ನು ವೀಕ್ಷಿಸಬೇಕು. ಬಳಿಕ ಜಿಯೊ ಸಿನಿಮಾ ಆಪ್ ನಲ್ಲಿ ಕೂಡ ‘ದೃಷ್ಟಿಬೊಟ್ಟು’ ಧಾರಾವಾಹಿ ವೀಕ್ಷಿಸಬಹುದು.