ಬೆಂಗಳೂರು : ಹಿರಿಯ ನಿರ್ದೇಶಕ ಕೋಡ್ಲು ರಾಮಕೃಷ್ಣ ನಿರ್ದೇಶಿಸಿರುವ ಹಾಗೂ ಶ್ರೀಮತಿ ಭಾಗ್ಯ ಕೃಷ್ಣಮೂರ್ತಿ ಅವರ ಕಾದಂಬರಿ ಆಧಾರಿತ “ಶಾನುಭೋಗರ ಮಗಳು” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ “ಯು/ಎ” ಪ್ರಮಾಣ ಪತ್ರ ನೀಡಿ ಮೆಚ್ಚಗೆ ವ್ಯಕ್ತ ಪಡಿಸಿದೆ.
ಈ ಚಿತ್ರದಲ್ಲಿ ನಟ ಪ್ರಜ್ವಲ್ ದೇವರಾಜ್ ಪತ್ನಿ ರಾಗಿಣಿ ಪ್ರಜ್ವಲ್ “ಶಾನುಭೋಗರ ಮಗಳ” ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆಂಗಳೂರು, ಶ್ರೀರಂಗಪಟ್ಟಣ, ಚ
ನ್ನಪಟ್ಟಣ, ಚಿಕ್ಕಬಳ್ಳಾಪುರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.
ಟಿಪ್ಪುಸುಲ್ತಾನ್ ಪಾತ್ರದಲ್ಲಿ ಖ್ಯಾತ ನಟ ಕಿಶೋರ್ ಅಭಿನಯಿಸಿದ್ದಾರೆ. ರಾಗಿಣಿ ಪ್ರಜ್ವಲ್,ನಿರಂಜನ್ ಶೆಟ್ಟಿ, ರಮೇಶ್ ಭಟ್, ಶ್ರೀನಿವಾಸಮೂರ್ತಿ, ಸುಧಾ ಬೆಳವಾಡಿ, ವಾಣಿಶ್ರೀ, ಪದ್ಮಾ ವಾಸಂತಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಭುವನ್ ಫಿಲಂಸ್ ಲಾಂಛನದಲ್ಲಿ ಸಿ.ಎಂ.ನಾರಾಯಣ್ ನಿರ್ಮಿಸಿದ್ದು ಜೈ ಆನಂದ್ ಛಾಯಾಗ್ರಹಣ, ಬಿ.ಎಸ್ ಕೆಂಪರಾಜ್ ಅವರ ಸಂಕಲನ.
ವಸಂತ ಕುಲಕರ್ಣಿ ಕಲಾ ನಿರ್ದೇಶನ, ರಮೇಶ್ ಕೃಷ್ಣನ್ ಸಂಗೀತ, ಕರಣ್ ಮಯೂರ್ ನಿರ್ಮಾಣ ನಿರ್ವಹಣೆ ಹಾಗೂ ಎಸ್.ನಾಗರಾಜ್ ರಾವ್(ಹಾಸ್ನ), ರಘು ಕಲ್ಪತರು ಸಹ ನಿರ್ದೇಶನ, ಬಿ.ಎ.ಮಧು ಸಂಭಾಷಣೆ ಬರೆದಿದ್ದಾರೆ.