ದಾವಣಗೆರೆ (Davanagere): ಕುರಿ ಕಾಳಗವೂ ಒಂದು ಕ್ರೀಡೆಯಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಕುರಿ ಕಾಳಗ ಸ್ಪರ್ಧೆ ಆಯೋಜಿಸಲಾಗುತ್ತಿತ್ತು. ಆದರೆ ಈಗ ನಗರ ಪ್ರದೇಶಕ್ಕೂ ವ್ಯಾಪಿಸಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.
ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಲಿಂಗಾಪುರ ಗ್ರಾಮದಲ್ಲಿ ರಥೋತ್ಸವದ ಅಂಗವಾಗಿ ಆಯೋಜಿಸಿದ್ದ ಕುರಿ ಕಾಳಗಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕ್ರೀಡೆಗಳು ನಶಿಸಿ ಹೋಗುತ್ತಿವೆ. ಯುವಕರು ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಒತ್ತು ನೀಡಿ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕೆಂದು ಸಲಹೆ ನೀಡಿದರು.
ಜನಪದ ಕ್ರೀಡೆಗಳು, ಹಳ್ಳಿಯ ಸೊಗಡು ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಜೀವಂತವಾಗಿ ಉಳಿಸಿ ಬೆಳೆಸುವದರ ಜೊತೆಗೆ ಮುಂದಿನ ತಲೆಮಾರಿಗೂ ತಿಳಿಸಿಕೊಡಬೇಕಾಗಿದೆ. ಈ ನಿಟ್ಟಿನಲ್ಲಿ ಗ್ರಾಮದಲ್ಲಿ ಕುರಿ ಕಾಳಗ ಸ್ಪರ್ಧೆ ಆಯೋಜಿಸಿರುವುದು ಪ್ರಸ್ತುತವಾಗಿದೆ ಎಂದರು.
Read also : ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ : ಪ್ರಾಂಶುಪಾಲ ಡಾ.ಪ್ರಸಾದ್ ಬಿ.ಎಸ್.
ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ಎಸ್.ಕೆ.ಚಂದ್ರಣ್ಣ, ಪುಟ್ಟನಾಯ್ಕ್, ನಾಗೇಂದ್ರಪ್ಪ, ಗ್ರಾಮದ ಮುಖಂಡರಾದ ಮಂಜಣ್ಣ, ಕೆಂಚಪ್ಪ, ರಾಕೇಶ್ ಉಪಸ್ಥಿತರಿದ್ದರು.