ಹರಿಹರ (Davanagere ) : ಮಕ್ಕಳು ಉತ್ತಮ ಶಿಕ್ಷಣ ಹಾಗೂ ತಾಂತ್ರಿಕ ಶಿಕ್ಷಣ ಪಡೆಯುವುದಕ್ಕಾಗಿ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗಡೆಯವರು “ಸುಜ್ಞಾನ ನಿಧಿ” ಶಿಷ್ಯ ವೇತನ ನೀಡುತ್ತಿದ್ದು, ಇದರ ಪ್ರಯೋಜನವನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಪಡೆದುಕೊಳ್ಳಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಲಕ್ಷ್ಮಣ್ ಹೇಳಿದರು.
ನಗರದ ಬಿರ್ಲಾ ಕಲ್ಯಾಣ ಮಂಟಪದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಹರಿಹರ ವತಿಯಿಂದ 2024-25 ನೇ ಸಾಲಿನಲ್ಲಿ ಸುಜ್ಞಾನ ನಿಧಿ ಶಿಷ್ಯ ವೇತನ ಹಾಗೂ ಪತ್ರಕರ್ತರಿಗೆ ಅಭಿನಂದನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಡಾ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದೊಂದಿಗೆ ಹರಿಹರ ತಾಲೂಕಿನಾದ್ಯಂತ ಪ್ರಸ್ತುತ ಆರ್ಥಿಕ ವರ್ಷದಲ್ಲಿ 152 ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯವೇತನ ಪಾವತಿಸಲಾಗಿದೆ. ಈ ತನಕ 281 ವಿದ್ಯಾರ್ಥಿಗಳಿಗೆ 30.76 ಲಕ್ಷ ರೂಪಾಯಿ ಶಿಷ್ಯವೇತನ ವಿತರಿಸಲಾಗಿದೆ. ರಾಜ್ಯಾದಾದ್ಯಂತ ಒಟ್ಟು 97ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ 114.50 ಕೋಟಿ ಮೊತ್ತದ ಶಿಷ್ಯವೇತನ ವನ್ನು ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.
Read also : Davanagere | ಕೌಶಲ್ಯದಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ : ನ್ಯಾ.ರಾಜೇಶ್ವರಿ ಎನ್. ಹೆಗಡೆ
ಕ್ಷೇತ್ರ ಶಿಕ್ಷಣಾಧಿಕಾರಿ ಡಿ ದುರ್ಗಪ್ಪ ಅವರು ಮಕ್ಕಳಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನೀಡಲಾಗಿರುವ ಶಿಷ್ಯವೇತನ ಮಂಜೂರಾತಿ ಪತ್ರವನ್ನು ವಿತರಿಸಿದರು.
ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಬಾಬಣ್ಣ ಮಾತನಾಡಿ, ಧರ್ಮಸ್ಥಳ ಸಂಸ್ಥೆ ಕೇವಲ ಶಿಷ್ಯವೇತನ ನೀಡುವುದಲ್ಲದೆ. ಹಲವು ಯೋಜನೆಗಳನ್ನು ಬಡ ಜನರಿಗೆ ತಲುಪುವಂತೆ ಮಾಡುತ್ತಿದೆ ಎಂದರು.
ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ವತಿಯಿಂದ ಪತ್ರಕರ್ತರಿಗೆ ಸನ್ಮಾನಿಸಲಾಯಿತು.
ನಗರಸಭೆ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್, ಪಿಎಸ್‍ಐ ಶ್ರೀಪತಿ ಗಿನ್ನಿ, ತಾಲೂಕು ವಕೀಲರ ಸಂಘದ ಅಧ್ಯಕ್ಷ ಆನಂದ್ ಕುಮಾರ್, ಪತ್ರಕರ್ತರ ಸಂಘದ ಅಧ್ಯಕ್ಷೆ ಶಾಂಭವಿ, ತಾಲೂಕು ಯೋಜನಾಧಿಕಾರಿ ನಂದಿನಿ ಶೆಟ್, ಪೆÇೀಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.