Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಶ್ರೀ ದುರ್ಗಾಂಭಿಕ ದೇವಿ ಜಾತ್ರೆ -ಪ್ರಾಣಿಬಲಿ ನಿಷೇಧ:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
ತಾಜಾ ಸುದ್ದಿ

ಶ್ರೀ ದುರ್ಗಾಂಭಿಕ ದೇವಿ ಜಾತ್ರೆ -ಪ್ರಾಣಿಬಲಿ ನಿಷೇಧ:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

Dinamaana Kannada News
Last updated: January 14, 2026 3:11 pm
Dinamaana Kannada News
Share
District Collector G.M. Gangadharaswamy
SHARE

ದಾವಣಗೆರೆ, ಜ 14 : ಫೆಬ್ರವರಿ 22 ರಿಂದ ಆರಂಭವಾಗುವ ನಗರದೇವತೆ ಶ್ರೀ ದುರ್ಗಾಂಭಿಕ ದೇವಿ ಜಾತ್ರೆಯನ್ನು ವ್ಯವಸ್ಥಿತವಾಗಿ ಆಚರಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬುಧವಾರ ಶ್ರೀ ದುರ್ಗಾಂಭಿಕದೇವಿ ಜಾತ್ರೆ ಆಚರಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಗರದೇವತೆ ಶ್ರೀ ದುರ್ಗಾಂಭಿಕದೇವಿ ಜಾತ್ರೆಯು ನಡೆಯುವ ದಿನಗಳಂದು ದೇವಸ್ಥಾನದ ಸುತ್ತಮುತ್ತಲು ಸ್ವಚ್ಚತೆಯನ್ನು ಕಾಪಾಡಬೇಕು, ವಿದ್ಯುತ್ ಅಲಂಕಾರ ಇರುವುದರಿಂದ ವಿದ್ಯುತ್ ಅನ್ನು ನಿರಂತ ರವಾಗಿ ಪೂರೈಸಬೇಕು. ಅದರಲ್ಲಿಯೂ ರಾತ್ರಿ ವೇಳೆ ವಿದ್ಯುತ್ ಪೂರೈಕೆಯಲ್ಲಿ ತೊಂದರೆಯಾಗದಂತೆ ಕ್ರಮವಹಿಸಬೇಕು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಂಗಡಿಗಳನ್ನು ತೆರೆಯಬೇಕು ಎಂದು ಸೂಚನೆ ನೀಡಿದರು.

ನಗರದೇವತೆ ಶ್ರೀದುರ್ಗಾಂಭಿಕದೇವಿ ಜಾತ್ರೆಗೆ ಪ್ರತಿದಿನ ಅಂದಾಜು 2 ಲಕ್ಷ ಜನ ಬರುವ ಸಾಧ್ಯತೆ ಇರುವುದರಿಂದ ನಿರಂತರ ಕುಡಿಯುವ ನೀರು ಸರಬರಾಜು, ಶೌಚಾಲಯಗಳು, ಆರೋಗ್ಯ ತಪಾಸಣಾ ಕೇಂದ್ರ ಗಳು , ಅಂಬುಲೆನ್ಸ್ , ಅಗ್ನಿಶಾಮಕ ವಾಹನಗಳು ವ್ಯವಸ್ಥಿತವಾಗಿ ಇರುವಂತೆ ನೋಡಿಕೊಳ್ಳಬೇಕು. ದುರ್ಗಾಂಭಿಕ ದೇವಿಯ ರಥ ಸಂಚರಿಸುವ ಸ್ಥಳ ಮತ್ತು ದೇವಸ್ಥಾನದ ಸುತ್ತಮುತ್ತಲು ಗುಂಡಿಗಳನ್ನು ಮುಚ್ಚಬೇಕು. ಚರಂಡಿಗಳನ್ನು ಸ್ವಚ್ಚಗೊಳಿಸಬೇಕು, ಜನದಟ್ಟಣೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸುರಕ್ಷತೆ ಮತ್ತು ಸ್ವಚ್ಚತೆಗೆ ಹೆಚ್ಚು ಆದ್ಯತೆಯನ್ನು ನೀಡುವಂತೆ ತಿಳಿಸಿದರು.

ದೇವಸ್ಥಾನದ ಸುತ್ತಮುತ್ತಲು, ಪ್ರಸಾದ ತಯಾರಿಸುವ ಸ್ಥಳದಲ್ಲಿ, ದೇವಸ್ಥಾನದ ಪ್ರವೇಶ ದ್ವಾರಗಳಲ್ಲಿ, ಸಾಂಸ್ಕೃತಿಕ ಕಾರ್ಯಕ್ರಮಗಳು, ನಾಟಕ, ಸುಗಮ ಸಂಗೀತ, ಕ್ರೀಡೆಗಳು ಮತ್ತು ಅಗತ್ಯವಿರುವ ಸ್ಥಳದಲ್ಲಿ ಸಿಸಿಟಿವಿಗಳನ್ನು ಕಡ್ಡಾಯವಾಗಿ ಅಳವಡಿಸಿ ನಿಗಾವಹಿಸಬೇಕು ಎಂದರು.

Read also : ಎನ್.ಸಿ.ಸಿ ಯಲ್ಲಿ ಮಾಜಿ ಸೈನಿಕರಿಗೆ ಒಪ್ಪಂದದ ಮೇರೆಗೆ ಬೋಧಕರ ಹುದ್ದೆಗೆ ನೇಮಕಾತಿ

ಪ್ರಾಣಿ ಬಲಿ ನಿಷೇಧ : ಪ್ರಾಣಿಗಳ ಬಲಿಯನ್ನು ದೇವಸ್ಥಾನ ಮತ್ತು ದೇವಸ್ಥಾನದ ಸುತ್ತಮುತ್ತಲು ನಿಷೇಧಿಸಲಾಗಿದೆ. ಸಾರ್ವಜನಿಕರ ಹಿತದೃಷ್ಠಿಯಿಂದ ಹಿಲಿಯಂ ಗ್ಯಾಸ್ ಬಲೂನ್ ಗಳು ನಿಷೇಧ, ದೇವಸ್ಥಾನದ ಸುತ್ತಮುತ್ತಲು ಮದ್ಯ ಮಾರಾಟ ನಿಷೇದ, ಬೆತ್ತಲೆ ಮತ್ತು ಅರೆಬೆತ್ತಲೆ ಸೇವೆಯನ್ನು ನಿಷೇಧಿಸಲಾಗಿದೆ. ನಿಷೇದಿತ ವಸ್ತುಗಳ ಪ್ರದರ್ಶನವನ್ನು ನಿಷೇಧಿಸಲಾಗಿದೆ. ಒಂದು ವೇಳೆ ಕಾನೂನು ಮೀರಿ ನಿಷೇಧಿತ ಕಾರ್ಯಗಳನ್ನು ಮಾಡಿದಲ್ಲಿ ಅಂತಹವರ ವಿರುದ್ಧ ನಿರ್ಧಾಕ್ಷಿಣವಾಗಿ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದರು.

ಪ್ಲೇಕ್ಸ್ ಮತ್ತು ಬ್ಯಾನರ್ ಅಳವಡಿಕೆಗೆ ಕಡ್ಡಾಯವಾಗಿ ಅನುಮತಿಯನ್ನು ಪಡೆದು ಅಳವಡಿಸಬೇಕು ಇದಕ್ಕೆ ದೇವಸ್ಥಾನದ ಟ್ರಸ್ಟ್ ಸದಸ್ಯರುಗಳು ಸಹಕರಿಸಬೇಕು. ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಪೊಲೀಸ್ ಇಲಾಖಾ ವತಿಯಿಂದ ಮಾಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಶ್ರೀ ದುರ್ಗಾಂಭಿಕದೇವಿ ದೇವಸ್ಥಾನದ ಟ್ರಸ್ಟ್ ಸದಸ್ಯರುಗಳು ಉಪಸ್ಥಿತರಿದ್ದರು.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂಶ್ರೀ ದುರ್ಗಾಂಭಿಕ ದೇವಿ ಜಾತ್ರೆ
Share This Article
Twitter Email Copy Link Print
Previous Article Applications invited ಎನ್.ಸಿ.ಸಿ ಯಲ್ಲಿ ಮಾಜಿ ಸೈನಿಕರಿಗೆ ಒಪ್ಪಂದದ ಮೇರೆಗೆ ಬೋಧಕರ ಹುದ್ದೆಗೆ ನೇಮಕಾತಿ
Next Article Davanagere ಪತ್ತೆಯಾದ ಬಾಲಕಾರ್ಮಿಕರ ಬಗ್ಗೆ ನಿಗಾವಹಿಸಿ : ನ್ಯಾ.ಮಹಾವೀರ ಮ.ಕರೆಣ್ಣವರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

A short story | ಅಮ್ಮಚ್ಚು….

ಅಮೃತ ಬಡವರ ಮನೆಯ ಹುಡುಗಿಯಾದರೆ ಏನಂತೆ? ಇಂತಹ ಸೊಸೆ ನಮಗೆ ಸಿಗಲಿಲ್ಲವಲ್ಲ ಎಂದು ಹಲವರು ಹಲುಬಿದರು.  ಹಳ್ಳಿಯಲ್ಲಿ ಬೆಳೆದ ಹುಡುಗಿ.…

By Dinamaana Kannada News

Davangere | ನಗರದ ಮೂಲಸೌಕರ್ಯಕ್ಕೆ ಅನುದಾನ ಕಲ್ಪಿಸಲು ಸಿಎಂಗೆ ಮನವಿ : ಮೇಯರ್‌ 

ದಾವಣಗೆರೆ (Davangere) :  ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ವಿವಿಧ ಕಾಮಗಾರಿಗಳಿಗೆ ಅನುದಾನ ಮಂಜೂರು  ಮಾಡುವಂತೆ ಜಿಲ್ಲಾ…

By Dinamaana Kannada News

ಹರಿಹರ|ಅಧಿಕಾರಿಗಳ ಮುಂದೆ ಹಾಸ್ಟೆಲ್‍ನ ಅವ್ಯವಸ್ಥೆಯ ಅನಾವರಣ

ಹರಿಹರ : ನಗರದ ಜೆ.ಸಿ.ಬಡಾವಣೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್ ಗೆ ಬುಧವಾರ ಭೇಟಿ ನೀಡಿದ್ದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?