Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕಾಂಗ್ರೆಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತ : ಸಿಎಂ ಆಕ್ರೋಶ
ತಾಜಾ ಸುದ್ದಿ

ಕಾಂಗ್ರೆಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತ : ಸಿಎಂ ಆಕ್ರೋಶ

Dinamaana Kannada News
Last updated: March 21, 2024 5:38 pm
Dinamaana Kannada News
Share
cm siddaramaya
ಸಿಎಂ ಸಿದ್ದರಾಮಯ್ಯ
SHARE

ಬೆಂಗಳೂರು : ಚುನಾವಣಾ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮ್ಯಯ ಆಕ್ರೋಶ ವ್ಯಕ್ತಪಡಿಸಿದರು.

ನರೇಂದ್ರ ಮೋದಿ ಅವರ ಹಿಂದಿರುವ “ದುಷ್ಟ ಶಕ್ತಿ’’ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಲಯವನ್ನು ಕೂಡಾ ಬುಡಮೇಲು ಮಾಡಲು ಹೊರಟಿದೆ. ಇದನ್ನು ತಡೆಯುವ ಶಕ್ತಿ ಇರುವುದು ಚುನಾವಣೆಗೆ ಮಾತ್ರ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿ ಸರ್ವಾಧಿಕಾರಿ ನಡೆ

ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮ ಅಧಿಕಾರದ ದುರುಪಯೋಗ ಮಾತ್ರವಲ್ಲ ವಿರೋಧ ಪಕ್ಷಗಳನ್ನು ಹಣಿಯುವ ಸರ್ವಾಧಿಕಾರಿ ನಡೆಯಾಗಿದೆ. ಕಾನೂನುಬಾಹಿರವಾದ ಈ ಕ್ರಮವನ್ನು ತಕ್ಷಣ ಹಿಂದಕ್ಕೆ ಪಡೆಯುವಂತೆ ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ನಿರ್ದೆಶನ ನೀಡಬೇಕು ಎಂದು ಆಗ್ರಹಪಡಿಸಿದ್ದಾರೆ.

ಪಕ್ಷದ ಖಾತೆಯಲ್ಲಿರುವುದು ಪಕ್ಷದ ಅಭಿಮಾನಿಗಳ ಹಣ

ಚುನಾವಣಾ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶವಾಗಿದೆ. ನಮ್ಮ ಪಕ್ಷದ ಖಾತೆಯಲ್ಲಿರುವುದು ಪಕ್ಷದ ಅಭಿಮಾನಿಗಳಾದ ಸಾಮಾನ್ಯ ಜನರಿಂದ ಸಂಗ್ರಹವಾಗಿರುವ ಹಣ, ಅದರಲ್ಲಿರುವುದು ದೊಡ್ಡ ಉದ್ಯಮಪತಿಗಳದ್ದಲ್ಲ. ಹೀಗಿದ್ದರೂ ಯಾಕೆ ಇಂತಹ ಕ್ರಮ? ಪ್ರಶ್ನಿಸಿದ್ದಾರೆ.

ಆಯೋಗ ಮೌನವಾಗಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ

ಚುನಾವಣಾ ಬಾಂಡ್ ಗಳ ಮೂಲಕ ಉದ್ಯಮಿಗಳಿಂದ ಸಾವಿರಾರು ಕೋಟಿ ರೂಪಾಯಿಗಳನ್ನು ಸುಲಿಗೆ ಮಾಡಿ ತಮ್ಮ ಖಾತೆಗೆ ತುಂಬಿಸಿಕೊಂಡಿರುವ ಭಾರತೀಯ ಜನತಾ ಪಕ್ಷದ ಬಗ್ಗೆ ಚುನಾವಣಾ ಆಯೋಗ ಮೌನವಾಗಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಆಯೋಗ ತಕ್ಷಣ ಇದನ್ನು ಗಮನಿಸಿ ನಮ್ಮ ಪಕ್ಷಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಭಯದಿಂದ ಕಾಂಗ್ರೆಸ್‌ ಖಾತೆ ಸ್ಥಗಿತಗೊಳಿಸಿದೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯಲ್ಲಿ ಸೋಲಿನ ಭಯ ಹುಟ್ಟಿಕೊಂಡಿದೆ. ಸಾರ್ವಜನಿಕವಾಗಿ ಎದೆಯುಬ್ಬಿಸಿ ಏನೇ ಕೊಚ್ಚಿಕೊಂಡರೂ ಆಂತರ್ಯದಲ್ಲಿರುವ ಆತ್ಮಸಾಕ್ಷಿ ಸತ್ಯವನ್ನೇ ಹೇಳುತ್ತದೆ. 400 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಬಾಯಲ್ಲಿ ಹೇಳಿಕೊಂಡರೂ ವಾಸ್ತವದ ಸ್ಥಿತಿ ಏನೆನ್ನುವುದು ನರೇಂದ್ರ ಮೋದಿಗೆ ಗೊತ್ತಿದೆ. ಈ ಭಯದ ಕಾರಣದಿಂದಲೇ ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸುವ ಸೇಡಿನ ಕ್ರಮಕ್ಕೆ ಮುಂದಾಗಿದೆ ಎಂದು ಕಿಡಿಕಾರಿದರು.

“ಪ್ರಧಾನಿ ನರೇಂದ್ರಮೋದಿಯವರು ಒಂದು ಮುಖವಾಡ ಅಷ್ಟೆ, ಅದರ ಹಿಂದೆ ಸರ್ಕಾರವನ್ನು ಮನ್ನಡೆಸವ ಒಂದು “ದುಷ್ಟ ಶಕ್ತಿ’’ ಇದೆ ಎಂದು ನಮ್ಮ ನಾಯಕರಾಗಿರುವ ರಾಹುಲ್ ಗಾಂಧಿಯವರು ಹೇಳಿರುವುದು ಸರಿಯಾಗಿದೆ. ಈ “ದುಷ್ಟ ಶಕ್ತಿ’’ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಲಯವನ್ನು ಕೂಡಾ ಬುಡಮೇಲು ಮಾಡಲು ಹೊರಟಿದೆ. ಇದನ್ನು ತಡೆಯುವ ಶಕ್ತಿ ಇರುವುದು ಚುನಾವಣೆಗೆ ಮಾತ್ರ.

 

TAGGED:dinamaana.comdinamaana.com.davanagere newsShutdown of Congress bank accounts: CM outraged.ಕಾಂಗ್ರೆಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತ : ಸಿಎಂ ಆಕ್ರೋಶದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿ
Share This Article
Twitter Email Copy Link Print
Previous Article A meeting of BJP rebel leaders ಅಚ್ಚರಿ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸಲು ನಿರ್ಧಾರ
Next Article Researches of People's Development: Prof. Indumati ಜನಪರ ಅಭಿವೃದ್ಧಿಯ ಸಂಶೋಧನೆಗಳಾಗಲಿ : ಪ್ರೊ.ಇಂದುಮತಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ದೂರದೃಷ್ಟಿತ್ವ, ಯೋಜನೆಗಳು ಅಜರಾಮರ: ಸೈಯದ್ ಖಾಲಿದ್ ಅಹ್ಮದ್

ದಾವಣಗೆರೆ (Davanagere):  ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ದೇಶಕ್ಕೆ ತುಂಬಲಾರದ ನಷ್ಟ. ಭಾರತದ ಆರ್ಥಿಕತೆ ಉದಾರೀಕರಣಗೊಳಿಸಿ ಕೈಗೊಂಡ ಯೋಜನೆಗಳು…

By Dinamaana Kannada News

ಕೇಂದ್ರ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ : ಸಿಎಂ

ದಾವಣಗೆರೆ (Davanagere): ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಪರಿಸ್ಥಿತಿ ತಿಳಿದಿರಬೇಕು. ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ.…

By Dinamaana Kannada News

Davanagere | ಯುಪಿಐ ಮೂಲಕ ಖಾತೆಯಿಂದ ಹಣ ವರ್ಗಾವಣೆ, ರೂ.99 ಸಾವಿರಕ್ಕೆ ಬಡ್ಡಿ ಸಮೇತ ಪರಿಹಾರ ನೀಡಲು ಆದೇಶ

ದಾವಣಗೆರೆ ಅ.18  (Davanagere) : ನಗರದ ಎ.ವಿ.ಕೆ. ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ನಿಲ್ಯಕ್ಷದಿಂದ ಗ್ರಾಹಕರೊಬ್ಬರಿಗೆ ತೊಂದರೆಯಾಗಿದ್ದು,…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?