ದಾವಣಗೆರೆ (Davanagere): ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಾವಣಗೆರೆ ಜಿಲ್ಲಾ ಸಮಿತಿ ವತಿಯಿಂದ ಎಸ್ ಡಿ ಪಿ ಐ ಜಿಲ್ಲಾ ಕಚೇರಿ ಹತ್ತಿರ ಪ್ರಜಾಪ್ರಭುತ್ವ ನೆಲೆಗೊಳ್ಳಲಿ ಫ್ಯಾಸಿಸಂ ಕೊನೆಗೊಳ್ಳಲಿ ಎಂಬ ಧ್ಯೇಯ ವಾಕ್ಯದೊಂದಿಗೆ 76ನೇ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು.
ಜಿಲ್ಲಾಧ್ಯಕ್ಷರಾದ ಯಾಹಿಯ ಧ್ವಜಾರೋಹಣ ನೆರವೇರಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಉಪಾಧ್ಯಕ್ಷ ರಜ್ವಿ ರಿಯಾಜ್ ಅಹಮದ್, ಕಳೆದ 10 ವರ್ಷಗಳಿಂದ ದೇಶವು ಫ್ಯಾಸಿಸ್ಟರ ಕೈಗೆ ಸಿಲುಕಿ ನಲುಗಿ ಹೋಗಿದೆ. ಈ ದೇಶವನ್ನು ಎಸ್ಸಿ -ಎಸ್ಟಿ ಸಮೇತ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರು ಮತ್ತೊಮ್ಮೆ ದೊಡ್ಡಮಟ್ಟದ ಹೋರಾಟವನ್ನು ರೂಪಿಸಿ ಫ್ಯಾಸಿಸ್ಟರ ಸಂಕೋಲೆಯಿAದ ಬಿಡುಗಡೆಗೊಳಿಸಲು ಒಂದಾಗಿ ರಾಜಕೀಯ ಅಧಿಕಾರ ಪಡೆಯಬೇಕೆಂದು ಕರೆ ನೀಡಿದರು.
ಶ್ರೀ ಸ್ವಾಮಿ ವಿವೇಕಾನಂದ ಸ್ವಯಂ ಪ್ರೇರಿತ ರಕ್ತದಾನ ಕೇಂದ್ರ ಸಹಯೋಗದೊಂದಿಗೆ ಆಯೋಜಿಸಿರುವ ರಕ್ತದಾನ ಶಿಬಿರದಲ್ಲಿ ಸ್ವಯಂ ಪ್ರೇರಿತವಾಗಿ ಎಲ್ಲರೂ ಭಾಗಿಯಾಗಿ ರಕ್ತದಾನ ಮಾಡುವ ಮೂಲಕ ಶಿಬಿರವನ್ನು ಯಶಸ್ವಿಗೊಳಿಸಬೇಕಾಗಿ ಕರೆ ನೀಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ ಅರ್ ತಾಹೀರ್, ಜಿಲ್ಲಾ ಕಾರ್ಯದರ್ಶಿ ಮೊಹಮ್ಮದ್ ಮೋಹಸಿನ್ ಜಿಲ್ಲಾ ಕೋಶಾಧಿಕಾರಿ ಅಜರ್ ಬಾತಿ ಜಿಲ್ಲಾ ಸಮಿತಿ ಸದಸ್ಯರಾದ ಜಬಿ ಅಜಾದ್ ನಗರ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಏಜಾಜ್ ಅಹಮದ್, ಕಾರ್ಯದರ್ಶಿ ಇಸಾಕ್ ಅಹಮದ್ ಮತ್ತು ಪದಾಧಿಕಾರಿಗಳು ಕಾರ್ಯಕರ್ತರು ಹಾಗೂ ಸ್ಥಳೀಯರ ಮುಖಂಡರಾದ ಸೌದಿ ಮೊಹಮ್ಮದ ಸಾಬ್, ಝಬಿವುಲ್ಲಾ, ಹಸೆನ್ ಸಾಬ್ ಮತ್ತು ಇತರರು ಉಪಸ್ಥಿತರಿದ್ದರು.
Read also : ಜನಪ್ರತಿನಿಧಿಗಳು – ಸಮಾಜದ ನಡುವೆ ದೊಡ್ಡ ಕಂದಕ ಉಂಟಾಗಿದ್ದರಿಂದ ಸಮಸ್ಯೆ ಬಗೆಹರಿಯುತ್ತಿಲ್ಲ: ಜಿ. ಬಿ. ವಿನಯ್ ಕುಮಾರ್