ದಾವಣಗೆರೆ : ಜಿಲ್ಲೆಯಲ್ಲಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ ಬರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ನಡೆಸುವ ಒಟ್ಟು 22 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಈ ವಸತಿ ಶಾಲೆಗಳಲ್ಲಿ 2024-25ನೇ ಸಾಲಿಗೆ 7, 8 ಮತ್ತು 9ನೇ ತರಗತಿಗಳಲ್ಲಿ ಖಾಲಿಯಿರುವ ಸ್ಥಾನಗಳನ್ನು ಜಿಲ್ಲಾ ಹಂತದಲ್ಲಿ ಪ್ರವೇಶ ಪರೀಕ್ಷೆಯ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಖಾಲಿ ಇರುವ ಸ್ಥಾನಗಳ ವಿವರ ಇಂತಿವೆ
7ನೇ ತರಗತಿಯಲ್ಲಿ ಪ.ಜಾತಿ ಹೆಣ್ಣು-1, 8 ನೇ ತರಗತಿಯಲ್ಲಿ ಪ.ಜಾತಿ ಹೆಣ್ಣು-2. ಪ್ರವರ್ಗ-1 ರಲ್ಲಿ ಹೆಣ್ಣು-1, 2ಎ ರಲ್ಲಿ ಹೆಣ್ಣು-1, 3ಬಿ ಯಲ್ಲಿ ಗಂಡು-1 ಹಾಗೂ 9ನೇ ತರಗತಿಯಲ್ಲಿ ಪ.ಜಾತಿ ಹೆಣ್ಣು-1. ಪ.ವರ್ಗದಲ್ಲಿ ಹೆಣ್ಣು- 5 ಒಟ್ಟು 12 ಸ್ಥಾನಗಳು ಖಾಲಿಯಿರುತ್ತವೆ. ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಜಿಲ್ಲೆಯ ಯಾವುದೇ ಶಾಲೆಯಲ್ಲಿ ಸ್ಥಾನ ಲಭ್ಯವಿರುವುದಿಲ್ಲ.
ಮೇಲ್ಕಾಣಿಸಿದ ಖಾಲಿ ಸ್ಥಾನಗಳನ್ನು ಹೊರತು ಪಡಿಸಿ ಇತರೆ (ಲಿಂಗ, ಜಾತಿ) ಆಸಕ್ತಿಯಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದಲ್ಲಿ, ವಸತಿ ಶಾಲೆಗಳಲ್ಲಿ ಮುಂದಿನ ದಿನಗಳಲ್ಲಿ ಖಾಲಿಯಾಗಬಹುದಾದ ಸ್ಥಾನಗಳಿಗೆ ಹೆಚ್ಚುವರಿ ಆಯ್ಕೆಪಟ್ಟ (Waiting List) ಮೆರಿಟ್ ಮತ್ತು ಮೀಸಲಾತಿ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ದಾಖಲಾತಿಗೆ ಪರಿಗಣಿಸಲಾಗುವುದು. ಅರ್ಜಿಗಳನ್ನು ಸಮೀಪದ ಮೊರಾರ್ಜಿದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಶ್ರೀಮತಿ ಇಂದಿರಾಗಾಂಧಿ, ಡಾ.ಬಿ.ಆರ್ ಅಂಬೇಡ್ಕರ್, ಪ್ರತಿಭಾನ್ವಿತ ಹೆಣ್ಣುಮಕ್ಕಳ ವಸತಿ ಶಾಲೆಗಳಲ್ಲಿ ಮೇ.17 ರಿಂದ ಪಡೆಯಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮೇ.31 ರೊಳಗಾಗಿ ಜಂಟಿ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ, ದಾವಣಗೆರೆ ಇಲ್ಲಿ ಕಡ್ಡಾಯವಾಗಿ ಸಲ್ಲಿಸುವುದು. ಜೂನ್ 5ರಂದು ಮೊರಾರ್ಜಿದೇಸಾಯಿ ವಸತಿ ಶಾಲೆ ದೇವರಬೆಳಕೆರೆ, ಹರಿಹರ ತಾಲ್ಲೂಕು ಇಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ನಾಗರಾಜ.ಕೆ ತಿಳಿಸಿದ್ದಾರೆ.