ದಾವಣಗೆರೆ : ನಗರದ ಉತ್ತರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಗಮ ಸಂಚಾರ ನಿರ್ವಹಣೆಗಾಗಿ ಕೆ.ಆರ್.ಮಾರ್ಕೆಟ್, ಗಡಿಯಾರ ಕಂಬ, ವಿಜಯಲಕ್ಷ್ಮಿ ರಸ್ತೆ, ಕಾಳಿಕಾದೇವಿ ರಸ್ತೆ, ಕೆ.ಆರ್ ರಸ್ತೆ, ಅಕ್ತರ್ ರಾಜಾ ಸರ್ಕಲ್ ಸೇರಿದಂತೆ ವಿವಿಧ ಕಡೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ ಸಂಚಾರ ಮಾಡಿ ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಒಮ್ಮುಖ ರಸ್ತೆಗಳು, ವಾಹನಗಳ ಪಾರ್ಕಿಂಗ್ ಬಗ್ಗೆ, ಪಾದಚಾರಿ ಮಾರ್ಗಗಳಲ್ಲಿ ವಾಹನ ನಿಲುಗಡೆ ಬಗ್ಗೆ ಪರಿಶೀಲಿಸಿದರು.
Read also : ಕುರ್ಕಿ ಬಳಿ ಭದ್ರಾ ನಾಲೆ ಸೇತುವೆ ಕುಸಿತ: ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ
ಸುಗಮ ರಸ್ತೆ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಸೂಕ್ತ ಸೂಚನೆಗಳನ್ನು ನೀಡಿದರು. ಪುಟ್ ಪಾತ್ ಗಳಲ್ಲಿ ವಾಹನ ನಿಲುಗಡೆ ಹಾಗೂ ರಸ್ತೆ ಸಂಚಾರಕ್ಕೆ ಅಡ್ಡಿಯಾಗುವಂತೆ ವಾಹನಗಳನ್ನು ನಿಲ್ಲಿಸದಂತೆ ಕ್ರಮ ಕೈಗೊಳ್ಳುವ ಬಗ್ಗೆ ಸಂಚಾರ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.
ಉತ್ತರ ಸಂಚಾರ ಪೊಲೀಸ್ ಠಾಣೆಯ ಪಿಎಸ್ಐಗಳಾ ಮಹಾದೇವ ಭತ್ತೆ, ಜಯಶೀಲ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.