ದಾವಣಗೆರೆ (DAVANAGERE) : ಕ್ರೀಡಾಪಟುಗಳು ಊಟದ ವಿಷಯವಾಗಿ ಧರಣಿ ನಡೆಸಿದ ಹಿನ್ನಲೆಯಲ್ಲಿ ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ ಅವರು ವಸತಿ ನಿಯಲಯಕ್ಕೆ ಭೇಟಿ ನೀಡಿ ಕ್ರೀಡಾಪಟುಗಳ ಊಟದ ವ್ಯವಸ್ಥೆ ಹೇಗಿದೆ ಎಂದು ಪರಿಶೀಲಿಸಿ, ಕ್ರೀಡಾಪಟುಗಳ ಜೊತೆ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ 160ಕ್ಕೂ ಹೆಚ್ಚು ಕ್ರೀಡಾಪಟುಗಳು ವಸತಿ ನಿಲಯದಲ್ಲಿ ಮಾಂಸಾಹಾರದ ಊಟ, ಹಣ್ಣು ,ಡ್ರೈ ಫ್ರೂಟ್ಸ್ ವ್ಯವಸ್ಥೆ ಸರಿಯಾಗಿಲ್ಲ ಎಂದು ಸಮಸ್ಯೆಗಳನ್ನು ಹೇಳಿಕೊಂಡರು.
ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷರು ಕೆಲವೇ ದಿನಗಳಲ್ಲಿ ಅಧಿಕಾರಿಗಳ ಜೊತೆ ಸಭೆ ಕರೆದು ಎಲ್ಲಾ ಸಮಸ್ಯೆಗಳನ್ನು ಜಿಲ್ಲಾ ಸಚಿವರಾ ಎಸ್ ಎಸ್ ಮಲ್ಲಿಕಾರ್ಜುನ್ ಹಾಗೂ ಶಾಮನೂರು ಶಂಕರಪ್ಪ ಅವರ ಗಮನಕ್ಕೆ ತಂದು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು.
ಜಿಲ್ಲಾ ಕ್ರೀಡಾಪಟುಗಳ ಸಂಘದ ಕಾರ್ಯದರ್ಶಿ ಜಯಪ್ರಕಾಶ್ ಗೌಡ ಹಾಗೂ ಕೆಟಿಜಿ ನಗರದ ಸರ್ಕಲ್ ಇನ್ಸ್ಪೆಕ್ಟರ್ ಸುನಿಲ್ ಕುಮಾರ್ , ಯುವರಾಜ ಇತರರು ಇದ್ದರು.