Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ–ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ,ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
ತಾಜಾ ಸುದ್ದಿ

ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ–ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ,ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

Dinamaana Kannada News
Last updated: February 16, 2026 2:23 pm
Dinamaana Kannada News
Share
Davanagere
SHARE

ದಾವಣಗೆರೆ, ಫೆ.16 : ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆಯು ಫೆ. 22 ರಿಂದ 25 ರವರೆಗೆ 3 ದಿನಗಳ ಕಾಲ ನಡೆಯಲಿದ್ದು,  ಭಕ್ತಿಪೂರಕವಾಗಿ ವಿಜೃಂಭಣೆಯಿಂದ ನಡೆಯಲು ಕ್ರಮವಹಿಸಲಾಗಿದೆ, ಜಾತ್ರೆ ಸಮಯದಲ್ಲಿ ದೇವಸ್ಥಾನದ ಸುತ್ತಮುತ್ತಲು ಪ್ರಾಣಿಬಲಿಯನ್ನು ನಿಷೇಧಿಸಲಾಗಿದೆ. ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗ್ರತೆಯಾಗಿ ಮದ್ಯಪಾನವನ್ನು ನಿಷೇದಿಸಲಾಗಿದೆ. ಸಾರ್ವಜನಿಕರು ಸಹಕಾರ ನೀಡುವಂತೆ ಹಾಗೂ ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯವೆಂದು  ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ತಿಳಿಸಿದರು.

ಫೆ.16  ರಂದು ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಮಹೋತ್ಸವದ ಅಂಗವಾಗಿ ದೇವಸ್ಥಾನದ ಬಳಿ ಏರ್ಪಡಿಸಿದ್ದ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಚಿವರ ಅಧ್ಯಕ್ಷತೆಯಲ್ಲಿ ಮತ್ತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಒಟ್ಟು ಐದು ಸಭೆಗಳನ್ನು ನಡೆಸಲಾಗಿದೆ.  ಕಳೆದ ಜಾತ್ರೆಯಲ್ಲಿನ ಅನುಭವಗಳ ಆಧಾರದ ಮೇಲೆ ಪೊಲೀಸ್ ಅಧಿಕಾರಿಗಳು ಮತ್ತು ಧರ್ಮದರ್ಶಿಗಳು ನೀಡಿದ ಸಲಹೆಗಳನ್ನು ಈ ಬಾರಿ ಜಾರಿಗೆ ತರಲಾಗುತ್ತಿದೆ. ದೇವಸ್ಥಾನದ ಸುತ್ತಮುತ್ತಲ 500 ಮೀಟರ್ ವ್ಯಾಪ್ತಿಯಲ್ಲಿ ಸುಮಾರು ವರ್ಷಗಳಿಂದ ಸ್ವಚ್ಛಗೊಳಿಸದ ಚರಂಡಿಗಳನ್ನು ಸ್ವಚ್ಛಗೊಳಿಸಲಾಗಿದೆ.  ಈ ಪ್ರಕ್ರಿಯೆಯಲ್ಲಿ ಸುಮಾರು 100 ಟ್ರಕ್ ಲೋಡ್ಗಳಷ್ಟು ಹೂಳನ್ನು ಹೊರ ತೆಗೆಯಲಾಗಿದೆ. ಬಾರ್ಲೈನ್ ರಸ್ತೆ, ರೇಣುಕಾ ಮಂದಿರ ರಸ್ತೆ ಮತ್ತು ಡಬಲ್ ರೋಡ್ಗಳಲ್ಲಿ ಚರಂಡಿ ನೀರು ಉಕ್ಕಿ ಹರಿಯದಂತೆ ಕ್ರಮ ಕೈಗೊಂಡು ರಸ್ತೆಗಳನ್ನು ಸರಿಪಡಿಸಲಾಗಿದೆ ಎಂದು ತಿಳಿಸಿದರು.

ಬೆಸ್ಕಾಂ ಲೈನ್ಗಳಲ್ಲಿನ ತೊಂದರೆಗಳನ್ನು ಸರಿಪಡಿಸಲಾಗಿದೆ ಮತ್ತು ತೆರೆದಿದ್ದ ಟ್ರಾನ್ಸ್ಫಾರ್ಮರ್ಗಳನ್ನು ಮುಚ್ಚಿ ರಕ್ಷಣೆ ಒದಗಿಸಲಾಗಿದೆ. ಆರೋಗ್ಯ ಇಲಾಖೆಯ ಮೂಲಕ ಸೊಳ್ಳೆಗಳ ಕಾಟವಿಲ್ಲದಂತೆ ಮತ್ತು ನೀರು ನಿಲ್ಲದಂತೆ ಕ್ರಮ ವಹಿಸಲಾಗಿದೆ.  ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸೇರಿ ಸುಗಮ ಸಂಚಾರಕ್ಕಾಗಿ ಎರಡು ಬಾರಿ ಸ್ಥಳ ಪರಿಶೀಲನೆ ನಡೆಸಲಾಗಿದೆ.

ದೇವಸ್ಥಾನದ ಸುತ್ತಮುತ್ತಲು ಇರುವ ದೇವಸ್ಥಾನಗಳು ಮತ್ತು  ಕಳೆದ ಬಾರಿ ಬಿಟ್ಟುಹೋಗಿದ್ದ ದೇವಸ್ಥಾನಗಳಿಗೆ ಬಣ್ಣ ಬಳಿಯುವ ಕೆಲಸ ನಡೆಯುತ್ತಿದ್ದು, ಎರಡು ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಶಿವಾಜಿ ಮಹಾರಾಜರು ಮತ್ತು ಸಂಗೊಳ್ಳಿ ರಾಯಣ್ಣ ನವರಂತಹ ಮಹನೀಯರ ಪ್ರತಿಮೆಗಳನ್ನು ಜಲಪ್ರೋಕ್ಷಣೆ ಮಾಡಿ ಸ್ವಚ್ಛಗೊಳಿಸಲು ಆದೇಶಿಸಲಾಗಿದೆ, ಸ್ವಚ್ಛತಾ ಕಾರ್ಯ ಮುಗಿದ ನಂತರ ಪ್ರಮುಖ ರಸ್ತೆ ಮತ್ತು ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲು ವ್ಯವಸ್ಥೆ ಮಾಡಲಾಗಿದೆ.

ಸುರಕ್ಷತಾ ದೃಷ್ಠಿಯಿಂದ ದುರ್ಗಾಂಭ ದೇವಸ್ಥಾನದ ಸುತ್ತಮುತ್ತಲು ಉಪವಿಭಾಗಾಧಿಕಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು, ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆಯ ಉಪ ನಿರ್ದೇಶಕರು ಇವರುಗಳನ್ನ ನೊಡೆಲ್ ಅಧಿಕಾರಿಗಳು, ಚೌಡೇಶ್ವರಿ ದೇವಸ್ಥಾನ ಮತ್ತು ವಿನೋಬ್ ನಗರ ಸುತ್ತಮುತ್ತಲು  ನೋಡಲ್ ಅಧಿಕಾರಿಗಳು ಮತ್ತು  ಕಾಯಿ ಪೇಟೆ ಮತ್ತು ವಸಂತ ಟಾಕೀಸ್ ಪ್ರದೇಶಗಳಿಗೆ ಮಹಾನಗರ ಪಾಲಿಕೆ ಆಯುಕ್ತರು ರವರನ್ನು ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದು, ಸದರಿ ಅಧಿಕಾರಿಗಳು ಯಾವುದೇ ಅಹಿತಕರ ಘಟನೆ ನಡೆಯದಂತೆ ಸುರಕ್ಷತಾ ಕ್ರಮಗಳನ್ನು ವಹಿಸುವರು ಎಂದು ತಿಳಿಸಿದರು.

Read also : ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಮಾತನಾಡಿ ದುರ್ಗಾಂಭಿಕ ದೇವಸ್ಥಾನದ ಸುತ್ತಮುತ್ತಲ ದೇವಸ್ಥಾನಗಳಿಗೆ ಸುಮಾರು 51 ಲಕ್ಷ ವೆಚ್ಚದಲ್ಲಿ ಬಣ್ಣವನ್ನು ಬಳಿಯಲಾಗುತ್ತಿದೆ, ದೇವಸ್ಥಾನದ ಬಳಿ 24 ಗಂಟೆ ಕುಡಿಯುವ ನೀರು , 30  ಸ್ವಚ್ಚತಾ ಸಿಬ್ಬಂದಿಗಳ ನೇಮಕ, ಉರುಳು ಸೇವೆ ಮಾಡಲು ಮರಳು,  ಸ್ನಾನ ಮಾಡಲು 20 ನಳಗಳ ವ್ಯವಸ್ಥೆ ಮಾಡಲಾಗಿದ್ದು ಇವುಗಳಿಗೆ 11 ಲಕ್ಷ ವೆಚ್ಚ ಮಾಡಲಾಗುತ್ತಿದೆ. ಚೌಡೇಶ್ವರಿನಗರ, ವಿನೋಬ ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಮತ್ತು ಒಳಚರಂಡಿ ವ್ಯವಸ್ಥೆಯನ್ನು ದುರಸ್ತಿ ಮಾಡಲಾಗಿದೆ. ದೇವಸ್ಥಾನದ ಸುತ್ತಮುತ್ತಲು, ಸಂಗೊಳ್ಳಿ ರಾಯಣ್ಣ ಸರ್ಕಲ್, ಗುಂಡಿ ಸರ್ಕಲ್, ದಾವಣಗೆರೆ ನಗರಕ್ಕೆ ಪ್ರವೇಶಿಸುವ ರಸ್ತೆಗಳು, ಮಹಾನಗರ ಪಾಲಿಕೆ ಕಚೇರಿ, ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್ ಗಳಲ್ಲಿ ದೀಪಾಲಂಕಾರ ಮಾಡಲಾಗಿದೆ , ದೇವಸ್ಥಾನದ ಸುತ್ತಮುತ್ತಲು ಪಾರ್ಕಿಂಗ್ ಸ್ಥಳದಲ್ಲಿ ಶೌಚಾಲಯಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಹೆಚ್.ಟಿ ಅವರು ಮಾತನಾಡಿ, ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಪ್ರಯುಕ್ತ ದೇವಸ್ಥಾನದ ಸುತ್ತಮುತ್ತಲು ಸಿಸಿಟಿವಿಗಳನ್ನು ಅಳವಡಿಸಲಾಗಿದೆ, ಸರಗಳ್ಳತನ, ಮಹಿಳೆಯರು ಮತ್ತು ಮಕ್ಕಳ ಸುರಕ್ಷತಾ ದೃಷ್ಠಿಯಿಂದ ಅಗತ್ಯ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ, ದೇವಸ್ಥಾನದ ಪಕ್ಕದಲ್ಲಿ ತಾತ್ಕಾಲಿಕ ಪೊಲೀಸ್ ಠಾಣೆಯನ್ನು ತೆರೆಯಲಾಗಿದೆ.

ಭಕ್ತಾಧಿಗಳಿಗೆ ಹಾಗೂ ವಿವಿಐಪಿಗಳಿಗೆ ದರ್ಶನಕ್ಕೆ ಅನುಕೂಲಕರವಾಗಲು ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ. ಸುಗಮ ಸಂಚಾರ ನಡೆಸಲು ಪೊಲೀಸ್ ವ್ಯವಸ್ಥೆ ಮಾಡಲಾಗಿದೆ. ಬ್ಯಾನರ್ ಮತ್ತು ಬಂಟಿಂಗ್ ಅಳವಡಿಸಲು ಕಡ್ಡಾಯವಾಗಿ ಅನುಮತಿ ಪಡೆದು ಅಳವಡಿಸಬೇಕು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ದ ಕ್ರಮಕೈಗೊಳ್ಳಲಾಗುವುದು ಮತ್ತು ಪ್ರಜೋದನಕಾರಿ ಮತ್ತು ದೇವಸ್ಥಾನಕ್ಕೆ ಸಂಬಂಧಿಸಿದ ಪ್ರಾಣಿಬಲಿ ಕುರಿತು ಹಳೆಯ  ಛಾಯಾಚಿತ್ರಗಳನ್ನು ಅಪ್ ಲೋಡ್ ಮಾಡಬಾರದು, ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೆಲಸಗಳನ್ನು ಮಾಡಬಾರದು ಎಂದು ತಿಳಿಸಿದರು.

ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಶ್ರೀ ದುರ್ಗಾಂಭಿಕಾ ದೇವಿ ಜಾತ್ರೆ ಸಮಿತಿಯ ಸದಸ್ಯರುಗಳು,  ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ
Share This Article
Twitter Email Copy Link Print
Previous Article District Collector G.M. Gangadharaswamy ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ|ವೈಚಾರಿಕವಾಗಿ ಆಚರಣೆ ಮಾಡೋಣ : ಡಾ.ಬಸವಪ್ರಭು ಸ್ವಾಮೀಜಿ

ದಾವಣಗೆರೆ : ಹಬ್ಬಗಳನ್ನು ಆಚರಣೆ ಮಾಡೋಣ. ಆದರೆ ಅವುಗಳನ್ನು ವೈಚಾರಿಕವಾಗಿ, ವೈಜ್ಞಾನಿಕವಾಗಿ, ಅರ್ಥಪೂರ್ಣವಾಗಿ ಆಚರಣೆ ಮಾಡೋಣ ಎಂದು ವಿರಕ್ತಮಠದ ಡಾ.ಬಸವಪ್ರಭು…

By Dinamaana Kannada News

ವಿಶ್ವ ಬೈಸಿಕಲ್ ದಿನಾಚರಣೆ | ಸೈಕಲ್ ಬಳಸುವುದರಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ  : ಉಮಾ ಪ್ರಶಾಂತ್ 

ದಾವಣಗೆರೆ (Davanagere) : ನಿತ್ಯ ಸೈಕಲ್ ಬಳಸುವುದರಿಂದ ಉತ್ತಮ ಪರಿಸರ, ಉತ್ತಮ ಆರೋಗ್ಯ ಪಡೆಯಲು ಸಾಧ್ಯ ಎಂದು ಎಸ್‌ಪಿ ಉಮಾ ಪ್ರಶಾಂತ್ ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಪೊಲೀಸ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆಯ ಬೈಸಿಕಲ್ ಕ್ಲಬ್ ಸಹಯೋಗದಲ್ಲಿ ಕ್ವಿಟ್ ಇಂಡಿಯಾ ಕಾರ್ಯಕ್ರಮದಡಿ ವಿಶ್ವ ಬೈಸಿಕಲ್ ದಿನಾಚರಣೆ ಅಂಗವಾಗಿ ಆಯೋಜಿಸಿದ ತಿರಂಗ್ ಸೈಕಲ್ ರ‍್ಯಾಲಿಯ ಸಮಾರೋಪದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಈಗ ಒಂದೊAದು ಮನೆಯಲ್ಲಿ 2 ರಿಂದ 3 ದ್ವಿಚಕ್ರ ವಾಹನಗಳಿರುತ್ತವೆ. ವಾಹನಗಳ ಹೊಗೆಯಿಂದ ಪರಿಸರ ಹಾಳಾಗುತ್ತದೆ. ಆದ್ದರಿಂದ ವಾರದಲ್ಲಿ ಒಂದು ದಿನವಾದರೂ ಸಹಾ ಸೈಕಲ್ ಬಳಸಿರಿ. ಚಿಕ್ಕ ವಯಸ್ಸಿನಿಂದಲೇ ಮಕ್ಕಳಿಗೆ ಸೈಕಲ್ ಕಲಿಸಬೇಕು. ಕ್ವಿಟ್ ಇಂಡಿಯಾ ಕಾರ್ಯಕ್ರಮದಡಿ ಅತೀ ಕಡಿಮೆ ಅವಧಿಯಲ್ಲಿ ಇಂತಹ ಸೈಕಲ್ ರ‍್ಯಾಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚೆಚ್ಚು ಸೈಕಲ್ ರ‍್ಯಾಲಿ ಮೂಲಕ ಜಾಗೃತಿ ಕಾರ್ಯಕ್ರಮಗಳು ನಡೆಯಲಿ ಎಂದರು. ಸಂಚಾರಿ ಪೊಲೀಸ್ ವೃತ್ತ ನಿರೀಕ್ಷಕ ಸಿಪಿಐ ನಲವಾಗಲು ಮಂಜುನಾಥ ಹೈಸ್ಕೂಲ್ ಮೈದಾನದಲ್ಲಿ ಸೈಕಲ್ ರ‍್ಯಾಲಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಡಾ.ಎಂ.ಬಿ.ಅಶ್ವಥ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ  ಶ್ರೀಹರ್ಷ, ಪೊಲೀಸ್ ಇಲಾಖೆಯ ಅಧಿಕಾರಿ ಎಚ್.ಬಿ.ಸೋಮಶೇಖರಪ್ಪ, ಪೊಲೀಸ್ ಇನ್ಸ್ಪೆಕ್ಟರ್ ಮಲ್ಲಮ್ಮ ಚೌಬೆ, ಸಂಚಾರಿ ಪೊಲೀಸ್ ಮಹೇಂದ್ರ, ದಾವಣಗೆರೆ ಬೈಸಿಕಲ್ ಕ್ಲಬ್ ಅಧ್ಯಕ್ಷ ರಾಜೇಂದ್ರ ಪ್ರಸಾದ, ಕಾರ್ಯದರ್ಶಿ ಕೆ.ಎಸ್.ಮಹೇಶ, ಡಾ.ಸುರೇಶ, ಡಾ.ರಾಘವೇಂದ್ರ, ಡಾ.ಮಾಲತೇಶ, ಡಾ.ಸಂತೋಷ, ಕಿರಣ್, ನಾಗರಾಜ, ಹೇಮಂತ್ ಆರಾಧ್ಯ, ಹಿಮಾಲಯನ್ ಅಡ್ವೆಂಚರ್ ಅಕಾಡೆಮಿಯ ಎನ್.ಕೆ.ಕೊಟ್ರೇಶ, ಹಾಗೂ ಪದಾಧಿಕಾರಿಗಳು ಇದ್ದರು.

By Dinamaana Kannada News

ಒಳ ಮೀಸಲಾತಿ ಜಾರಿಗೆ ಡಿ.16 ರಂದು ಬೆಳಗಾವಿಯಲ್ಲಿ ಹಕ್ಕೊತ್ತಾಯ ಸಮಾವೇಶ

ದಾವಣಗೆರೆ (Davanagere):  ಸುಪ್ರೀಂಕೋರ್ಟ್ ನ ತೀರ್ಪಿನಂತೆ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಲು ಡಿ. 16 ರಂದು ಬೆಳಗಾವಿಯಲ್ಲಿ ಹಕ್ಕೊತ್ತಾಯ ಸಮಾವೇಶಕ್ಕೆ…

By Dinamaana Kannada News

You Might Also Like

District Collector G.M. Gangadharaswamy
ತಾಜಾ ಸುದ್ದಿ

ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
Davanagere
ತಾಜಾ ಸುದ್ದಿ

ಪಾರದರ್ಶಕ ಆಡಳಿತ ನೀಡುವುದೇ ನನ್ನ ಧ್ಯೇಯ : ಶಾಸಕ ಬಿ ದೇವೇಂದ್ರಪ್ಪ

By Dinamaana Kannada News
Davanagere
ತಾಜಾ ಸುದ್ದಿ

ಜಯಂತಿ ಆಚರಣೆ ಮಾಡದೇ ಅಗೌರವ, ಬಂಜಾರ ಸಂಘದಿಂದ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿ

ಪೌರ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ:ಸೂಕ್ತ ಕಾನೂನು ರಕ್ಷಣೆ ನೀಡಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?