Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಂತ್ರಜ್ಞಾನ > ಎಸ್.ಎಸ್.ಎಲ್.ಸಿ, ಪಿಯುಸಿ ಫಲಿತಾಂಶ ಸುಧಾರಣೆಗೆ ಕ್ರಮ : ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
ತಂತ್ರಜ್ಞಾನ

ಎಸ್.ಎಸ್.ಎಲ್.ಸಿ, ಪಿಯುಸಿ ಫಲಿತಾಂಶ ಸುಧಾರಣೆಗೆ ಕ್ರಮ : ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

Dinamaana Kannada News
Last updated: February 19, 2026 2:28 pm
Dinamaana Kannada News
Share
District Collector G.M. Gangadharaswamy
SHARE

ದಾವಣಗೆರೆ ಫೆ.19:  ಜಿಲ್ಲೆಯಲ್ಲಿ ಮುಂಬರುವ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯವನ್ನು ನಿವಾರಿಸಿ ಫಲಿತಾಂಶ ಸುಧಾರಣೆ ಮಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.

ಗುರುವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,   ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯನ್ನು ಜಿಲ್ಲಾಡಳಿತದಿಂದ ಬಿಗಿ ಬಂದೋಬಸ್ತ್, ಸಿಸಿಟಿವಿ ಲೈವ್ ವೆಬ್‌ ಕಾಸ್ಟಿಂಗ್ ಮೂಲಕ ನಡೆಸಲಾಗುತ್ತದೆ. ಜಿಲ್ಲೆಯಲ್ಲಿರುವ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಅಲ್ಲಿ ಹೆಚ್ಚಿನ ಭದ್ರತೆ ಒದಗಿಸಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಖಜಾನೆಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಅತ್ಯಂತ ಸುರಕ್ಷಿತವಾಗಿ ಇರಿಸಲು ಸಿಸಿಟಿವಿ ಸೇರಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಜಿಲ್ಲೆಯ ಪ್ರತಿ ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಯಲ್ಲೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಪರೀಕ್ಷಾ ಚಟುವಟಿಕೆಗಳ ಲೈವ್ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ.  ಸ್ಮಾರ್ಟ್ ಸಿಟಿ ಯೋಜನೆಯಡಿ ಸ್ಥಾಪಿಸಲಾಗಿರುವ ಕಮಾಂಡ್ ಸೆಂಟರ್ ಮೂಲಕ ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳು ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲಿ ನಡೆಯುವ ಚಟುವಟಿಕೆಗಳನ್ನು ನೇರವಾಗಿ ವೀಕ್ಷಿಸಲಿದ್ದಾರೆ.

ಫ್ಲೆಕ್ಸ್ ಹಾವಳಿ ವಿರುದ್ಧ ಕಠಿಣ ಕ್ರಮ: ದುರ್ಗಾಂಬಿಕಾ ಜಾತ್ರೆಯ ಸಂದರ್ಭದಲ್ಲಿ ನಗರದ ಪರಿಸರ ಮಾಲಿನ್ಯಕ್ಕೆ ಧಕ್ಕೆ ತರುವಂತೆ ಅನಧಿಕೃತ ಫ್ಲೆಕ್ಸ್ ಅಳವಡಿಸುವವರ ವಿರುದ್ಧ ‘ಡಿ ಫಿಗರ್‌ಮೆಂಟ್ ಆಕ್ಟ್’ ಅಡಿಯಲ್ಲಿ ನಿರ್ದಾಕ್ಷಿಣ್ಯವಾಗಿ ಎಫ್‌ಐಆರ್  ದಾಖಲಿಸಲಾಗುವುದು. ಜೊತೆಗೆ     ಪ್ಲಾಸ್ಟಿಕ್ ಫ್ಲೆಕ್ಸ್ ಮುದ್ರಿಸುವ ಪ್ರಿಂರ‍್ಸ್ಗಳ ಮೇಲೆಯೂ ಕಠಿಣ ಕ್ರಮ ಜರುಗಿಸಲಾಗುವುದು. ಜಾತ್ರೆಯಲ್ಲಿ ಪ್ಲಾಸ್ಟಿಕ್ ಮುಕ್ತ ವಾತಾವರಣ ನಿರ್ಮಿಸಲು ಸಾರ್ವಜನಿಕರು ಸಹಕರಿಸಬೇಕು ಎಂದರು.

ಕಂದಾಯ ಹಕ್ಕು ಪತ್ರ ಮತ್ತು ಪಾವತಿ ಆಂದೋಲನ: ಜಿಲ್ಲೆಯಲ್ಲಿ 298 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲಾಗಿದ್ದು, ಈಗಾಗಲೇ 12,000ಕ್ಕೂ ಹೆಚ್ಚು ಹಕ್ಕು ಪತ್ರಗಳನ್ನು ವಿತರಿಸಲಾಗಿದ್ದು, ಬಾಕಿ ಇರುವವರು ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಬಹುದು. ಅಲ್ಲದೆ, ಮೃತಪಟ್ಟ ರೈತರ ಹೆಸರಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ಸುಮಾರು 24000 ಪೌತಿ ಖಾತೆಗಳನ್ನು ಬದಲಾಯಿಸಲಾಗಿದ್ದು, ಪೌತಿ ಆಂದೋಲನವನ್ನು ಸಹ ಹಮ್ಮಿಕೊಳ್ಳಲಾಗಿದೆ. ಸರ್ಕಾರಿ ಜಮೀನು ಮಂಜೂರು ಆಗಿ ಪೋಡಿ ಆಗದೇ ಪ್ರತ್ಯೇಕ ಪಹಣಿ ಬರದೇ ಇರುವುದರಿಂದ ಅಂತಹವುಗಳನ್ನು ಗೈರು ವಿಲೇ ಕಡತವನ್ನು ಮಾಡಲಾಗಿದ್ದು, ಸುಮಾರು 4000 ಜನರಿಗೆ ಈ ಗೈರು ವಿಲೇ ಕಡತವನ್ನು ನೀಡಲಾಗಿದೆ. ರಾಜ್ಯದಲ್ಲಿ ನಮ್ಮ ಜಿಲ್ಲೆಯೂ 3ನೇ ಸ್ಥಾನವನ್ನು ಹೊಂದಲಾಗಿದೆ ಎಂದರು.

2026ರ ಡಿಜಿಟಲ್ ಜನಗಣತಿ: 2026ರ ಜನಗಣತಿ ಪ್ರಕ್ರಿಯೆ ಏಪ್ರಿಲ್ 1 ರಿಂದ ಆರಂಭವಾಗಲಿದ್ದು, ಈ ಬಾರಿ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ ನಡೆಯಲಿದೆ. ಸಾರ್ವಜನಿಕರು ಆನ್‌ಲೈನ್ ಮೂಲಕ ಸ್ವಯಂ ದೃಢೀಕರಣ ಮಾಡಿಕೊಳ್ಳಲು ಅವಕಾಶವಿದೆ ಎಂದರು.

ಇದನ್ನೂ ಓದಿ :  ನಮ್ಮ ಮೇಲೆ ನಂಬಿಕೆ ಇಡಿ,ಕಠಿಣ ಸತ್ಯ ಎದುರಿಸಿ ಅವಕಾಶ ಸೃಷ್ಟಿಸಿಕೊಳ್ಳಬೇಕು : ಸೈಯದ್ ಖಾಲಿದ್ ಅಹ್ಮದ್ ಕರೆ

ಭದ್ರಾ ನಾಲೆ ನೀರು ನಿರ್ವಹಣೆ: ನಾಲೆಯ ಕೊನೆಯ ಭಾಗದ ರೈತರಿಗೆ ನೀರು ತಲುಪಿಸಲು ನಾಲೆಯುದ್ದಕ್ಕೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಅನಧಿಕೃತವಾಗಿ ನೀರು ಎತ್ತುವವರ ಮೋಟಾರ್‌ಗಳನ್ನು ವಶಪಡಿಸಿಕೊಳ್ಳಲಾಗುವುದು.

ಕನ್ನಡ ಭವನ ನಿರ್ಮಾಣ: ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಪ್ರಿಪೇಯ್ಡ್ ಆಟೋಗಳನ್ನು ಚಾಲ್ತಿಗೊಳಿಸಿದ್ದು, ಇದಕ್ಕೆ ರೂ.38/-ಶುಲ್ಕ ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಹೆಚ್.ಟಿ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಉಪಸ್ಥಿತರಿದ್ದರು.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ನಿಮ್ಮ ಮೇಲೆ ನಂಬಿಕೆ ಇಡಿ,ಕಠಿಣ ಸತ್ಯ ಎದುರಿಸಿ ಅವಕಾಶ ಸೃಷ್ಟಿಸಿಕೊಳ್ಳಬೇಕು : ಸೈಯದ್ ಖಾಲಿದ್ ಅಹ್ಮದ್ ಕರೆ
Next Article Davanagere ಕಾಯಕದಲ್ಲಿ ಶ್ರದ್ಧೆ, ಭಕ್ತಿ, ಗುರು ನಿಷ್ಠೆ ಇದ್ದರೆ ಪರಮಾತ್ಮನು ಆಶೀರ್ವಾದ ಮಾಡುತ್ತಾನೆ : ಕಣ್ವಕುಪ್ಪೆ ಶ್ರೀ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಡಿ.ಇಎಲ್.ಇಡಿ ದಾಖಲಾತಿಗೆ ಅರ್ಜಿ ಆಹ್ವಾನ

ದಾವಣಗೆರೆ ಜು.09 :  ಪ್ರಸಕ್ತ ಸಾಲಿನ ಪ್ರಥಮ ವರ್ಷದ ಡಿ.ಇಎಲ್.ಇಡಿ.ಗೆ ದಾಖಲಾತಿ  ಪಡೆಯಲು ಜುಲೈ 31 ರವಗೆ ಆಫ್‍ಲೈನ್ ಅರ್ಜಿ…

By Dinamaana Kannada News

Crime news | ಬಸ್ ಸ್ಟಾಂಡನಲ್ಲಿ ಕಳ್ಳತನ : ಇಬ್ಬರು ಮಹಿಳೆಯರ ಬಂಧನ 

ದಾವಣಗೆರೆ : ಬಸ್ ಸ್ಟಾಂಡನಲ್ಲಿ ಕಳ್ಳತನ ಮಾಡುತ್ತಿದ್ದ ಅಂತರ ಜಿಲ್ಲಾ ಇಬ್ಬರು ಮಹಿಳೆಯರನ್ನು ಕೆಟಿಜೆ ನಗರ ಪೊಲೀಸರು  ಬಂಧಿಸಿ, ಸುಮಾರು…

By Dinamaana Kannada News

ಜಿಲ್ಲಾಸ್ಪತ್ರೆ ಹೊರ ಗುತ್ತಿಗೆ ನೌಕರರಿಂದ ಪ್ರತಿಭಟನೆ

ದಾವಣಗೆರೆ: ತಿಂಗಳಿಗೆ ಸರಿಯಾಗಿ ವೇತನ ಕೊಡುತ್ತಿಲ್ಲ. ಪ್ರತಿನಿತ್ಯ ಗುತ್ತಿಗೆದಾರರಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯ…

By Dinamaana Kannada News

You Might Also Like

District Collector G.M. Gangadharaswamy
ತಾಜಾ ಸುದ್ದಿ

ಕೊಳವೆಬಾವಿಗಳನ್ನು ಕೊರೆಸುವಾಗ ನಿಬಂಧನೆಗಳನ್ನು ಪಾಲಿಸಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಕಾಯಕದಲ್ಲಿ ಶ್ರದ್ಧೆ, ಭಕ್ತಿ, ಗುರು ನಿಷ್ಠೆ ಇದ್ದರೆ ಪರಮಾತ್ಮನು ಆಶೀರ್ವಾದ ಮಾಡುತ್ತಾನೆ : ಕಣ್ವಕುಪ್ಪೆ ಶ್ರೀ

By Dinamaana Kannada News
Davanagere
ತಾಜಾ ಸುದ್ದಿ

ನಿಮ್ಮ ಮೇಲೆ ನಂಬಿಕೆ ಇಡಿ,ಕಠಿಣ ಸತ್ಯ ಎದುರಿಸಿ ಅವಕಾಶ ಸೃಷ್ಟಿಸಿಕೊಳ್ಳಬೇಕು : ಸೈಯದ್ ಖಾಲಿದ್ ಅಹ್ಮದ್ ಕರೆ

By Dinamaana Kannada News
Applications invited
ತಾಜಾ ಸುದ್ದಿ

ಖಾಲಿ ಇರುವ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳಿಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?