ದಾವಣಗೆರೆ: ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ 2025-26 ನೇ ಶೈಕ್ಷಣಿಕ ಸಾಲಿನ ನೇರ ಜಿಲ್ಲಾ ಮಟ್ಟದ ಕ್ರೀಡಾ ಸ್ಪರ್ಧೆಗಳಲ್ಲಿ ಈಶ್ವರಮ್ಮ ಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಸ್ಪರ್ಧಿಸಿ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಪ್ರಾಂಶುಪಾಲರಾದ ಕೆ.ಎಸ್.ಪ್ರಭುಕುಮಾರ್ ತಿಳಿಸಿದ್ದಾರೆ.
14 ವರ್ಷ ವಯೋಮಿತಿಯ ವಿಭಾಗದಲ್ಲಿ ನಡೆದ ಕ್ರೀಡೆಗಳಲ್ಲಿ ಸ್ಪರ್ಧಿಸಿದ್ದರು. ಸ್ಟೇಟಿಂಗ್ ಸ್ಪರ್ಧೆಯಲ್ಲಿ ಶಾಲೆಯ ಚಿರಂತ್ ಜಿ.ಎಸ್, ಆದೀಶ್ವರ ಟಿ.ಎ., ಲಾನ್ ಟೆನ್ನಿಸ್‌ನಲ್ಲಿ ಮನ್‌ಮಂತ್ ಎಂ, ಆಶೀತ್ ಆರ್.ರಾಯ್ಕರ್, ಆರ್ಯನ್ ರಾವ್.ಎಂ.ಪಿ., ಅಕುಲ್ ಬಂಡವಾಳ್‌ಕರ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
17 ವರ್ಷ ವಯೋಮಿತಿಯ ವಿಭಾಗದಲ್ಲಿ ನಡೆದ ಕ್ರೀಡೆಗಳಲ್ಲಿ ಸ್ಪರ್ಧೆಯ ಲಾನ್ ಟೆನ್ನಿಸ್ ಕ್ರೀಡೆಯಲ್ಲಿ ತರುಣ್ ಎಚ್., ಸೃಜನ್ ಜಿ.ಎಂ., ಸುಜನ್ ಎಸ್., ಆದರ್ಶ ಎಂ.ಜೆ. ಹಾಗೂ ಛವಿ ಎನ್.ಎಂ. 50 ಮಿ.ಫ್ರೀ ಸ್ಟೈಲ್ ಈಜು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Read also : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ : ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಾಲಾಡಳಿತ ಮಂಡಳಿಯ ಅಧ್ಯಕ್ಷರಾದ ಕೆ.ಆರ್.ಸುಜಾತ ಕೃಷ್ಣ, ಕಾರ್ಯದರ್ಶಿ ಎ.ಆರ್.ಉಷಾ ರಂಗನಾಥ್ ಮತ್ತು ಎಲ್ಲಾ ಪದಾಧಿಕಾರಿಗಳು ಮತ್ತು ಶಾಲಾ ಪ್ರಾಂಶುಪಾಲರಾದ ಕೆ.ಎಸ್.ಪ್ರಭುಕುಮಾರ್, ಉಪಪ್ರಾಂಶುಪಾಲರಾದ ಶಶಿರೇಖಾ ಜಿ.ಎಸ್. ಹಾಗೂ ತರಬೇತಿ ನೀಡಿದ ಶಾಲಾ ದೈಹಿಕ ಶಿಕ್ಷಣದ ಶಿಕ್ಷಕರಾದ ಕೆ.ರವಿ, ನಾಗರಾಜ್ ಉತ್ತಂಗಿ, ಎಂ.ಪ್ರಸನ್ನ ಮತ್ತು ಶಾಲಾ ಗುರುವೃಂದದವರು ಈ ವಿದ್ಯಾರ್ಥಿಗಳಿಗೆ ತುಂಬು ಹೃದಯದ ಅಭಿನಂದನೆ ಸಲ್ಲಿಸಿದ್ದಾರೆ.