ದಾವಣಗೆರೆ ಮೇ.03 (Davanagere): ಪ್ರಸಕ್ತ ಸಾಲಿನಲ್ಲಿ ದಾವಣಗೆರೆ ನಗರದ ಜೆ.ಹೆಚ್.ಪಟೇಲ್ ಬಡಾವಣೆಯಲ್ಲಿರುವ ಜಿಲ್ಲಾ ಬಾಲಭವನದಲ್ಲಿ ಮೇ.6 ರಿಂದ 20 ರವರೆಗೆ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಚಿತ್ರಕಲೆ, ಕರಕುಶಲ, ಜೇಡಿಮಣ್ಣಿನ ಕಲೆ, ಸಂಗೀತ, ನೃತ್ಯ, ಯೋಗ, ಕರಾಟೆ ಗ್ರಾಮೀಣ ಕ್ರೀಡೆಗಳು ಹಾಗೂ ಇನ್ನಿತರ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. 6 ರಿಂದ 16 ವರ್ಷ ವಯಸ್ಸಿನ ಮಕ್ಕಳು ಭಾಗವಹಿಸಬಹುದು.
Read also : ಮುಳುಗುತ್ತಿದ್ದ ಯುವಕನ ರಕ್ಷಣೆಗೆ ಹೋದ ಇಬ್ಬರು ನೀರು ಪಾಲು
ಮೇ.6 ರೊಳಗೆ ಅರ್ಜಿಗಳನ್ನು ಪಡೆದು ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಾರ್ಯಕ್ರಮ ಸಂಯೋಜಕರು ಮೊ.ಸಂ:9964496242, ಮತ್ತು 9632887189 ನ್ನು ಸಂಪರ್ಕಿಸಲು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.