Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸರ್ಕಾರಗಳೇ ಸರ್ಕಾರಿ ಶಾಲೆಗಳ ಸಾಯಿಸುತ್ತಿರುವುದು ದೊಡ್ಡ ಕ್ರೈಂ : ಜಿ. ಬಿ. ವಿನಯ್ ಕುಮಾರ್
ತಾಜಾ ಸುದ್ದಿ

ಸರ್ಕಾರಗಳೇ ಸರ್ಕಾರಿ ಶಾಲೆಗಳ ಸಾಯಿಸುತ್ತಿರುವುದು ದೊಡ್ಡ ಕ್ರೈಂ : ಜಿ. ಬಿ. ವಿನಯ್ ಕುಮಾರ್

Dinamaana Kannada News
Last updated: April 8, 2025 1:26 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಸರ್ಕಾರಗಳೇ ಸರ್ಕಾರಿ ಶಾಲೆಗಳನ್ನು ಸಾಯಿಸುತ್ತಿವೆ. ಕಣ್ಮುಂದೆ ನಡೆಯುತ್ತಿರುವ ಕ್ರೈಂ ಹಾಗೂ ದುರಂತ. ವಿದ್ಯಾವಂತರು ರಾಜಕಾರಣಕ್ಕೆ ಬರಬೇಕು. ವಿದ್ಯಾವಂತರು, ಪ್ರಜ್ಞಾವಂತ ಯುವಕ, ಯುವತಿಯರು ರಾಜಕೀಯಕ್ಕೆ ಬನ್ನಿ. ಅವಕಾಶ ಸಿಗಲಿಲ್ಲ ಎಂದು ಕೊರಗುವುದು ಬೇಡ. ಅವಕಾಶ ಸಿಗದಿದ್ದರೆ ಹಿಂದೆ ಸರಿಯಬೇಡಿ. ಅನ್ಯಾಯದ ವಿರುದ್ಧ ಹೋರಾಟ ಮಾಡಬೇಕು. ಇಲ್ಲದಿದ್ದರೆ ಸದಾ ಶೋಷಿತರಾಗುತ್ತವೆ ಎಂದು ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಕರೆ ನೀಡಿದರು.

ಹರಪನಹಳ್ಳಿ ತಾಲೂಕಿನ ರಾಗಿಮಸಲವಾಡ ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿ ಸ್ನೇಹ ಬಳಗ ನವ ತರುಣ ನಾಟ್ಯ ಕಲಾ ಸಂಘವು ಆಂಜನೇಯ ಸ್ವಾಮಿ ರಥೋತ್ಸವದ ಪ್ರಯುಕ್ತ ಕಲಿಯುಗದಲ್ಲಿ ಘರ್ಜಿಸಿದ ಕರ್ಣಾಜುನ ನಾಟಕ ವೇದಿಕೆಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಶಿಕ್ಷಣದ ಕ್ರಾಂತಿ ಆಗಬೇಕೆಂದು ರಾಜ್ಯಾದ್ಯಂತ ಓಡಾಡುತ್ತಿದ್ದೇನೆ. ಹಳ್ಳಿ ಮಕ್ಕಳು ಅಡ್ಡದಾರಿ ಹಿಡಿಯಬಾರದು. ಗ್ರಾಮೀಣ ಪ್ರದೇಶದ ಮಕ್ಕಳು ಐಎಎಸ್, ಐಪಿಎಸ್ ಅಧಿಕಾರಿಗಳು ಆಗಬೇಕು. ಸರ್ಕಾರಿ ಶಾಲೆಗಳು ಉದ್ದಾರ ಆಗಬೇಕು. ಇಲ್ಲಿ ಓದಿದವರು ಸಬ್ ಇನ್ ಸ್ಪೆಕ್ಟರ್, ತಹಶೀಲ್ದಾರ್, ಎಸಿ, ಐಎಎಸ್, ಕೆಎಎಸ್ ಅಧಿಕಾರಿಗಳಬೇಕು ಎಂಬ ಕನಸು ನನ್ನದು. ಸರ್ಕಾರಿ ಶಾಲೆಗಳು ಸತ್ತು ಹೋದರೆ ಕನ್ನಡವೇ ಸತ್ತು ಹೋಗುತ್ತವೆ. ಕನ್ನಡ ಭಾಷೆ ಸತ್ತು ಹೋದರೆ ಇಂಥ ನಾಟಕಗಳನ್ನು ನೋಡಲು ಸಾಧ್ಯವಿಲ್ಲ ಎಂದು ಹೇಳಿದರು.

ದಾವಣಗೆರೆ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಅನಿವಾರ್ಯ ಕಾರಣಗಳಿಂದ ಸ್ಪರ್ಧೆ ಮಾಡಿದ್ದೆ. ನೀವೆಲ್ಲರೂ ಸಹಕಾರ ನೀಡಿದ್ದೀರಿ. ಪ್ರೀತಿ, ವಿಶ್ವಾಸ ಕೊಟ್ಟಿದ್ದೀರಾ. ಅದನ್ನು ಮರೆಯಲು ಸಾಧ್ಯವೇ ಇಲ್ಲ. ನಾನು ಜಗಳೂರು ಮತ್ತು ಹರಪನಹಳ್ಳಿಯಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ. ಆದರೂ ಜನರು ಪ್ರೀತಿ ತೋರಿ ಆಹ್ವಾನ ನೀಡುತ್ತಿದ್ದಾರೆ. ಹಾಗಾಗಿ ಬಂದಿದ್ದೇನೆ. ಹೊನ್ನಾಳಿ ಮತ್ತು ಹರಿಹರದಲ್ಲಿ ಓಡಾಡುತ್ತಿದ್ದೇನೆ. ಆಂಜನೇಯ ಸ್ವಾಮಿ ಆಶೀರ್ವಾದ ಏನು ಸಿಗುತ್ತೋ ಮುಂದಿನ ದಿನಗಳಲ್ಲಿ ನೋಡಬೇಕಿದೆ ಎಂದು ತಿಳಿಸಿದರು.

ಇನ್ ಸೈಟ್ಸ್ ಐಎಎಸ್ ಸಂಸ್ಥೆಯಲ್ಲಿ ಸುಮಾರು ಒಂದೂವರೆ ಸಾವಿರ ವಿದ್ಯಾರ್ಥಿಗಳು ಐಎಎಸ್ ಓದಿ ಈಗ ಉನ್ನತ ಅಧಿಕಾರಿಗಳಾಗಿದ್ದಾರೆ. ಇದು ಖುಷಿಯ ವಿಚಾರ. ನಿಮ್ಮ ಮಕ್ಕಳನ್ನೂ ಅಧಿಕಾರಿಗಳನ್ನಾಗಿಸಿ. ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಎಂದು ಸಲಹೆ ನೀಡಿದರು.

Read also : Channagiri | ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ವೇದಿಕೆ ನೀಡದಿದ್ದರೆ ಯಾರೂ ಪರಿಚಯವಾಗಲ್ಲ. ವೇದಿಕೆ ಸೃಷ್ಟಿಸಿದರೆ ಯುವಕರಿಗೆ ಅವಕಾಶ ಸಿಗುತ್ತದೆ. ಹರಪನಹಳ್ಳಿ ತಾಲೂಕಿನಲ್ಲಿ ಪ್ರಜ್ಞಾವಂತರು, ಹೋರಾಟಗಾರರಿಗೆ ಇದುವರೆಗೆ ಅವಕಾಶ ಸಿಕ್ಕಿಲ್ಲ. ಇಂಥವರಿಗೆ ಅವಕಾಶ ಕೊಟ್ಟರೆ ನಿಮಗೆ ಒಳ್ಳೆಯದು ಮಾಡುತ್ತಾರೆ ಎಂಬುದು ನನ್ನ ಅಭಿಪ್ರಾಯ ಎಂದು ತಿಳಿಸಿದರು.

ಈ ವೇಳೆ ರಾಗಿಮಸಲವಾಡ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ. ಶೇಖರ್ ಗೌಡ, ಸುರೇಶ್ ಸೊಕ್ಕೆ, ಶಂಭುಲಿಂಗಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಚ್. ಜಯಮ್ಮ, ಸದಸ್ಯ ಸೋಮಪ್ಪ, ಮಂಜುನಾಥ್,  ಪ್ರಾಥಮಿಕ ಕೃಷಿ ಸಹಕಾರಿ ಸಂಘದ ಕಾರ್ಯದರ್ಶಿ ಎನ್. ಎಸ್. ರವಿಕುಮಾರ್, ಗ್ರಾಮದ ಹಿರಿಯರಾದ ಮಲ್ಕಪ್ಪ, ಡಿ ಮೈಲಪ್ಪ, ಮಾಜಿ ಸೈನಿಕರು ನಿರಂಜನ್, ಸಿಜಿ ಚಿಕ್ಕಗೌಡ್ರು, ದೊಡ್ಡೇಶ್, ದೊಡ್ಮನಿ ಮಾಂತೇಶಪ್ಪ ಮತ್ತಿತರರು ಹಾಜರಿದ್ದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited Channagiri | ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
Next Article kunduavada vellege 19 ವರ್ಷಗಳ ನಂತರ ಹಳೇ ಕುಂದುವಾಡದಲ್ಲಿ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ: ಜಗಮಗಿಸುತ್ತಿದೆ ಗ್ರಾಮ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ  (Davanagere) ;  ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಈ ವರ್ಷದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ…

By Dinamaana Kannada News

ಶ್ರೀ ದುರ್ಗಾಂಭಿಕ ದೇವಿ ಜಾತ್ರೆ -ಪ್ರಾಣಿಬಲಿ ನಿಷೇಧ:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

ದಾವಣಗೆರೆ, ಜ 14 : ಫೆಬ್ರವರಿ 22 ರಿಂದ ಆರಂಭವಾಗುವ ನಗರದೇವತೆ ಶ್ರೀ ದುರ್ಗಾಂಭಿಕ ದೇವಿ ಜಾತ್ರೆಯನ್ನು ವ್ಯವಸ್ಥಿತವಾಗಿ ಆಚರಿಸಲು…

By Dinamaana Kannada News

ಅಂತರಾಷ್ಟ್ರೀಯ ಯೋಗ ದಿನಾಚರಣೆ : 5 ರಿಂದ 6 ಸಾವಿರ ಜನರು ಭಾಗಿ

ದಾವಣಗೆರೆ .ಜೂ.19    : ಸ್ವಂತ ಮತ್ತು ಸಮಾಜಕ್ಕಾಗಿ ಯೋಗ ಎಂಬ ಘೋಷವಾಕ್ಯದಡಿ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ–ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ,ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
Davanagere
ತಾಜಾ ಸುದ್ದಿ

ಪಾರದರ್ಶಕ ಆಡಳಿತ ನೀಡುವುದೇ ನನ್ನ ಧ್ಯೇಯ : ಶಾಸಕ ಬಿ ದೇವೇಂದ್ರಪ್ಪ

By Dinamaana Kannada News
Davanagere
ತಾಜಾ ಸುದ್ದಿ

ಜಯಂತಿ ಆಚರಣೆ ಮಾಡದೇ ಅಗೌರವ, ಬಂಜಾರ ಸಂಘದಿಂದ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?