Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬಾಲ್ಯ ವಿವಾಹ ಮತ್ತು ಶಾಲೆಯಿಂದ ಮಕ್ಕಳು ಹೊರಗುಳಿಯದಂತೆ ಕ್ರಮವಹಿಸಿ :ಅಪರ್ಣಾ ಎಂ ಕೊಳ್ಳಾ
ತಾಜಾ ಸುದ್ದಿ

ಬಾಲ್ಯ ವಿವಾಹ ಮತ್ತು ಶಾಲೆಯಿಂದ ಮಕ್ಕಳು ಹೊರಗುಳಿಯದಂತೆ ಕ್ರಮವಹಿಸಿ :ಅಪರ್ಣಾ ಎಂ ಕೊಳ್ಳಾ

Dinamaana Kannada News
Last updated: January 2, 2026 3:44 pm
Dinamaana Kannada News
Share
Davanagere
SHARE
ದಾವಣಗೆರೆ ಜ.02: ಜಿಲ್ಲೆಯಲ್ಲಿ ಆಗುತ್ತಿರುವ ಬಾಲ್ಯ ವಿವಾಹ ಮತ್ತು ಶಾಲೆಯಿಂದ ಹೊರಗುಳಿದಿರುವ ಮಕ್ಕಳ ಬಗ್ಗೆ ನಿಗವಹಿಸಿ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು, ತಪ್ಪಿದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮವಹಿಸಲಾಗುವುದು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣಾ ಎಂ ಕೊಳ್ಳಾ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಶುಕ್ರವಾರ ನಗರದ ಈಶ್ವರಮ್ಮ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಆರ್.ಟಿ.ಇ ಅನುಷ್ಠಾನ ಮತ್ತು ಪ್ರಗತಿ ಪರಿಶೀಲನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಾಲ್ಯ ವಿವಾಹ ಮುಕ್ತ ಭಾರತ-2030 ಅನ್ನು ಗುರಿಯಿಟ್ಟುಕೊಂಡು ಶಾಲಾ ಶಿಕ್ಷಣ ಇಲಾಖೆ ಕಾರ್ಯ ನಿರ್ವಹಿಸಬೇಕಾಗಿದೆ ಇದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಜಿಲ್ಲೆಯಲ್ಲಿ ಒಂದನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ಒಟ್ಟಾರೆ 820 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ, ಪ್ರಾಥಮಿಕ ಶಾಲೆಯಿಂದ ತೇರ್ಗಡೆಯಾಗಿ ಪ್ರೌಡಶಾಲೆಗೆ ಪ್ರವೇಶ ಪಡೆದಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಒಂದು ವೇಳೆ ಶಾಲೆಯಲ್ಲಿ ಪ್ರವೇಶ ಪಡೆಯದೆ ಹೊರಗುಳಿದಿದ್ದಲ್ಲಿ ಸಕಾರಣಗಳನ್ನು ತಿಳಿದು ಆ ಮಗುವು ಶಾಲೆಗೆ ಪುನಃ ಪ್ರವೇಶ ಪಡೆಯುವಂತೆ ಮಾಡಬೇಕು, ಈ ಬಗ್ಗೆ ಅಧಿಕಾರಿಗಳು ಕೂಡಲೇ ಕ್ರಮವಹಿಸಬೇಕು ಎಂದರು.

ಜಿಲ್ಲೆಯಲ್ಲಿರುವ ವಸತಿ ರಹಿತ ಮತ್ತು ವಸತಿ ಸಹಿತ ಶಾಲೆಗಳ ಬಗ್ಗೆ ಮಾಹಿತಿಯನ್ನು ಪಡೆಯಬೇಕು, ನವೀಕರಣಗೊಳ್ಳದ ವಸತಿ ರಹಿತ ಮತ್ತು ವಸತಿ ಸಹಿತ ಶಾಲೆಗಳ ವಿರುದ್ಧ ಕ್ರಮವಹಿಸಬೇಕು ಮತ್ತು ಸ್ಪರ್ಧಾತ್ಮಕ ತರಬೇತಿ ಕೇಂದ್ರಗಳ ಮಾಹಿತಿಯನ್ನು ಪಡೆದು ಆಯೋಗಕ್ಕೆ ಮೂರು ದಿನಗಳಲ್ಲಿ ಸಲ್ಲಿಸಬೇಕು ಅವರು ಕಡ್ಡಾಯವಾಗಿ ಶಿಕ್ಷಣ ಇಲಾಖೆಯಲ್ಲಿ ನೊಂದಾಯಿಸಿಕೊAಡಿರಬೇಕು, ನವೋದಯ, ಕಿತ್ತೂರು ರಾಣಿ ಚೆನ್ನಮ್ಮ, ಮುರಾರ್ಜಿ ಮತ್ತು ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ ಪ್ರವೇಶ ಪಡೆಯುವಂತಹ ಮಕ್ಕಳಿಗೆ ಪ್ರವೇಶ ಪರೀಕ್ಷೆಗೆ ಹಾಜರಾಗಲು ವಿಶೇಷ ತರಗತಿಗಳನ್ನು ಆಯೋಜಿಸಿ ತರಬೇತಿ ನೀಡಬೇಕು ಎಂದರು.

seem1 dinamaana ads
Read also : ಸಾಸ್ವೆಹಳ್ಳಿ ಗ್ರಾಮದಲ್ಲಿ ಬಲೆಗೆ ಬಿದ್ದ 32 ಕೆಜಿ ತೂಕದ ಹದ್ದಿನ ಮೀನು!
ಒAದನೇ ತರಗತಿಯಿಂದ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪ.ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳ ಬಗ್ಗೆ ಮಾಹಿತಿ ಕಲೆಹಾಕಿ ಅವರ ವ್ಯಾಸಂಗದ ಬಗ್ಗೆ ಅರಿತು ಅವರುಗಳಿಗೆ ವಿಶೇಷ ತರಗತಿಗಳನ್ನು ಏರ್ಪಡಿಸಬೇಕು, ಜಿಲ್ಲೆಯಲ್ಲಿರುವ ಎಲ್ಲಾ ಮಕ್ಕಳ ಆಧಾರ್ ಸಿಡಿಂಗ್ ಮಾಡಿಸಿ ಅಪಾರ್ ತಂತ್ರಾAಶದಲ್ಲಿ ನೊಂದಾಯಿಸಲು ಕ್ರಮವಹಿಸಬೇಕು ಜಿಲ್ಲೆಯಲ್ಲಿ ಇನ್ನು 58000 ಮಕ್ಕಳ ಆಧಾರ್ ಲಿಂಕ್ ಆಗಿರುವುದಿಲ್ಲ ಕೂಡಲೇ ಕ್ರಮವಹಿಸಬೇಕು ಎಂದರು.
ಎಲ್ಲಾ ಶಾಲೆಗಳಲ್ಲಿ ಶೌಚಾಲಯಗಳಿದ್ದು ಬಹುತೇಕ ಶಾಲೆಗಳಲ್ಲಿ ಬಳಕೆಯಾಗುತ್ತಿಲ್ಲ ಕೆಲವು ಶಾಲೆಗಳಲ್ಲಿ ಇರುವ ಶೌಚಾಲಯಗಳು ದುರಸ್ಥಿಗೆ ಬಂದಿದ್ದು ತ್ವರಿತವಾಗಿ ದುರಸ್ಥಿಪಡಿಸಿ ಬಳಕೆಗೆ ನೀಡುವಂತೆ ತಾಕಿತು ಮಾಡಿದರು, ಶೌಚಾಲಯಗಳ ನಿರ್ವಹಣೆ ಮಾಡದೇ ಇದ್ದರೆ ಸಂಬAಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮವಹಿಸಲಾಗುವುದು, ಹತ್ತನೇ ತರಗತಿಯಲ್ಲಿ ಕಳೆದ ಬಾರಿ ಶೇ.80.55 ರಷ್ಟು ಮಕ್ಕಳು ತೇರ್ಗಡೆಹೊಂದಿದ್ದು ಇನ್ನು ಹೆಚ್ಚು ಪ್ರಗತಿಯನ್ನು ಸಾಧಿಸಿ , ಜಿಲ್ಲೆಯು ಪ್ರಥಮ ಸ್ಥಾನದಲ್ಲಿ ಬರುವಂತೆ ಅಧಿಕಾರಿಗಳು ಮತ್ತು ಶಿಕ್ಷಕರು ಕ್ರಮವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೊಟ್ರೇಶ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ , ಬಿಇಒಗಳು ಹಾಗೂ ಇತರರು ಉಪಸ್ಥಿತರಿದ್ದರು.
job news dinamaana ads
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article eagle fish was caught in a trap ಸಾಸ್ವೆಹಳ್ಳಿ ಗ್ರಾಮದಲ್ಲಿ ಬಲೆಗೆ ಬಿದ್ದ 32 ಕೆಜಿ ತೂಕದ ಹದ್ದಿನ ಮೀನು!
Next Article Davanagere ಎಸ್‌ಐಆರ್‌(SIR)ಕುರಿತು ಜಾಗೃತಿ ಸಭೆ:ದಕ್ಷಿಣದಲ್ಲಿ ಅಲ್ಪಸಂಖ್ಯಾತರಿಗೆ ಅವಕಾಶ ನೀಡಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ದಾವಣಗೆರೆ ಸೆ. 25 (Davanagere) ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಸಮುದಾಯಗಳಿಗೆ ವಿವಿಧ…

By Dinamaana Kannada News

ವೃತ್ತಿ ರಂಗಭೂಮಿ ರಂಗಾಯಣ: ದಾವಣಗೆರೆಯಲ್ಲಿ ನೂತನ ನಾಟಕಕ್ಕೆ ಕಲಾವಿದರ ಆಯ್ಕೆ

ದಾವಣಗೆರೆ: ನೂತನ ನಾಟಕದ ಸಿದ್ಧತೆಗಾಗಿ ವೃತ್ತಿ ರಂಗಭೂಮಿ ರಂಗಾಯಣ ದಾವಣಗೆರೆಯು ಕಲಾವಿದರನ್ನು ಆಹ್ವಾನಿಸಿ, ಸೆಪ್ಟೆಂಬರ್ 20, 2025 ರಂದು ನಡೆದ…

By Dinamaana Kannada News

ದಾವಣಗೆರೆ|ವೃದ್ಧೆಯನ್ನು ಪುಸಲಾಯಿಸಿ ಚಿನ್ನದ ಸರ ಎರಗಿಸಿದ ಕಳ್ಳರು

ದಾವಣಗೆರೆ:  ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯೊಬ್ಬರನ್ನು ಪುಸಲಾಯಿಸಿ ಕೊರಳಲ್ಲಿದ್ದ ಚಿನ್ನದ ಸರವನ್ನು ಕಳ್ಳರು ದೋಚಿ ಪರಾರಿಯಾಗಿರುವ ಘಟನೆ ಪಟ್ಟಣದ ಕಲ್ಲೇಶ್ವರ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?