ಹರಿಹರ (Davangere District): ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಕೊಡುಗೆ ಅಪಾರವಾಗಿದೆ ಎಂದು ನಗರಸಭೆ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್ ಹೇಳಿದರು.
ನಗರದ ಗುರುಭವನ ದಲ್ಲಿ ತಾಲೂಕು ಆಡಳಿತ ಮತ್ತು ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕಿನ ದೀಪವಾಗಿರುವ ಶಿಕ್ಷಕರು ಮಕ್ಕಳ ಸರ್ವಾಂಗೀಣ ಬೆಳವಣಿಗೆಗಾಗಿ ಪಠ್ಯ ವಿಷಯದ ಜೊತೆಗೆ ಪಠ್ಯೇತರ ವಿಷಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಮಕ್ಕಳು ಸಾಕಷ್ಟು ಬುದ್ದಿವಂತರಿದ್ದಾರೆ, ಅವರಿಗೆ ಸೂಕ್ತ ಮಾರ್ಗದರ್ಶನದ ಅಗತ್ಯವಿದೆ. ಬಡತನ, ಏಕ ಪೋಷಕತ್ವ ಮಕ್ಕಳನ್ನು ಪ್ರೋತ್ಸಾಹಿಸುವುದು, ಮಕ್ಕಳಲ್ಲಿರುವ ಪ್ರತಿಭೆ ಗುರುತಿಸುವುದು ಶಿಕ್ಷಕರಿಂದ ಮಾತ್ರ ಸಾಧ್ಯ ಎಂದು ಹೇಳಿದರು.
Read also : Davanagere | ಜಿಮ್ ಸ್ಥಾಪನೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ
ಉಪನ್ಯಾಸ ನೀಡಿದ ಪ್ರಾಂಶುಪಾಲ ಮಂಜಪ್ಪ ಎಂ. , ಪ್ರತಿಯೊಬ್ಬ ವಿದ್ಯಾರ್ಥಿಯೂ ಜೀವನದಲ್ಲಿ ಏನನ್ನಾದರೂ ಸಾಧನೆ ಮಾಡಬೇಕಾದರೆ, ಪ್ರಮುಖ ಪಾತ್ರ ವಹಿಸುವುದು ಶಿಕ್ಷಕ. ಪ್ರತಿಯೊಬ್ಬರಿಗೂ ಶಿಕ್ಷಣ ಹೇಗೆ ಮುಖ್ಯವೋ, ಹಾಗೇಯೆ ಆ ಶಿಕ್ಷಣ ನೀಡುವ ಗುರುವು ಅಷ್ಟೇ ಮುಖ್ಯ. ಗುರುವಿಲ್ಲದೆ ಗುರಿಯನ್ನು ತಲುಪುವುದು ಅಸಾಧ್ಯ. ವಿದ್ಯಾರ್ಥಿಗಳ ಕನಸನ್ನು ಸಾಕಾರಗೊಳಿಸುವ, ಕಲಿಕಾ ಆಸಕ್ತಿಯನ್ನು ಹುಟ್ಟು ಹಾಕುವ ಸೂತ್ರಧಾರನೇ ಶಿಕ್ಷಕ ಎಂದರು.
ನಿವೃತ್ತಿ ಹೊಂದಿದ ಅಂತಹ ಶಿಕ್ಷಕ- ಶಿಕ್ಷಕಿಯರಿಗೆ ಅಭಿನಂದನ ಪತ್ರವನ್ನು ವಿತರಿಸಿ ಗೌರವಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ದುರ್ಗಪ್ಪ, ಮುಖ್ಯ ಶಿಕ್ಷಕ ಬೀರಪ್ಪ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕುಬೇಂದ್ರಪ್ಪ, ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ ವೀರೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್ ಚಂದ್ರಪ್ಪ, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ವಿಜಯ್ ಮಹಾಂತೇಶ್, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಈಶಪ್ಪ ಬೂದಿಹಾಳ, ನಿಕಟ ಪೂರ್ವ ಅಧ್ಯಕ್ಷರು ಸರ್ಕಾರಿ ನೌಕರ ಸಂಘ ಎ.ಕೆ ಭೂಮೇಶ, ಗೌರವಾಧ್ಯಕ್ಷ ಸರಕಾರಿ ನೌಕರ ಸಂಘ ಉಮಣ್ಣ, ಉರ್ದು ಶಿಕ್ಷಕರ ಸಂಘದ ಅಧ್ಯಕ್ಷ ಅಶ್ಪಕ್ ಅಹಮದ್, ಹಾಗೂ ಶಿಕ್ಷಕರಗಳಾದ ಬಿ.ಬಿ .ರೇವಣ್ಣ ನಾಯಕ್, ಮಂಜುನಾಥ್, ನಾಗರಾಜ್, ವಿ.ಬಿ ಕೊಟ್ರೇಶ್ ಮಂಜುನಾಥ್ ಗೌಡ, ಹೊನಕೆರಪ್ಪ, ರಾಜಶೇಖರ್, ರಿಯಾಜ್ ಅಹ್ಮದ್ ಶಿಕ್ಷಕವೃಂದದವರು ಇದ್ದರೂ.