Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕನ್ನಡ ಭಾಷೆ, ಸಂಸ್ಕೃತಿ ಉಳಿಯಲು ಕನ್ನಡ ಶಾಲೆಗಳ ಜೀವಂತಿಕೆ ಅಗತ್ಯ : ಜಿ. ಬಿ. ವಿನಯ್ ಕುಮಾರ್ ಪ್ರತಿಪಾದನೆ
ತಾಜಾ ಸುದ್ದಿ

ಕನ್ನಡ ಭಾಷೆ, ಸಂಸ್ಕೃತಿ ಉಳಿಯಲು ಕನ್ನಡ ಶಾಲೆಗಳ ಜೀವಂತಿಕೆ ಅಗತ್ಯ : ಜಿ. ಬಿ. ವಿನಯ್ ಕುಮಾರ್ ಪ್ರತಿಪಾದನೆ

Dinamaana Kannada News
Last updated: March 25, 2025 12:13 pm
Dinamaana Kannada News
Share
davanagere
davanagere
SHARE

ದಾವಣಗೆರೆ (Davanagere): ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆ ಉಳಿಯಬೇಕಾದರೆ ಕನ್ನಡ ಶಾಲೆಗಳು ಜೀವಂತಿಕೆಯಿಂದ ಇರಬೇಕು. ಕನ್ನಡ ಶಾಲೆಗಳು ಸತ್ತು ಹೋಗುತ್ತಿರುವುದರಿಂದ ಭಾಷೆಯೂ ಸತ್ತು ಹೋಗುತ್ತಿದೆ ಎಂದು ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಆತಂಕ ವ್ಯಕ್ತಪಡಿಸಿದರು.

ನ್ಯಾಮತಿ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಏರ್ಪಡಿಸಿದ್ದ ಶಾಶ್ವತ ಕನ್ನಡ ಧ್ವಜ ಸ್ತಂಭ ಉದ್ಘಾಟನೆ, ಕನ್ನಡ ನಾಡು ರಕ್ಷಣಾ ವೇದಿಕೆಯ ಮೊದಲನೇ ವರ್ಷದ ವಾರ್ಷಿಕೋತ್ಸವ ಮತ್ತು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸವಿನೆನಪಿಗಾಗಿ ಪೌರಕಾರ್ಮಿಕರಿಗೆ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಪರಿಸ್ಥಿತಿ ತುಂಬಾನೇ ಕೆಟ್ಟದ್ದಾಗಿದೆ. ಇಲ್ಲಿ ಓದುವ ಹೆಚ್ಚಿನ ಮಕ್ಕಳು ಕಡುಬಡವರು ಹಾಗೂ ಎಸ್ಸಿ, ಎಸ್ಟಿ ಸಮುದಾಯಕ್ಕೆ ಸೇರಿದವರೇ. ಹಣ ಇಲ್ಲವೆಂಬ ಕಾರಣಕ್ಕೆ  ಎಷ್ಟೋ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ. ಇದು ಆಗಬಾರದು. ಉನ್ನತ ಶಿಕ್ಷಣ ಕೊಡಿಸಿದರೆ ಮಕ್ಕಳ ಭವಿಷ್ಯವೂ ಉಜ್ವಲ ಆಗುತ್ತದೆ ಎಂದು ಅಭಿಪ್ರಾಯಪಟ್ಟರು.

ಹಳ್ಳಿಗಳಲ್ಲಿಯೂ ಉತ್ಕೃಷ್ಟ ಗುಣಮಟ್ಟದ ಶಿಕ್ಷಣ ಸಿಗುವಂತಾಗಬೇಕು ಎಂಬುದು ನನ್ನ ಉದ್ದೇಶ ಮತ್ತು ಗುರಿ. ಇದಕ್ಕಾಗಿ ರಾಜ್ಯಾದ್ಯಂತ ಹೋರಾಟ ಮಾಡುತ್ತಿದ್ದೇನೆ. ಬಡವರ ಮಕ್ಕಳು ಐಎಎಸ್, ಐಪಿಎಸ್, ಕೆಎಎಸ್ಅಧಿಕಾರಿಗಳಾಗಬೇಕು. ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತವನ್ನು ನಿಯಂತ್ರಿಸುವಂತ ಅಧಿಕಾರಿಗಳಾಗಬೇಕು. ಬಡವರ ಮಕ್ಕಳು ಹಣ ಎಲ್ಲ ಎಂಬ ಕಾರಣಕ್ಕೆ ಶಿಕ್ಷಣದಿಂದ ವಂಚಿತರಾಗಬಾರದು. ಪೋಷಕರು ಆರ್ಥಿಕ ಪರಿಸ್ಥಿತಿಯಿಂದ ಶಾಲೆ ಬಿಡಿಸಿ ಕೆಲಸಕ್ಕೆ ಸೇರಿಸಬಾರದು ಎಂದು ಮನವಿ ಮಾಡಿದರು.

ಪೌರಕಾರ್ಮಿಕರು ನಗರದ ಆತ್ಮಸಾಕ್ಷಿಗಳಿದ್ದಂತೆ. ಕೇವಲ ಸ್ವಚ್ಛತಾ ಕಾರ್ಯ ಮಾತ್ರ ಮಾಡುವುದಿಲ್ಲ. ನಮ್ಮೆಲ್ಲರ ಆರೋಗ್ಯ ಕಾಪಾಡುತ್ತಾರೆ. ಅವರು ಒಂದು ವಾರ ಇಲ್ಲವೆಂದರೆ ನಗರವೆಲ್ಲಾ ಗಬ್ಬೆದ್ದು ಹೋಗುತ್ತದೆ. ಬೆಂಗಳೂರಿನಂಥ ಮಹಾನಗರಗಳಲ್ಲಿ ಪೌರ ಕಾರ್ಮಿಕರು ಇಲ್ಲವೆಂದರೆ ಊಹಿಸಿಕೊಳ್ಳಲು ಆಗದು. ಅಲ್ಲಿ ವಾಸ ಮಾಡುವವರು ಬೆಂಗಳೂರು ಖಾಲಿ ಮಾಡಬೇಕಾಗುತ್ತದೆ. ಯಾರಿಗಾದರೂ ಹೆಚ್ಚಿನ ಗೌರವ ನೀಡಬೇಕೆಂದರೆ ಅದು ಪೌರಕಾರ್ಮಿಕರಿಗೆ ಎಂದು ಹೇಳಿದರು.

ದಾವಣಗೆರೆ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೆ. ಎಂಟು ಕ್ಷೇತ್ರಗಳಲ್ಲಿ 2 ಸಾವಿರ ಹಳ್ಳಿಗಳನ್ನು ಸಂಚರಿಸಲು ಆಗಲಿಲ್ಲ. ಆದ್ರೆ, ಬಹುತೇಕ ಮಂದಿಯನ್ನು ತಲುಪುವ ಕೆಲಸ ಮಾಡಿದ್ದೆ. ಸುರಹೊನ್ನೆಯಲ್ಲಿ  ಎರಡರಿಂದ ಮೂರು ರ್ಯಾಲಿ ಮಾಡಿದ್ದೆವು. ಹೆಚ್ಚಿನ ಪರಿಚಯ ಮುಂದಿನ ದಿನಗಳಲ್ಲಿ ಆಗುತ್ತದೆ. ನಿಮ್ಮ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತೇನೆ. ಕೈಯಲ್ಲಾದಷ್ಟು ಸಹಾಯ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಇನ್ ಸೈಟ್ಸ್ ಐಎಎಸ್ ಸಂಸ್ಥೆಯು ದೇಶದಲ್ಲಿಯೇ ಮೂರನೇ ಐಎಎಸ್ ಕೋಚಿಂಗ್ ಸೆಂಟರ್ ಎಂಬ ಹೆಗ್ಗಳಿಕೆ ಹೊಂದಿದೆ. ಪೌರಕಾರ್ಮಿಕರ ಮಕ್ಕಳು ಐಎಎಸ್, ಐಪಿಎಸ್ ಅಧಿಕಾರಿಗಳಾಗಬೇಕು. ಅವರಿಗೂ ಒಳ್ಳೆಯ ಶಿಕ್ಷಣ ಸಿಗಬೇಕು. ಸ್ವಚ್ಛತಾ ಕೆಲಸ ಮಾಡುವುದು ತಪ್ಪಲ್ಲ. ಇದು ನಿಮ್ಮ ಬದುಕಿಗೆ ಕೊನೆಯಾಗಬೇಕು. ಯಾವ ಕೆಲಸವೂ ತಪ್ಪಲ್ಲ. ನಿಮ್ಮ ಮಕ್ಕಳು ಜಿಲ್ಲಾಡಳಿತ, ತಾಲೂಕು ಆಡಳಿತದ ಚುಕ್ಕಾಣಿ ಹಿಡಿಯುವಂತಾಗಬೇಕು. ಎಷ್ಟೇ ಕಷ್ಟ ಎದುರಾದರೂ ವಿದ್ಯಾಭ್ಯಾಸ ಕೊಡಿಸಿ. ನಮ್ಮ ಸಂಸ್ಥೆಯಿಂದ ಕಡುಬಡವರು, ಪೌರ ಕಾರ್ಮಿಕರ ಮಕ್ಕಳಿಗೆ ಉಚಿತ ಕೋಚಿಂಗ್ ನೀಡಲಾಗುವುದು. ನೀವು ಧೈರ್ಯ ಮಾಡಿ ಮುಂದೆ ಬರಬೇಕು ಎಂದು ಕರೆ ನೀಡಿದರು.

ಈ ನಾಡು ಕಂಡ ಅದ್ಭುತ ವ್ಯಕ್ತಿತ್ವದ ಮೇರು ನಟ ದಿವಂಗತ ಪುನೀತ್ ರಾಜಕುಮಾರ್ ಸವಿನೆನಪಿನಲ್ಲಿ ಇಂಥ ಕಾರ್ಯಕ್ರಮ ಆಯೋಜನೆ ಮಾಡಿರುವುದು ಖುಷಿಯ ವಿಚಾರ. ಇಂಥ ಜನಪಯೋಗಿ ಕಾರ್ಯಗಳಿಗೆ ಕೈಯಲ್ಲಾದಷ್ಟು ಸಹಾಯ ಮಾಡುತ್ತೇನೆ ಎಂದು ಜಿ. ಬಿ. ವಿನಯ್ ಕುಮಾರ್ ಅವರು ಭರವಸೆ ನೀಡಿದರು.

Read also : ದಾವಣಗೆರೆಯಲ್ಲಿ ಮೈಸೂರಿನ ವಿದ್ವಾನ್ ಪುಟ್ಟಣ್ಣಯ್ಯ ಅವರ ರಂಗಸಂಗೀತ ಸಂಜೆ

ರಾಂಪುರದ ಸದ್ಗುರು ಶಿವಕುಮಾರ ಶಿವಾಚಾರ್ಯ ಹಾಲಸ್ವಾಮೀಜಿ, ವಿಶ್ವಾರಾಧ್ಯ ಶಿವಾಚಾರ್ಯ  ಸ್ವಾಮೀಜಿ, ಕನ್ನಡ ನಾಡು ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರಸನ್ನ ಗೌಡ್ರು, ಕೆ. ಬಿ. ಚೆನ್ನಪ್ಪ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಹಾಲಾರಾಧ್ಯ, ವೇದಿಕೆ ಜಿಲ್ಲಾಧ್ಯಕ್ಷ ನಾಗರಾಜಪ್ಪ, ತಾಲೂಕು ಅಧ್ಯಕ್ಷ  ಶಂಕರ್ ನಾಯಕ್, ಗೌರವಾಧ್ಯಕ್ಷ ಕತ್ತಿಗೆ ನಾಗರಾಜ್, ಚೇತನ್ ಕುಮಾರ್, ಜಗದೀಶ್, ಗಣೇಶ್, ವಿನಯ್ ಗೌಡ, ರವಿ, ವನಿತಾ, ಉಷಾ, ಮಂಜುಳಾ, ಅಂಬಿಕಾ, ಲಕ್ಷ್ಮೀ ಮತ್ತಿತರರು ಹಾಜರಿದ್ದರು.

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article mysore-puttannaiah-musical-event-davangere ದಾವಣಗೆರೆಯಲ್ಲಿ ಮೈಸೂರಿನ ವಿದ್ವಾನ್ ಪುಟ್ಟಣ್ಣಯ್ಯ ಅವರ ರಂಗಸಂಗೀತ ಸಂಜೆ
Next Article World tuberculosis Day World tuberculosis Day | ವಿಶ್ವ ಕ್ಷಯ ರೋಗ (ಟಿ ಬಿ) ದಿನಾಚರಣೆ : ರೋಗ ತಡೆಗೆ ಮುನ್ನಚ್ಚರಿಕೆ ಅವಶ್ಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Harihara | ಅತಿಕ್ರಮಣಕ್ಕೆ ಒಳಗಾಗಿದ್ದ ಜಮೀನು ಶಿಕ್ಷಣ ಇಲಾಖೆಯ ಸುಪರ್ದಿಗೆ

ಹರಿಹರ (Davanagere): ಸಮಾಜ ಸೇವಕರು, ಶಾಲೆಯ ಹಳೆಯ ವಿದ್ಯಾರ್ಥಿಗಳ ಪ್ರಯತ್ನದ ಫಲವಾಗಿ ಅತಿಕ್ರಮಣಕ್ಕೆ ಒಳಗಾಗಿದ್ದ ಕೋಟ್ಯಾಂತರ ರೂ. ಬೆಳೆಬಾಳುವ ಜಮೀನನ್ನು ಮತ್ತೆ…

By Dinamaana Kannada News

13 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ : ಸಚಿವ ಎಸ್.ಮಧು ಬಂಗಾರಪ್ಪ

ದಾವಣಗೆರೆ,ಸೆ..20 ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡಿದಾಗ ದೇಶ ವಿವಿಧ ರಂಗಗಳಲ್ಲಿ ಮುಂದುವರೆಯಲು ಸಾಧ್ಯ ಈ ನಿಟ್ಟಿನಲ್ಲಿ 13 ಸಾವಿರ ಶಿಕ್ಷಕರ…

By Dinamaana Kannada News

ಕಮ್ಯುನಿಸ್ಟ್ ಆಗದ ನಿಜ ಮಾರ್ಕಿಷ್ಟ್ ಹಿರೇಮಠ

‌ಮೇಲ್ವರ್ಗಗಳ ತವರಿನಂತಿರುವ ಹಡಗಲಿಯಲ್ಲಿ ಗ್ರಾಮದೇವತೆಯ ಜಾತ್ರೆಯಲ್ಲಿ ಕೆಲ ವಿದ್ಯಾವಂತ ದಲಿತ ಯುವಕರನ್ನು ಕೂಡಿಸಿಕೊಂಡು ಅನಿಷ್ಟ ಪದ್ದತಿಯ ವಿರುದ್ದ ಸಮರ ಸಾರಿದ್ದು,ದಲಿತ…

By Dinamaana Kannada News

You Might Also Like

Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
Davanagere
ತಾಜಾ ಸುದ್ದಿ

ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

By Dinamaana Kannada News
jagalorue
ಅಪರಾಧ ಸುದ್ದಿತಾಜಾ ಸುದ್ದಿ

ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?