ದಾವಣಗೆರೆ :
ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ದಾವಣಗೆರೆ ಜಿಲ್ಲೆಗೆ ಸದಸ್ಯರನ್ನಾಗಿ ರಾಜ್ಯ ಸರ್ಕಾರ ಎಸ್ .ಎಸ್ ಗಿರೀಶ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಿದೆ.
ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ, ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ ಇವರುಗಳ ಶಿಫಾರಸ್ಸಿನ ಮೇರೆಗೆ ಎಸ್ ಎಸ್ ಗಿರೀಶ್ ರವರು ಸೇವೆ ಗುರುತಿಸಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ. ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ಅನುಷ್ಠಾನ ಗ್ಯಾರಂಟಿ ಯೋಜನೆಗಳ ಸಾಧಕ ಬಾಧಕಗಳ ಬಗ್ಗೆ ಇವರು ಗಮನ ಹರಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .