ದಾವಣಗೆರೆ ಚಿತ್ರದುರ್ಗ ಸೇರಿದಂತೆ ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ನದಿಗಳು ತುಂಬಿ ಹರಿಯುತ್ತಿವೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.
ನಾಳೆಯೂ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ಶಾಲೆಗಳಿಗೆ ರಜೆ ನೀಡುವ ಸಾಧ್ಯತೆಗಳಿವೆ. ಸಂಜೆ ಅಥವಾ ನಾಳೆ ಬೆಳಗ್ಗೆ ಪರಿಸ್ಥಿತಿ ನೋಡಿಕೊಂಡು ರಜೆ ಬಗ್ಗೆ ಅಧಿಕೃತ ತೀರ್ಮಾನ ಹೊರಬೀಳುವ ನಿರೀಕ್ಷೆಯಿದೆ.
ಈ ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆ
ದಾವಣಗೆರೆಯಲ್ಲಿ ಎಡಬಿದೆ ಮಳೆ ಸುರಿಯುತ್ತಿದೆ. ಧಾರವಾಡ, ಗದಗ ಜಿಲ್ಲೆಯ ಕೆಲವೆಡೆ ಮಳೆಯಾಯಿತು. ಗದಗ ನಗರ ಸೇರಿದಂತೆ ಜಿಲ್ಲೆಯ ಲಕ್ಷ್ಮೇಶ್ವರ, ಗಜೇಂದ್ರಗಡ ಹಾಗೂ ನರೇಗಲ್ ಹೋಬಳಿಯಲ್ಲಿಯೂ ಜೋರು ಮಳೆಯಾಗಿದೆ.
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಎಡಬಿಡದೆ ಮಳೆ ಸುರಿದಿದ್ದು, ಭಟ್ಕಳ ತಾಲ್ಲೂಕಿನ ಬೇಂಗ್ರೆ ಮತ್ತು ಕಾಯ್ಕಿಣಿ ಗ್ರಾಮಗಳಲ್ಲಿ 13 ಸೆಂ.ಮೀ. ನಷ್ಟು ಮಳೆ ದಾಖಲಾಗಿದೆ. ಜಿಲ್ಲೆಯ ಕರಾವಳಿ ಭಾಗ, ಮಲೆನಾಡು ಭಾಗದಲ್ಲಿ ಮಳೆ ವ್ಯಾಪಕವಾಗಿದೆ. ಇಲ್ಲಿ ಮುಂದಿನ ಎರಡು ದಿನವೂ ರೆಡ್ ಅಲರ್ಟ್ ಘೋಷಿಸಲಾಗಿದೆ.
Read also : ಬಂಗಾರದ ಬೆಲೆ ಏರಿಳಿತಕ್ಕೆ.. ಇದೇ ಕಾರಣ?