ದಾವಣಗೆರೆ, ನ..21 :ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20 ರ ಅವಧಿಯಲ್ಲಿ ದಾಖಲಾಗಿ ಪಾವತಿಗೆ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲಾಗಿದೆ.
ಪಾವತಿದಾರರಿಗೆ ನವೆಂಬರ್.21 ರಿಂದ ಡಿಸೆಂಬರ್.12 ರವರಗೆ ಕಾಲಾವಕಾಶ ನೀಡಲಾಗಿದೆ. ಸಾರ್ವಜನಿಕರು, ವಾಹನ ಮಾಲೀಕರು ಮತ್ತು ಚಾಲಕರು ರಿಯಾಯಿತಿಯನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
