Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > 2027ರ ವೇಳೆಗೆ ತುಮಕೂರು-ದಾವಣಗೆರೆ ನೇರ ರೈಲ್ವೆ ಮಾರ್ಗ ಪೂರ್ಣ: ಅಧಿಕಾರಿಗಳಿಗೆ ಗಡುವು ನೀಡಿದ ಸಚಿವ ವಿ. ಸೋಮಣ್ಣ
ತಾಜಾ ಸುದ್ದಿ

2027ರ ವೇಳೆಗೆ ತುಮಕೂರು-ದಾವಣಗೆರೆ ನೇರ ರೈಲ್ವೆ ಮಾರ್ಗ ಪೂರ್ಣ: ಅಧಿಕಾರಿಗಳಿಗೆ ಗಡುವು ನೀಡಿದ ಸಚಿವ ವಿ. ಸೋಮಣ್ಣ

Dinamaana Kannada News
Last updated: February 26, 2026 1:46 pm
Dinamaana Kannada News
Share
Davanagere
SHARE

ದಾವಣಗೆರೆ,ಫೆ.26 : ಬಹಳ ವರ್ಷಗಳ ಕನಸಿನ ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಯೋಜನೆಯನ್ನು ಅತ್ಯಂತ ವೇಗವಾಗಿ ಪೂರ್ಣಗೊಳಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ. 2027ರ ಡಿಸೆಂಬರ್ ಒಳಗೆ ಈ ಮಾರ್ಗವನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ತಿಳಿಸಿದರು.

ಗುರುವಾರ ದಾವಣಗೆರೆ ಜಿಲ್ಲೆಯ ತೋಳಹುಣಸೆಯಿಂದ ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಮಾರ್ಗದ ಪರಿಶೀಲನೆಯನ್ನು ತೋಳಹುಣಸೆಯಿಂದ ಆನಗೋಡು ರೈಲ್ವೆ ನಿಲ್ದಾಣದವರೆಗೆ ಮೋಟರ್ ಟ್ರ‍್ಯಾಲಿಯಲ್ಲಿ ಪರಿಶೀಲನೆ ನಡೆಸಿ ಆನಗೋಡು ರೈಲ್ವೆ ನಿಲ್ದಾಣದಲ್ಲಿ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಸಚಿವರು ತೋಳಹುಣಸೆ ನಿಲ್ದಾಣದಿಂದ ಆನಗೋಡು ವರೆಗೆ ಮೋಟಾರ್ ಟ್ರ‍್ಯಾಲಿಯಲ್ಲಿ ಸಂಚರಿಸಿ ಮಾರ್ಗಗಳ ಸ್ಥಿತಿಗತಿ ಮತ್ತು ನಿಲ್ದಾಣದ ಕಾಮಗಾರಿಗಳನ್ನು ಖುದ್ದಾಗಿ ವೀಕ್ಷಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ‘ವಿಕಸಿತ ಭಾರತ 2047’ ಎಂಬ ಯೋಜನೆ ರೂಪಿಸಲಾಗಿದೆ.  ರೈಲ್ವೆ ಮತ್ತು ಜಲಶಕ್ತಿ ಇಲಾಖೆಗಳು ತಮ್ಮ ಯೋಜನೆಗಳ ಮೂಲಕ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ರೈಲ್ವೆ ಇಲಾಖೆಯ ಕಾರ್ಯಗಳಿಗೆ ಈ ವರ್ಷ ಈಗಾಗಲೇ 52,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.  ಪ್ರಸಕ್ತ ಸಾಲಿನಲ್ಲಿ ಅಭಿವೃದ್ಧಿಗಾಗಿ 7,800 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ, ರೈಲ್ವೆ ಇಲಾಖೆಯ  ಶೌಚಾಲಯಗಳ ಮೂಲಭೂತ ಸೌಕರ್ಯಕ್ಕಾಗಿ 2093 ಕೋಟಿಗಳ ಅನುದಾನವನ್ನು ಒದಗಿಸಲಾಗಿದೆ  ಎಂದರು.

ಕಳೆದ 20 ವರ್ಷಗಳ ಹಿಂದೆ ಆರಂಭವಾದ ಯೋಜನೆಯನ್ನು 2027 ರ ಡಿಸೆಂಬರ್ ವೇಳೆಗೆ ಕಾಮಗಾರಿ ಪೂರ್ಣಗೊಳಿಸಿ ಸಂಚಾರಮುಕ್ತಗೊಳಿಸುವ ಗುರಿ ಹೊಂದಲಾಗಿದೆ. ಈ ಯೋಜನೆಗಾಗಿ ರಾಜ್ಯ ಸರ್ಕಾರವೂ ಸಂಪೂರ್ಣ ಸಹಕಾರ ನೀಡುತ್ತಿದ್ದು, ಕೇಂದ್ರ ಸರ್ಕಾರವೂ ಅನುದಾನ ಬಿಡುಗಡೆ ಮಾಡಿದೆ. ತುಮಕೂರು-ಚಿತ್ರದುರ್ಗ-ದಾವಣಗೆರೆ ಜಿಲ್ಲೆ ಸೇರಿ ಒಟ್ಟು 1200 ಎಕರೆ ಜಮೀನು ಬೇಕಾಗಿದ್ದು ಚಿತ್ರದುರ್ಗ ಜಿಲ್ಲೆಯಲ್ಲಿ ಇನ್ನೂ ಸುಮಾರು 111 ಎಕರೆ ಭೂಮಿಯ ಅಗತ್ಯವಿದೆ. ಭೂಸ್ವಾಧೀನಾಧಿಕಾರಿಗಳು ವಿಳಂಬ ಮಾಡುತ್ತಿದ್ದು ಯಾವುದೇ ಕಾರಣಕ್ಕೂ ಪ್ರಕ್ರಿಯೆಯನ್ನು ಮುಂದೂಡದೇ ಮಾರ್ಚ್ 31ರ ಒಳಗಾಗಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಹೊಸ ಮಾರ್ಗದಲ್ಲಿ ತೋಳಹುಣಸೆಯಿಂದ ಹೆಬ್ಬಾಳದವರೆಗೆ ಕಾಮಗಾರಿ ಭರದಿಂದ ಸಾಗಿದ್ದು ಭವಿಷ್ಯದ ಜನಸಂಖ್ಯೆ ಬೆಳವಣಿಗೆಯ ದೃಷ್ಟಿಯಿಂದ ರೈಲ್ವೆ ಪ್ಲಾಟ್‌ಫಾರ್ಮ್ಗಳನ್ನು ಕನಿಷ್ಠ 21 ಬೋಗಿಗಳು ನಿಲ್ಲುವಷ್ಟು ವಿಸ್ತರಿಸಲು ತೀರ್ಮಾನಿಸಲಾಗಿದೆ. ನೂತನ ಮಾರ್ಗದಲ್ಲಿ ಕೆಲವು ಕಿಡಿಗೇಡಿಗಳು ಕಲ್ಲು ಎಸೆಯುವುದು ಮತ್ತು ಕಾಮಗಾರಿ ಮಾಡುವವರಿಗೆ ತೊಂದರೆಯುAಟು ಮಾಡುತ್ತಿದ್ದಾರೆ ಎಂಬ ಮಾಹಿತಿ ಇದ್ದು ಕಾಮಗಾರಿ ಅನುಷ್ಟಾನದಲ್ಲಿ ತೊಂದರೆ ಉಂಟು ಮಾಡಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿ ರೈಲ್ವೆ ಪೊಲೀಸ್ ಮತ್ತು ಪೊಲೀಸ್ ಅಧಿಕಾರಿಗಳಿಗೆ ಗಸ್ತು ನಡೆಸುವಂತೆ ತಿಳಿಸಿದರು.

ದಾವಣಗೆರೆ ಸಂಸದರ ಮನವಿಯಂತೆ ವಂದೇ ಭಾರತ್ ರೈಲಿನ ಸಮಯ ಬದಲಾವಣೆ ಮತ್ತು ಸ್ಟಾಪೇಜ್ ಕುರಿತು ದೆಹಲಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಮಾತನಾಡಿ ದಾವಣಗೆರೆ ಲಿಂಗೇಶ್ವರ ದೇವಸ್ಥಾನದ ಬಳಿ ಸರ್ವಿಸ್ ರಸ್ತೆ ನಿರ್ಮಾಣ ಮಾಡಲು ಕ್ರಮವಹಿಸಬೇಕಾಗಿದೆ,  ದಾವಣಗೆರೆ, ಹುಬ್ಬಳ್ಳಿ ಮತ್ತು ಬೆಳಗಾವಿ ಮಾರ್ಗವಾಗಿ ಬೆಂಗಳೂರು-ಮುAಬೈ ಸೂಪರ್ ಫಾಸ್ಟ್ ರೈಲು ಸಂಚಾರಕ್ಕೆ ಅನುಮತಿ ನೀಡಬೇಕು, ಈ ಯೋಜನೆಯಿಂದ ಮುಂಬಯಿ ವ್ಯಾಪಾರಿಗಳಿಗೆ ಹೆಚ್ಚು ಅನುಕೂಲಕರವಾಗಲಿದೆ. ಹನುಮನಹಳ್ಳಿಯಲ್ಲಿ ಸುಮಾರು ಒಂದು ವರ್ಷದಿಂದ ಪ್ಲಾಟ್ಫಾರ್ಮ್ ವಿಸ್ತರಣೆಯ ಸಮಸ್ಯೆ ಇದೆ,  ತೋಳಹುಣಸೆ  ಸರ್ಕಾರಿ ಶಾಲೆಯ ಮಕ್ಕಳ ಓಡಾಟಕ್ಕೆ ಅನುಕೂಲವಾಗುವಂತೆ ಅಂಡರ್ ಪಾಸ್ ಹಾಗೂ ಪ್ಲಾಟ್ಫಾರ್ಮ್ ಲೆವೆಲಿಂಗ್  ಮಾಡಬೇಕಾಗಿದೆ, ದಾವಣಗೆರೆ ಮತ್ತು ಹರಿಹರ ರೈಲ್ವೆ ಪ್ಲಾಟ್ಫಾರ್ಮ್ಗಳಲ್ಲಿ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು, ಧಾರವಾಡದಿಂದ ಬೆಂಗಳೂರಿಗೆ ಸಂಚರಿಸುವ ವಂದೇ ಭಾರತ್ ರೈಲಿನ ಸಮಯವನ್ನು ಮರುಪರಿಶೀಲಿಸಬೇಕು,  ಹರಿಹರ ಭಾಗದ ರೈಲ್ವೆ ಹಳಿಗಳ ಬಳಿ ಅಪಘಾತಗಳು ಹೆಚ್ಚುತ್ತಿದ್ದು, ಅಸುರಕ್ಷಿತ ಸ್ಥಳಗಳಲ್ಲಿ ಫೆನ್ಸಿಂಗ್ ಹಾಕುವ ಮೂಲಕ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

Read also : ಗ್ಯಾರಂಟಿ ಯೋಜನೆಗಳು ಆರ್ಹ ಫಲಾನುಭವಿಗಳಿಗೆ ಸಕಾಲಕ್ಕೆ ತಲುಪಲಿ : ಷಂಷೀರ್ ಅಹಮ್ಮದ್

ಶಾಸಕರಾದ ಕೆ.ಎಸ್.ಬಸವಂತಪ್ಪ ಮಾತನಾಡಿ ಆನಗೋಡು ಒಂದು ಪ್ರಮುಖ ಕೇಂದ್ರವಾಗಿದ್ದು, ಇಲ್ಲಿನ ರೈಲ್ವೆ ನಿಲ್ದಾಣವನ್ನು ಅಪ್‌ಗ್ರೇಡ್ ಮಾಡುವ ಅಗತ್ಯವಿದೆ. ಇದು ಜಂಕ್ಷನ್ ಆಗಿ ಬದಲಾದರೆ ಬಳ್ಳಾರಿ, ಹೊಸದುರ್ಗ, ಮಂಡ್ಯ, ಮೈಸೂರು ಮುಂತಾದ ಕಡೆಗಳಿಂದ ಬರುವ ಪ್ರಯಾಣಿಕರಿಗೆ ಹಾಗೂ ಸಂಪರ್ಕ ರಸ್ತೆಗಳಿಗೆ ತುಂಬಾ ಅನುಕೂಲವಾಗುತ್ತದೆ ಎಂದು ರೈಲ್ವೆ ಸಚಿವರಲ್ಲಿ ಮನವಿ ಮಾಡಿದರು.

ಮಾಯಕೊಂಡ ಕ್ಷೇತ್ರವು ಗ್ರಾಮಾಂತರ ಪ್ರದೇಶವಾಗಿದ್ದು, ಅಲ್ಲಿ ರೈಲುಗಳ ನಿಲುಗಡೆ ಕಡಿಮೆ ಇದೆ. ಆದ್ದರಿಂದ ಅಲ್ಲಿ ಇಂಟರ್ ಸಿಟಿ ರೈಲು ಹಾಗೂ ಇತರ ಎರಡು-ಮೂರು ಪ್ರಮುಖ ರೈಲುಗಳ ನಿಲುಗಡೆಗೆ ಅವಕಾಶ ಮಾಡಿಕೊಡಬೇಕು. ಆನಗೋಡು ಭಾಗದಲ್ಲಿ ಅಡಿಕೆ ಮತ್ತು ಮೆಕ್ಕೆಜೋಳ ಬೆಳೆಯುವ ರೈತರು ಹೆಚ್ಚಾಗಿರುವುದರಿಂದ, ಇಲ್ಲಿ ಒಂದು ಗುಡ್ ಶೆಡ್ ನಿರ್ಮಾಣ ಮಾಡಬೇಕು. ಇದು ಪ್ರಸ್ತುತ ಬಾತಿಯಲ್ಲಿ ಇರುವುದರಿಂದ ರೈತರಿಗೆ ಸಾಗಾಣಿಕೆ ವೆಚ್ಚ ಮತ್ತು ದೂರದ ತೊಂದರೆಯಾಗುತ್ತಿದೆ. ಕೇಂದ್ರ ಸರ್ಕಾರವು ರೈಲ್ವೆ ಅಭಿವೃದ್ಧಿಗಾಗಿ ₹52,000 ಕೋಟಿ ಅನುದಾನ ನೀಡಿದ್ದು, ಪ್ರಧಾನಿ ಮೋದಿಯವರಿಗೆ ಧನ್ಯವಾದ ಹೇಳಿದ ಅವರು ಭೂಸ್ವಾಧೀನ ಪ್ರಕ್ರಿಯೆ ಸೇರಿದಂತೆ ರಾಜ್ಯ ಸರ್ಕಾರದಿಂದ ಬೇಕಾದ ಎಲ್ಲಾ ಸಹಕಾರವನ್ನು ನೀಡಲು ಸರ್ಕಾರ ಸದಾ ಸಿದ್ಧವಿದೆ ಎಂದರು.

ಈ ವೇಳೆ ಜಿಲ್ಲಾಧಿಕಾರಿ ಜಿ.ಎಂ.ಗAಗಾಧರಸ್ವಾಮಿ, ಜಿಲ್ಲಾ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್, ರೈಲ್ವೆ ಇಲಾಖೆ ಮುಖ್ಯ ಇಂಜಿನಿಯರ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂಸಚಿವ ವಿ. ಸೋಮಣ್ಣ
Share This Article
Twitter Email Copy Link Print
Previous Article jagalore ಗ್ಯಾರಂಟಿ ಯೋಜನೆಗಳು ಆರ್ಹ ಫಲಾನುಭವಿಗಳಿಗೆ ಸಕಾಲಕ್ಕೆ ತಲುಪಲಿ : ಷಂಷೀರ್ ಅಹಮ್ಮದ್
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಗಾಳಿ, ಮಳೆಗೆ ಧರೆಗುರುಳಿದ ಅಡಿಕೆ ಮರಗಳು: ಶಾಸಕ ಕೆ.ಎಸ್.ಬಸವಂತಪ್ಪರಿಂದ ಪರಿಶೀಲನೆ

ದಾವಣಗೆರೆ:  ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯಲ್ಲಿ ಸುರಿದ ಮಳೆ, ಗಾಳಿಗೆ ಬೆಳೆ ಹಾನಿಯಾದ ತೋಟಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ಮಂಗಳವಾರ ಭೇಟಿ ನೀಡಿ…

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 54 : ಅವರು ಮತ್ತೆ ಬರಬಹುದು

Kannada News | Sanduru Stories | Dinamaana.com | 14-06-2024 ಗುಡಿಸಲು ಹಾಕ್ಕೊಂಡು ನೆಲೆ ಕಂಡುಕೊಂಡರು (Sanduru Stories)…

By Dinamaana Kannada News

ಮಲ್ಟಿ ಟಾಸ್ಕಿಂಗ್ ಸ್ಟಾಫ್, ಹವಾಲ್ದಾರ್ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಜು.16 : ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಬಹು ಕಾರ್ಯಕಮ (ತಾಂತ್ರಿಕೇತರ) ಸಿಬ್ಬಂದಿ (ಮಲ್ಟಿ ಟಾಸ್ಕಿಂಗ್ ಸ್ಟಾಫ್(ಎಂ.ಟಿ.ಎಸ್)…

By Dinamaana Kannada News

You Might Also Like

jagalore
ತಾಜಾ ಸುದ್ದಿ

ಗ್ಯಾರಂಟಿ ಯೋಜನೆಗಳು ಆರ್ಹ ಫಲಾನುಭವಿಗಳಿಗೆ ಸಕಾಲಕ್ಕೆ ತಲುಪಲಿ : ಷಂಷೀರ್ ಅಹಮ್ಮದ್

By Dinamaana Kannada News
Davanagere
ತಾಜಾ ಸುದ್ದಿ

ಬೇಸಿಗೆ ಬಿಸಿಲು ಕೇವಲ ತಾಪವಲ್ಲ, ಸಾಂಕ್ರಾಮಿಕ ರೋಗಗಳಿಗೆ ಆಹ್ವಾನ:ಡಾ.ಅನುರೂಪ

By Dinamaana Kannada News
Davanagere
ತಾಜಾ ಸುದ್ದಿ

ಸಾಂಪ್ರದಾಯಿಕ ಅಲೆಮಾರಿ ಕುರುಗಾಹಿಗಳ ಕಡೆ ಕರ್ನಾಟಕ ಸರ್ಕಾರ ಗಮನ ಹರಿಸಲಿ 

By Dinamaana Kannada News
ಸಚಿನ್ ಒಕ್ಕಲಿಗ
ಅಭಿಪ್ರಾಯ

ಇಂಡಿಯಾ ಒಕ್ಕೂಟದಲ್ಲಿ ರಾಜ್ಯಗಳ ಹೆಸರು ಬದಲಾವಣೆ ಸಾಧ್ಯವೇ?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?