ದಾವಣಗೆರೆ (Davanagere): ಹಕ್ಕಿಪಿಕ್ಕಿ ಸಮುದಾಯದ ಬಾಲಕನನ್ನು ಅಡಕೆ ಮರಕ್ಕೆ ಕಟ್ಟಿ ಹಲ್ಲೆ ಮಾಡಿರುವ ಅಮಾನವೀಯ ಘಟನೆ ಚನ್ನಗಿರಿ ತಾಲೂಕಿನ ನಲ್ಲೂರು ಸಮೀಪದ ಅಸ್ತಾಪನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಗಿಡ ಮೂಲಿಕೆ ಮಾರಾಟ ಮಾಡಿ ಜೀವನ ನಡೆಸುವ ಹಕ್ಕಿ ಪಿಕ್ಕಿ ಜನಾಂಗದ ಜನ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಬಾಲಕನನ್ನು ಅಡಿಕೆ ಮರಕ್ಕೆ ಕಟ್ಟಿ ಹಲ್ಲೆ ನಡೆಸಿ ಚಿತ್ರ ಹಿಂಸೆ ನೀಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಅಡಕೆ ಮರಕ್ಕೆ ಕಟ್ಟಿ ಹಲ್ಲೆ ಜತೆಗೆ ಮಾರ್ಮಂಗಕ್ಕೆ ಕೆಂಪು ಇರುವೆ ಬಿಟ್ಟು ಹಿಂಸೆ ನೀಡಿದ್ದು, ಬಾಲಕ ನೋವು ತಾಳಲಾರದೇ ಚೀರಾಡುತ್ತಿರುವುದು ಆಡಿಯೋದಲ್ಲಿ ಕೇಳಿ ಬಂದಿದೆ.
10 ರಿಂದ 15 ಜನ ಯುವಕರ ಗುಂಪು ಕೋಲು ದೊಣ್ಣೆ, ಡ್ರಿಪ್ ಪೈಪ್ನಿಂದ ಹಲ್ಲೆ ಮಾಡಿ ಚಿತ್ರಹಿಂಸೆ ನೀಡಿ ವಿಕೃತಿ ಮೆರೆದಿದೆ.
ವೀಡಿಯೋ ವೈರಲ್ ಆಗಿದ್ದೇ ತಡ ಕೃತ್ಯವೆಸಗಿರವರ ವಿರುದ್ಧ ಹಿಡಿ ಶಾಪ ಹಾಕುತ್ತಿರುವ ಸಾರ್ವಜನಿಕರು ಕೃತ್ಯಕ್ಕೆ ಕಾರಣರಾದವರ ಬಂಧನಕ್ಕೆ ಸಾರ್ವಜನಿಕರ ಒತ್ತಾಯ ಮಾಡಿದ್ದಾರೆ.
Read also : ಸಾಮಾಜಿಕ ಸಮಾನತೆಯ ಹೋರಾಟಗಾರ ಬಾಬೂಜಿ: ಪ್ರೊ.ಲಿಂಗಣ್ಣ
ಈ ಘಟನೆ ಕುರಿತು ಚನ್ನಗಿರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.