ದಾವಣಗೆರೆ.ಜ.14: ನ್ಯಾಮತಿ ತಾಲೂಕು ಸಾಲಬಾಳು ಗ್ರಾಮದ ಕಲ್ಲಗಿರಿ ರಂಗನಾಥಸ್ವಾಮಿ ಬೆಟ್ಟದಲ್ಲಿ ಪ್ರವಾಸಿಗರನ್ನು ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, 30 ಸಾವಿರ ರೂ. ನಗದು ಹಾಗೂ ಮೊಬೈಲ್, ದ್ವಿಚಕ್ರ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಬಿಕೋನಹಳ್ಳಿ ಗ್ರಾಮದ ಅಣ್ಣಪ್ಪನಾಯ್ಕ(27 ), ಚೇತನ್ (26) ಬಂಧಿತರು ಸಾಲಬಾಳು ಗ್ರಾಮದ ಕಲ್ಲಗಿರಿ ರಂಗನಾಥಸ್ವಾಮಿ ಬೆಟ್ಟಕ್ಕೆ ಬಂದಿರುವ ಜನರನ್ನು ಹೆದರಿಸಿ, ಬಲವಂತವಾಗಿ ಹಣ ಕಿತ್ತುಕೊಂಡು ಹೋಗಿದ್ದ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Read also : ಪತ್ತೆಯಾದ ಬಾಲಕಾರ್ಮಿಕರ ಬಗ್ಗೆ ನಿಗಾವಹಿಸಿ : ನ್ಯಾ.ಮಹಾವೀರ ಮ.ಕರೆಣ್ಣವರ
ಎಸ್ಪಿ ಉಮಾ ಪ್ರಶಾಂತ್, ಎಎಸ್ಪಿ ಪರಮೇಶ್ವರ ಹೆಗಡೆ, ಚನ್ನಗಿರಿ ಡಿವೈಎಸ್ಪಿ ಎಸ್.ರುದ್ರಪ್ಪ ಉಜ್ಜನಕೊಪ್ಪ ಮಾರ್ಗದರ್ಶನದಲ್ಲಿ ನ್ಯಾಮತಿ ಪೊಲೀಸ್ ಠಾಣೆಯ ನಿರೀಕ್ಷಕ ಎನ್.ಎಸ್.ರವಿ ನೇತೃತ್ವದಲ್ಲಿ ಅಧಿಕಾರಿ, ಸಿಬ್ಬಂದಿಗಳ ತಂಡವು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
