Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಉಮಾ ಮಹೇಶ್ವರ ಜಾತ್ರೆ:ಸಾವಿರಾರು ಯುವಕರು ಉರುಳು ಸೇವೆ  
ತಾಜಾ ಸುದ್ದಿ

ಉಮಾ ಮಹೇಶ್ವರ ಜಾತ್ರೆ:ಸಾವಿರಾರು ಯುವಕರು ಉರುಳು ಸೇವೆ  

Dinamaana Kannada News
Last updated: December 16, 2025 9:42 am
Dinamaana Kannada News
Share
Uma Maheshwar Fair davanagere
SHARE

ದಾವಣಗೆರೆ.ಡಿ.16 : ಕಾರ್ತಿಕ ಮಾಸದಲ್ಲಿ ಜಿಲ್ಲೆಯ ಅನೇಕ ಗ್ರಾಮಗಳಲ್ಲಿ ಉಮಾ ಮಹೇಶ್ವರ ಜಾತ್ರೆ ನಡೆಯುವುದು ಸಾಮಾನ್ಯ, ಆದರೆ ತಾಲ್ಲೂಕಿನ ನಾಗನೂರು ಗ್ರಾಮದಲ್ಲಿ ಹರಕೆ ಹೊತ್ತ ಸಾವಿರಾರು ಯುವಕರು ಉರುಳು ಸೇವೆ ಮಾಡುವುದು ಹಬ್ಬದ ವಿಶೇಷಗಳಲ್ಲಿ ಒಂದಾಗಿದೆ.

ಮೂರು ದಿನಗಳ ಕಾಲ ನಡೆಯುವ ಈ ಅದ್ದೂರಿ ಜಾತ್ರೆಯಲ್ಲಿ ಅಬಾಲ ವೃದ್ಧರಾದಿಯಾಗಿ ಗ್ರಾಮದ ದೇವಸ್ಥಾನ ರಸ್ತೆಯಲ್ಲಿ ಉರುಳು ಸೇವೆ ಮಾಡುವುದು ಶತಮಾನಗಳಿಂದ ನಡೆದುಕೊಂಡು ಬಂದಿದೆ. ಮಾಗಿಯ ಚಳಿಯನ್ನು ಲೆಕ್ಕಿಸದೇ ಮಂಗಳವಾರ ಮುಂಜಾನೆ ಸಾವಿರಾರು ಯುವಕರು ಉರಳು ಸೇವೆ ಹರಕೆ ತೀರಿಸಿದರು.

seem1 dinamaana ads

ಶೈಕ್ಷಣಿಕ ಪ್ರಗತಿ, ಮದುವೆ, ಆರೋಗ್ಯ ಸಮಸ್ಯೆ ನಿವಾರಣೆ ಮತ್ತಿತರೆ ಹರಕೆ ಹೊತ್ತು, ಓಂ ನಮಃ ಶಿವಾಯ ಎಂಬ ಉದ್ಗಾರದೊಂದಿಗೆ ಸುಮಾರು ಅರ್ಧ ಮೈಲಿವರೆಗೆ ಉರುಳುಸೇವೆ ಮಾಡಿ ಭಕ್ತಿ ಮೆರೆದರು.

ಇವರ ಹಾದಿ ಯುದ್ದಕ್ಕೂ ಹೆಣ್ಣು ಮಕ್ಕಳು ಬಿಂದಿಗೆಗಳಿಂದ ಹೊತ್ತು ತಂದ ನೀರೆರೆದರು. ಹೊರವಲಯದ ಉಮಾಮಹೇಶ್ವರ ಸ್ವಾಮಿ ಗದ್ದುಗೆ ಸ್ಥಳವನ್ನು ನೆರಕೆ-ಬಟ್ಟೆಗಳಿಂದ ಸಿಂಗರಿಸಿ, ಉತ್ಸವಮೂರ್ತಿಗಳನ್ನು ಕೂರಿಸಲಾಗಿತ್ತು. ವಿವಿಧೆಡೆಯ ನೂರಾರು ಭಕ್ತರು ದೇವರ ದರ್ಶನ ಪಡೆದರು.ಉಮಾ ಮಹೇಶ್ವರ ಜಾತ್ರೆಗೆ ಶತಮಾನಕ್ಕೂ ಹಿಂದಿನ ಇತಿಹಾಸವಿದೆ.

ಸೋಮವಾರ ಸಂಜೆ ಶಿರಮಗೊಂಡನಹಳ್ಳಿಯ ಶ್ರೀ ಚನ್ನಬಸವೇಶ್ವರ ಸ್ವಾಮಿಯನ್ನು ಸ್ವಾಗತಿಸಿ, ಗ್ರಾಮದ ಶ್ರೀ ಬಸವೇಶ್ವರ, ಶ್ರೀ ಆಂಜನೇಯ ಸ್ವಾಮಿ ಮೂರ್ತಿಗಳನ್ನೂ ಪಲ್ಲಕ್ಕಿಯಲ್ಲಿರಿಸಿ, ಮಹೇಶ್ವರ ಸ್ವಾಮಿ ಗದ್ದುಗೆ ಸ್ಥಳದವರೆಗೆ ಮೆರವಣಿಗೆ ಮೂಲಕ ಕರೆ ತರಲಾಯಿತು. ನಾಗನೂರು ಮತ್ತು ಶಿರಮಗೊಂಡನಹಳ್ಳಿ ಉಭಯ ಗ್ರಾಮಗಳ ಭಕ್ತಾದಿಗಳು ಜಾತ್ರೆಯನ್ನು ನಡೆಸುವುದು ಪದ್ಧತಿಯಾಗಿದೆ.

3 ದಿನಗಳ ಕಾಲ ನಡೆಯಲಿರುವ ಜಾತ್ರೆಗಾಗಿ ನಾಗನೂರು ಗ್ರಾಮವನ್ನು  ತಳಿರು ತೋರಣ, ವಿದ್ಯುತ್ ದೀಪಾಲಂಕಾರ, ಕೇಸರಿ ಬಣ್ಣದ ಬಂಟಿಂಗ್ಸ್‌ಗಳು, ಸ್ವಾಗತ ಕಮಾನುಗಳು, ದೇವಸ್ಥಾನದ ಹೊರಗೆ ಹೂವಿನಲಂಕಾರದ ಆಕರ್ಷಣೆ ಮಾಡಲಾಗಿತ್ತು. ಭಕ್ತಾದಿಗಳ ಉರುಳು ಸೇವೆಯ ನಂತರ ಸ್ವಾಮಿಯನ್ನು ನಡೆ ಮಡಿಯಿಂದ ತೋಟದ ಮಠಕ್ಕೆ ಕರೆದೊಯ್ಯಲಾಯಿತು.

Read also : ಫೋಟೋಗ್ರಾಫರ್ ಅಸೋಸಿಯೇಷನ್ ವತಿಯಿಂದ ಎಸ್ಸೆಸ್ ಗೆ ಸಂತಾಪ

ನಂತರ ಗಂಗಾಪೂಜೆ ನಡೆಸಿ ಪ್ರಸಾದ ವಿನಿಯೋಗ ಜರುಗಿತು. ಜಾತ್ರೆಯಲ್ಲಿ ತಯಾರಿಸುವ ಸಾತ್ವಿಕ ಆಹಾರವಾದ ಅನ್ನ, ಬೆಲ್ಲ, ಹಾಲು, ಬಾಳೆಹಣ್ಣಿನ ಪ್ರಸಾದವನ್ನು ಸಾವಿರಾರು ಭಕ್ತಾದಿಗಳು ಸ್ವೀಕರಿಸಿದರು. ಮಧ್ಯಾಹ್ನ ಬೆಲ್ಲದ ಬಂಡಿ ಎತ್ತುಗಳನ್ನು ಡೊಳ್ಳು-ಹಲಗೆ ಮೆರವಣಿಗೆ ಮತ್ತು ರಾತ್ರಿ 7 ರಿಂದ ಶ್ರೀ ದುರುಗಮ್ಮನ ಕಾರ್ತಿಕೋತ್ಸವ ಜರುಗಿತು.

ಡಿ. 17ರ ಇಂದು  ಬೆಳಿಗ್ಗೆ 8 ರಿಂದ 3 ಗಂಟೆಯವರೆಗೆ ಮಠದಲ್ಲಿ ಪ್ರಸಾದ ವಿನಿಯೋಗ, ಮಧ್ಯಾಹ್ನ ಎತ್ತುಗಳ ಮೆರವಣಿಗೆ, ಸಂಜೆ ಮುಡುಪು, ಹರಕೆಯನ್ನು ತೋಟದ ಮಠಕ್ಕೆ ಮೆರದಣಿಗೆ ಮುಖಾಂತರ ಅರ್ಪಿಸುವುದು ಮತ್ತು ಮಠದ ಗದ್ದಿಗೆಯಿಂದ ಸ್ವಾಮಿಯನ್ನು ಗ್ರಾಮಸ್ಥರೆಲ್ಲರೂ ಸೇರಿ ಅದ್ದೂರಿಯ ಮೆರವಣಿಗೆಯೊಂದಿಗೆ ಊರೊಳಗೆ ಬರಮಾಡಿಕೊಳ್ಳುವುದು. ನಂತರ ಬಾವುಟ ಹರಾಜು ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.

job news dinamaana ads
TAGGED:Davanagere NewsDinamana.comKannada NewsUma Maheshwar Fairಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಫೋಟೋಗ್ರಾಫರ್ ಅಸೋಸಿಯೇಷನ್ ವತಿಯಿಂದ ಎಸ್ಸೆಸ್ ಗೆ ಸಂತಾಪ
Next Article Davanagere ನಾಳೆಯಿಂದ 3 ದಿನಗಳು ನಗರದಲ್ಲಿ ಕುಡಿಯುವ ನೀರಿನ ವಿತರಣೆಯಲ್ಲಿ ವ್ಯತ್ಯಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅಕ್ಟೋಬರ್‌ನಲ್ಲಿ ಸಾಲು-ಸಾಲು ರಜೆ.. ಎಷ್ಟು ದಿನ?

ಅಕ್ಟೋಬರ್ ತಿಂಗಳಲ್ಲಿ ಕರ್ನಾಟಕದಲ್ಲಿ ಹಬ್ಬಗಳಿಗೆಂದು 5 ದಿನಗಳು ಸರ್ಕಾರಿ ರಜೆ ಇರಲಿದೆ. ಬ್ಯಾಂಕ್‌ಗಳು 11 ದಿನ ರಜೆ ಇರಲಿದ್ದು, IT,…

By Dinamaana Kannada News

ಲೋಕಸಭಾ ಚುನಾವಣೆ  9 ನಾಮಪತ್ರ ಸಲ್ಲಿಕೆ

ದಾವಣಗೆರೆ :  ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಏಪ್ರಿಲ್ 15 ರಂದು…

By Dinamaana Kannada News

ದಾವಣಗೆರೆ | ಬೆಳೆ ವಿಮೆ ಅವಧಿ ಜುಲೈ 15 ರವರೆಗೆ ವಿಸ್ತರಣೆ

ದಾವಣಗೆರೆ : ಪ್ರಸಕ್ತ  ಸಾಲಿನ ಮುಂಗಾರು ಹಂಗಾಮಿನಲ್ಲಿ ಮರುವಿನ್ಯಾಸಗೊಳಿಸಿದ ಹವಮಾನ ಆಧಾರಿತ ಬೆಳೆ ವಿಮೆ ಯೋಜನೆಯಲ್ಲಿ ರೈತರ ನೋಂದಣಿ ಅವಧಿಯನ್ನು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?