ದಾವಣಗೆರೆ ಡಿ.04: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಚನ್ನಗಿರಿ ತಾಲ್ಲೂಕು ಆಸ್ಪತ್ರೆ ಹಾಗೂ ಕುಂದುವಾಡ ರಸ್ತೆಯಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಗುರುವಾರ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆರಂಭದಲ್ಲಿ ಚನ್ನಗಿರಿ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ ವಿವಿಧ ವಾರ್ಡ್, ಔಷಧಿ ವಿತರಣೆ ಸ್ಥಳ, ವಿವಿಧ ಕೊಠಡಿಗಳಿಗೆ ಭೇಟಿ ನೀಡಿ ರೋಗಿಗಳ ಕ್ಷೇಮ ವಿಚಾರಿಸಿ ವೈದ್ಯಕೀಯ ಸೌಲಭ್ಯಗಳ ಬಗೆ ಮಾಹಿತಿ ಪಡೆದರು. ಆಸ್ಪತ್ರೆಗೆ ಬಂದAತಹ ರೋಗಿಗಳಿಗೆ ಹೆಚ್ಚು ಕಾಯಿಸದೆ ತ್ವರಿತವಾಗಿ ಸ್ಪಂದಿಸುವAತೆ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು
ಆಸ್ಪತ್ರೆಯಲ್ಲಿ ಯಾವುದೇ ಕಾರಣಕ್ಕೂ ಔಷಧಿ ದಾಸ್ತಾನು ಇಲ್ಲವೆಂದು ಔಷಧಿ ತರಲು ಆಸ್ಪತ್ರೆಯಿಂದ ಹೊರಗಡೆ ಚೀಟಿ ಬರೆದು ಕೊಡುವಂತಿಲ್ಲ. ದಾಸ್ತಾನಿಲ್ಲದ ಔಷಧಿಗಳ ಬಗ್ಗೆ ಜಿಲ್ಲಾಧಿಕಾರಿಗಳ ಬಳಿ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಪಡೆದುಕೊಂಡು ಪ್ರತಿಯೊಬ್ಬರಿಗೂ ಸಕಾಲದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಬೇಕೆಂದು ಎಚ್ಚರಿಕೆ ನೀಡಿದರು.
Read also : ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಕುಂದುವಾಡ ರಸ್ತೆಯಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ಅಡುಗೆ ಕೋಣೆ, ಭೋಜನಾಲಯ, ವಿದ್ಯಾರ್ಥಿನಿಲಯ ವಿವಿಧ ಕೊಠಡಿಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಸಮಯಕ್ಕೆ ಸರಿಯಾದ ಊಟೋಪಚಾರ, ಕುಡಿಯುವ ನೀರು, ಇನ್ನಿತರೆ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.
ಶುಚಿ ಮತ್ತು ರುಚಿಯಾದ ಆಹಾರ ನೀಡುವುದರ ಜತೆಗೆ ಸ್ವಚ್ಛತೆ ಕಾಪಾಡಬೇಕು. ವಿದ್ಯಾರ್ಥಿಗಳಿಗೆ ತಾಜಾ ತರಕಾರಿ, ಕಾಳು ಮುಂತಾದ ಪೌಷ್ಠಿಕಾಂಶಯುಕ್ತ ಉತ್ಪನ್ನಗಳೊಂದಿಗೆ ಗುಣಮಟ್ಟದ ಆಹಾರ ನೀಡಬೇಕು ಎಂದು ತಿಳಿಸಿದರು.
