Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜಿಲ್ಲಾಸ್ಪತ್ರೆಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಭೇಟಿ, ಪರಿಶೀಲನೆ
ತಾಜಾ ಸುದ್ದಿ

ಜಿಲ್ಲಾಸ್ಪತ್ರೆಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಭೇಟಿ, ಪರಿಶೀಲನೆ

Dinamaana Kannada News
Last updated: April 23, 2025 2:02 pm
Dinamaana Kannada News
Share
Davanagere
Davanagere
SHARE
ದಾವಣಗೆರೆ (Davanagere) :  ನಗರದ ಚಿಗಟೇರಿ ಜಿಲ್ಲಾಸ್ಪತ್ರೆಗೆ ಬುಧವಾರ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಭೇಟಿ ನೀಡಿ, ಪರಿಶೀಲಿಸಿದರು.ಮೊದಲಿಗೆ ಆಸ್ಪತ್ರೆಯ ಹೊರ ರೋಗಿಗಳ ನೊಂದಣಿ ವಿಭಾಗಕ್ಕೆ ಭೇಟಿ ನೀಡಿದ ನ್ಯಾ.ಬಿ.ವೀರಪ್ಪ ರೋಗಿಗಳು ಹಾಗೂ ಸಾರ್ವಜನಿಕರದಿಂದ ಆಸ್ಪತ್ರೆಯಲ್ಲಿ  ದೊರಕುತ್ತಿರುವ ಚಿಕಿತ್ಸಾ ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಂಡರು.
ಈ ವೇಳೆ ಸಾರ್ವಜನಿಕರು ಸ್ಕ್ಯಾನಿಂಗ್ ಸೆಂಟರ್ ಎದುರಿನ ಮಿನಿ ಆಪರೇಷನ್ ಥೇಯಟರ್ ಸ್ಥಳಾಂತರ ಮಾಡುವಂತೆ ಮನವಿ ಮಾಡಿದರು. ವೈದ್ಯಾಧಿಕಾರಿಗಳು ಸ್ಪಂದಿಸಿತ್ತಿಲ್ಲ ಎಂದು ಅಹವಾಲು ಹೇಳಿದರು.
ತಕ್ಷಣವೇ ನ್ಯಾ.ಬಿ.ವೀರಪ್ಪ ಸ್ಕ್ಯಾನಿಂಗ್ ಸೆಂಟರ್ ಹಾಗೂ ಮಿನಿ ಆಪರೇಷನ್ ಥೇಯಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಹೃದ್ರೋಗ ವಿಭಾಗ, ತುರ್ತು ಚಿಕಿತ್ಸಾ ವಿಭಾಗ, ಓಬಿಜಿ ವಾರ್ಡ್ ಸೇರಿದಂತೆ ವಿವಿಧ ವಾರ್ಡ್ಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿ-ಗತಿ ಪರಿಶೀಲಿಸಿದರು.ವಿವಿಧ ವಾರ್ಡ್‌ಗಳಿಗೆ ದಾಖಲಾಗಿದ್ದ ರೋಗಿಗಳ ಆರೋಗ್ಯ ವಿಚಾರಿಸಿದರು. ರೋಗಿಗಳಿಗೆ ಗುಣಮಟ್ಟ ಸೇವೆ ನೀಡಬೇಕು ಎಂದು ಅಲ್ಲಿನ ಕರ್ತವ್ಯ ನಿರತ ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಂತರ ಶವಾಗಾರ ಹಾಗೂ ಜೀವ ವೈದ್ಯಕೀಯ ತ್ಯಾಜ್ಯ ಶೇಖರಣಾ ಘಟಕಕ್ಕೆ ಭೇಟಿ ನೀಡಿದ ನ್ಯಾ.ಬಿ.ವೀರಪ್ಪ ಅವರು, ವೈದ್ಯಕೀಯ ತ್ಯಾಜ್ಯಗಳನ್ನು ಸರಿಯಾಗಿ ವಿಲೇವಾರಿ ಮಾಡಲಾಗುತ್ತಿದೆಯೇ? ಶವಾಗಾರದ ತ್ಯಾಜ್ಯ ಸಮೀಪದ ನಾಲೆಗೆ ಸೇರುತ್ತಿದೆ? ಎನ್ನುವುದರ ಬಗ್ಗೆ ಪರಿಶೀಲಿಸಿ ಮಹಾನಗರ ಪಾಲಿಕೆ ಹಾಗೂ ಪರಿಸರ ಅಧಿಕಾರಿಗಳು ವರದಿ ನೀಡುವಂತೆ ಸೂಚಿಸಿದರು. ಇದೇ ವೇಳೆ ನೂತನ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಔಷಧ ಉಗ್ರಾಣಕ್ಕೆ ಭೇಟಿ:
ಜಿಲ್ಲಾ ಆಸ್ಪತ್ರೆ ಆವರಣದಲ್ಲಿನ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮತದ ಜಿಲ್ಲಾ ಔಷಧ ಉಗ್ರಾಣಕ್ಕೆ ಭೇಟಿ ನೀಡಿದ ನ್ಯಾ.ಬಿ.ವೀರಪ್ಪ ಯಾವುದೇ ಆಸ್ಪತ್ರೆಗಳಗೂ ಅವಧಿ ಮೀರಿದ ಔಷಧಿ, ಶಸ್ತ್ರಚಿಕಿತ್ಸೆಕ ವಸ್ತುಗಳನ್ನು ಯಾವುದೇ ಕಾರಣಕ್ಕೂ ವಿತರಿಸುವಂತಿಲ್ಲ ಎಚ್ಚರಿಕೆ ನೀಡಿದರು. ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಸರ್ಕಾರ ಔಷಧಗಳನ್ನು ಖರೀದಿಸುತ್ತದೆ. ಆದರೆ ಸಮಯಕ್ಕೆ ಸರಿಯಾಗಿ ಆಸ್ಪತ್ರೆ‌ಗಳಿಗೆ ಹಂಚಿ, ರೋಗಿಗಳಿಗೆ ವಿತರಿಸದೇ, ಔಷಧಗಳ ಅವಧಿ ಮುಗಿದು ಹೊದರೆ ಏನು ಅರ್ಥ? ಉಗ್ರಾಣದಲ್ಲಿ ಅವಧಿ ಮೀರಿದ ಔಷಧಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡದೆ ಹಾಗೇ ಏಕೆ ಇಟ್ಟುಕೊಂಡಿದ್ದೀರಿ?  ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.2022 ರ ಡಿಸೆಂಬರ್ ಮಾಹೆಯಿಂದ ಇಲ್ಲಿಯವರೆಗೆ ಅವಧಿ ಮೀರಿದ ಔಷಧಗಳ ಮೌಲ್ಯ ಎಷ್ಟು ಎಂಬುದನ್ನು ಲೋಕಾಯುಕ್ತಕ್ಕೆ ವಿವರವಾಗಿ ವರದಿ ನೀಡುವಂತೆ ಔಷಧ ಉಗ್ರಾಣಾದ ವೈದ್ಯಾಧಿಕಾರಿಗೆ ನ್ಯಾಯಮೂರ್ತಿ ಬಿ.ವಿರಪ್ಪ ಸೂಚಿಸಿದರು.

Read also : ಉಪಲೋಕಾಯುಕ್ತ ಬಿ.ವೀರಪ್ಪ ಅವರಿಂದ ನಗರದಲ್ಲಿ ಸಂಚಾರ, ಪರಿಶೀಲನೆ

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ ಇಟ್ನಾಳ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ. ಎನ್. ಲೋಕೇಶ್, , ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ. ಮಂಜುನಾಥ್,
ಕರ್ನಾಟಕ ಲೋಕಾಯುಕ್ತ ಅಪರ ನಿಬಂಧಕರಾದ ಕೆ.ಎಂ.ರಾಜಶೇಖರ್, ಅರವಿಂದ.ಎನ್.ವಿ, ವಿ.ಎನ್.ಮಿಲನ,ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್. ಕೌಲಪೂರೆ, ಉಪವಿಭಾಗಾಧಿಕಾರಿ ಸೋತೋಷ್, ಜಿಲ್ಲಾ ಶಸ್ತ್ರಚಿಕಿತ್ಸೆಕ ಡಾ.ನಾಗೇಂದ್ರಪ್ಪ ಸೇರಿದಂತೆ  ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ಮತ್ತಿತರರು ಹಾಜರಿದ್ದರು.
TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article B. Veerappa, Upalokayukta ಉಪಲೋಕಾಯುಕ್ತ ಬಿ.ವೀರಪ್ಪ ಅವರಿಂದ ನಗರದಲ್ಲಿ ಸಂಚಾರ, ಪರಿಶೀಲನೆ
Next Article Davanagere ಅಕ್ರಮ ಕ್ರಷರ್‌ಗಳಿಗೆ ಕಡಿವಾಣ ಹಾಕಲು ನ್ಯಾ. ಬಿ.ವೀರಪ್ಪ ಸೂಚನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಗೌರಿ ಗಣೇಶ – ಈದ್ ಮಿಲಾದ್ ಹಬ್ಬ : ಪೊಲೀಸ್ ಪಥ ಸಂಚಲನ

ದಾವಣಗೆರೆ :  ಗೌರಿ ಗಣೇಶ  ಹಾಗೂ ಈದ್ ಮಿಲಾದ್ ಹಬ್ಬಗಳ  ಹಿನ್ನೆಲೆಯಲ್ಲಿ,  ಕಾನೂನು & ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕರಲ್ಲಿ…

By Dinamaana Kannada News

Davanagere | ಪಾರ್ಕ್ ಜಾಗದಲ್ಲಿ ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ಡಿಎಸ್‍ಎಸ್ ವಿರೋಧ

ದಾವಣಗೆರೆ (Davanagere): ಪಾರ್ಕ್ ಜಾಗದಲ್ಲಿ ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ಡಿಎಸ್‍ಎಸ್ ಸಂಘಟನೆ ವಿರೋಧ ವ್ಯಕ್ತಪಡಿಸಿ ದಾವಣಗೆರೆ ತಹಶೀಲ್ದಾರ ಅವರಿಗೆ ಮನವಿ…

By Dinamaana Kannada News

ಬಿಸಿಯೂಟ ತಯಾರಕರ ಗೌರವಧನದಲ್ಲಿ ಕೇಂದ್ರದ ಪಾಲು ಹೆಚ್ಚಿಸಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಆಗ್ರಹ

ನವದೆಹಲಿ (Davanagere):  ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ಹೋಗಲಾಡಿಸಲು ಪಿ.ಎಂ ಪೋಶನ್ ಯೋಜನೆ ಅಡಿಯಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯು ಕಾರ್ಯನಿರ್ವಹಿಸುತ್ತಿದ್ದು, ಕೇಂದ್ರ ಸರ್ಕಾರದ…

By Dinamaana Kannada News

You Might Also Like

Davanagere crime news
ಅಪರಾಧ ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ

By Dinamaana Kannada News
Power outage
ತಾಜಾ ಸುದ್ದಿ

ನಗರದ ವಿವಿಧ ಪ್ರದೇಶಗಳಲ್ಲಿ ಜ.24 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಉಚಿತ ಆರೋಗ್ಯ ತಪಾಸಣಾ ಶಿಬಿರ

By Dinamaana Kannada News
Davanagere
ತಾಜಾ ಸುದ್ದಿ

ಗಣಿತದ ಮೂಲಕ ಸಮಸ್ಯೆ ಪರಿಹಾರ ಕೌಶಲ್ಯವನ್ನು ಬೆಳೆಸಿಕೊಳ್ಳಿ:ನ್ಯಾ.ಮಹಾವೀರ ಎಂ.ಕರೇಣ್ಣವರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?