ದಾವಣಗೆರೆ (Davanagere) : ಕಾನೂನು ಈ ದೇಶದ ಜನರಿಗಾಗಿಯೇ ಇದೆ. ಕಾನೂನು ಬಗ್ಗೆ ಭಯಬೇಡ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣವರ ಹೇಳಿದರು.
ಇಲ್ಲಿನ ರೋಟರಿ ಬಾಲಭವನದಲ್ಲಿ ವಾಲ್ಮೀಕಿ ಪ್ರತಿಷ್ಠಾನ, ಸಾರ್ವಜನಿಕ ವಾಲ್ಮೀಕಿ ಜಯಂತ್ಯೋತ್ಸವ ಸಮಿತಿಗಳ ಆಶ್ರಯದಲ್ಲಿ 3 ನೇ ವರ್ಷದ ಶ್ರೀ ವಾಲ್ಮೀಕಿ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಜನ ಸಾಮಾನ್ಯರಿಗೆ ಕಾನೂನು ಸೇವೆಗಳ ಕುರಿತು ಮಾಹಿತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಯಾರಿಗೆ ಅನ್ಯಾಯವಾದರೂ ನ್ಯಾಯ ಒದಗಿಸಲು ಕಾನೂನು ಇದೆ. ನ್ಯಾಯ ಸಿಗುತ್ತದೆಯೋ ಇಲ್ಲವೋ ಎನ್ನುವ ಚಿಂತೆ ಮಾಡದೆ. ಕಾನೂನು ಸೇವಾ ಪ್ರಾಧಿಕಾರ ಸಂಪರ್ಕಿಸಬೇಕು. ಇಲ್ಲಿ ಉಚಿತ ಕಾನೂನು ನೆರವು ಸಿಗಲಿದೆ ಎಂದು ಹೇಳಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್.ಅರುಣ್ ಕುಮಾರ್ ಮಾತನಾಡಿ, ದೌರ್ಜನ್ಯ, ಅನ್ಯಾಯವಾದಾಗ ಪ್ರಶ್ನಿಸುವ ಗುಣವನ್ನು ಸಂವಿಧಾನ ನಮಗೆ ನೀಡಿದೆ. ಈ ರೀತಿಯ ಸಂವಿಧಾನ ಜಗತ್ತಿನ ಯಾವ ದೇಶದಲ್ಲಿಯೂ ಇಲ್ಲ ಎಂದರು.
ಹಿರಿಯ ನ್ಯಾಯವಾದಿ ಬಿ.ಎಂ.ಹನುಮಂತಪ್ಪ ಮಾತನಾಡಿದರು. ಸಮಿತಿಯ ಮುಖಂಡ ಕರಿಯಪ್ಪ ನಾಯಕ ಅಧ್ಯಕ್ಷತೆ ವಹಿಸಿದ್ದರು.
Read also : Davanagere | ಬಾರದ ವಾರ್ಡನ್ ವಿರುದ್ಧ ಶಾಸಕ ಬಸವಂತಪ್ಪ ಗರಂ
ಅಣ್ಣಾಪುರದ ಹೇಮಣ್ಣ, ಹಿರಿಯ ವಕೀಲ ಆಂಜನೇಯ ಗುರೂಜಿ . ಸಾರ್ವಜನಿಕ ವಾಲ್ಮೀಕಿ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್, ಸಮಿತಿ ಸದಸ್ಯೆ ನಳಿನಮ್ಮ, ರಾಮಚಂದ್ರಪ್ಪ, ಅಂತರಾಷ್ಟ್ರೀಯ ಈಜುಪಟು ರೇವತಿ ನಾಯಕ ಸೇರಿದಂತೆ ಸಮಿತಿಯ ಪದಾಧಿಕಾರಿಗಳು, ಸೀತಮ್ಮ ಕಾಲೇಜಿನ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.