ದಾವಣಗೆರೆ : ಮತ ಕಳ್ಳತನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಂಟಕವಾಗಿದೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವುದು ಅವಶ್ಯವಾಗಿದೆ ಎಂದು ಕೆಪಿಸಿಸಿ ರಿಸರ್ಚ್ ಅಂಡ್ ಅನಲಿಸಿಸ್ ವಿಂಗ್ ರಾಜ್ಯ ಸಂಚಾಲಕರು ಹಾಗೂ ಕೆಪಿಸಿಸಿ ವಿಭಾಗದ ಮಾಧ್ಯಮ ವಕ್ತಾರರು ಹಾಗೂ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ವಿನಾಯಕ ಬಿ.ಎನ್ ಹೇಳಿದ್ದಾರೆ.
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಚುನಾವಣಾ ಆಯೋಗವನ್ನು ಮತಕಳ್ಳತನಕ್ಕೆ ಬಳಸಿಕೊಂಡಿರುವುದು ಪ್ರಜಾತಂತ್ರಕ್ಕೆ ಕಳಂಕತಂದಿದೆ. ಲೋಕಸಭಾ ಚುನಾವಣೆಯಲ್ಲಿ ಮತ ಕಳ್ಳತನ ನಡೆದಿರುವ ಕುರಿತು ರಾಹುಲ್ ಗಾಂಧಿ ನೇತೃತ್ವದಲ್ಲಿ ಆ.5 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ರ್ಯಾಲಿ ಹಮ್ಮಿಕೊಳ್ಳಲಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಹಾಗೂ ಕರ್ನಾಟಕ ಉಸ್ತುವಾರಿಗಳು ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ರಣದೀಪ್ ಸುರ್ಜಿವಾಲ, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ. ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್. ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಯೂರ ಜಯಕುಮಾರ್ ಹಾಗೂ ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ಸಚಿವರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಎಲ್ಲ ಸಿಬ್ಬಂದಿ ವರ್ಗವುಪಾಲ್ಗೊಳ್ಳಲಿದೆ ದಾವಣಗೆರೆ ಜಿಲ್ಲೆಯ ಎಲ್ಲಾ ಶಾಸಕರು ಭಾಗಿಯಾಗಲಿದ್ದಾರೆ.
Read also : ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ
ದಾವಣಗೆರೆ ಜಿಲ್ಲೆಯಿಂದ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಭಾಗವಹಿಸಬೇಕು, ಜಿಲ್ಲೆಯಿಂದ ಕನಿಷ್ಠ 5 ಸಾವಿರ ಜನರು ಪ್ರತಿಭಟನೆಯಲ್ಲಿ ಸಾಧ್ಯವಾದಷ್ಟು ಯುವಕರು ಭಾಗಿಯಾಗಿ ರಾಷ್ಟ್ರದ ಸ್ಥಿತಿಗತಿಯ ಕುರಿತು ತಿಳಿದುಕೊಳ್ಳಬೇಕಾಗಿದೆ .
ಯಾರ್ಲಿಯಲ್ಲಿ ರಾಹುಲ್ ಗಾಂಧಿಯವರು ಮತ ಕಳ್ಳತನದ ಕುರಿತಾಗಿ ಗಂಭೀರ ಚರ್ಚೆ ನಡೆಸಲಿದ್ದಾರೆ. ಮತ ಕಳ್ಳತನದ ಕುರಿತಾಗಿ ದಾಖಲೆಯ ಸಮೇತ ಸತ್ಯ ಬಿಚ್ಚಿಡಲಿದ್ದಾರೆ. ರಾಷ್ಟ್ರದಲ್ಲಿ ಬಿಜೆಪಿ ಅಧಿಕಾರದಲ್ಲಿರುವುದರಿಂದ ಚುನಾವಣಾ ಆಯೋಗ ಅದರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು. ವಿನಾಯಕ ಬಿ. ಎನ್. ಪ್ರಕಟಣೆಯಲ್ಲಿ ಗಂಭೀರವಾಗಿ ಆರೋಪಿಸಿದ್ದಾರೆ