ದಾವಣಗೆರೆ,ಜ.25 : ಮತದಾನ ದೇಶದ ಅಭಿವೃದ್ದಿಯ ದಿಕ್ಸೂಚಿ ಯಾಗಿದ್ದು ಮತದಾನದಿಂದ ಯಾರು ಹೊರಗುಳಿಯಬಾರದು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ‘ರಾಷ್ಟ್ರೀಯ ಮತದಾರರ ದಿನ’ ಉದ್ಘಾಟಿಸಿ ಮಾತನಾಡಿದರು.
ಮತದಾನದ ಮಹತ್ವವನ್ನು ಒತ್ತಿ ಹೇಳಿ ಮತದಾನವನ್ನು
ಹಬ್ಬದಂತೆ ಆಚರಿಸಿ: ಮತದಾನದ ದಿನವನ್ನು ಕೇವಲ ರಜೆಯೆಂದು ಭಾವಿಸದೆ, ಅದನ್ನು ಒಂದು ರಾಷ್ಟ್ರೀಯ ಹಬ್ಬದಂತೆ ಸಂಭ್ರಮದಿಂದ ಆಚರಿಸಬೇಕು. ಬಡತನ, ನಿರುದ್ಯೋಗ ಮತ್ತು ಮೂಲಭೂತ ಸೌಕರ್ಯಗಳ ಸಮಸ್ಯೆಗೆ ಪರಿಹಾರ ಬೇಕೆಂದರೆ, ಪ್ರತಿಯೊಬ್ಬರೂ ಮತ ಚಲಾಯಿಸಿ ದಕ್ಷ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು.
ದೇಶದಲ್ಲಿ ಶ್ರೀಮಂತ-ಬಡವ, ಗಂಡು-ಹೆಣ್ಣು ಎಂಬ ಭೇದವಿಲ್ಲದೆ ಎಲ್ಲರಿಗೂ ಸಮಾನ ಮತದಾನದ ಹಕ್ಕಿದೆ. ಇದನ್ನು ಬಳಸಿಕೊಳ್ಳುವುದು ನಾಗರಿಕರ ಕರ್ತವ್ಯ. ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲಿಸಿಕೊಳ್ಳುವುದು ಮತ್ತು ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದು ಅತ್ಯಗತ್ಯ. “ನಿಮ್ಮ ಹಕ್ಕು ನಿಮಗೆ ತಿಳಿಯದಿದ್ದರೆ, ನಿಮ್ಮ ಮೌಲ್ಯ ನಿಮಗೆ ಅರ್ಥವಾಗುವುದಿಲ್ಲ. ಪ್ರಜಾಪ್ರಭುತ್ವವನ್ನು ಶಕ್ತಿಶಾಲಿ ಮಾಡಲು ಮತದಾನ ಕಡ್ಡಾಯ ಎಂದರು.
Read also : ಜಗತ್ತಿನ ಅಸ್ತಿತ್ವಕ್ಕೆ ಸೂರ್ಯನ ಕೊಡುಗೆ ಅಪಾರವಾದದ್ದು : ಹಿರಿಯ ಪ್ರವಚನಕಾರ ಶ್ರೀ ಗೋಪಾಲಾಚಾರ್ ಮಣ್ಣೂರ್
ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ : ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಸಿಇಓ ಗಿತ್ತೆ ಮಾಧವ ವಿಠ್ಠಲರಾವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
