Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ವಕ್ಫ್ ವಿವಾದ: ಬಿಜೆಪಿ ಕುತಂತ್ರಕ್ಕೆ ಕಿವಿಗೊಡದಿರಿ; ರಾಜ್ಯದ ಜನರಿಗೆ ಸಿದ್ದು ಮನವಿ
Blog

ವಕ್ಫ್ ವಿವಾದ: ಬಿಜೆಪಿ ಕುತಂತ್ರಕ್ಕೆ ಕಿವಿಗೊಡದಿರಿ; ರಾಜ್ಯದ ಜನರಿಗೆ ಸಿದ್ದು ಮನವಿ

Dinamaana Kannada News
Last updated: November 3, 2024 2:34 pm
Dinamaana Kannada News
Share
Waqf Controversy CM Siddaramaiah BJP Protest Prime Minister Narendra Modi
SHARE

ವಕ್ಫ್ ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್ ಗಳನ್ನು ತಕ್ಷಣ ವಾಪಸ್ ಪಡೆಯಲು ನಮ್ಮ ಸರ್ಕಾರ ಸೂಚನೆ ನೀಡಿದ ನಂತರವೂ  ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿರುವುದಕ್ಕೆ ರಾಜಕೀಯ ಲಾಭದ ದುರುದ್ದೇಶ ಇದೆಯೇ ಹೊರತು ಇದರಲ್ಲಿ ರೈತರ ಹಿತಾಸಕ್ತಿ ರಕ್ಷಣೆಯ ಯಾವ ಸದುದ್ದೇಶ ಇಲ್ಲ ಎನ್ನುವುದನ್ನು ರಾಜ್ಯದ ಜನತೆ ಅರ್ಥಮಾಡಿಕೊಳ್ಳಬೇಕೆಂದು ಮನವಿ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಕ್ಫ್‌ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯಬೇಕು. ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟೀಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಬೇಕು.

Read Also: Davanagere | ಕನ್ನಡ ಭಾಷೆ ಬಳಕೆಯಿಂದ ಸೌಹಾರ್ಧತೆ ಹೆಚ್ಚಳ : ಮೇಯರ್‌ ಚಮನ್ ಸಾಬ್

ಕಾನೂನು ಬಾಹಿರವಾಗಿ ಹಾಗೂ ನೋಟೀಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು. ಅಧಿಕಾರಿಗಳು ಎಚ್ಚರ ವಹಿಸಿ ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು ಎಂದು ನಾನು ಸ್ಪಷ್ಟವಾಗಿ ಸೂಚನೆ ನೀಡಿದ್ದೇನೆ. ಈ ಸೂಚನೆಯ ನಂತರವೂ ಬಿಜೆಪಿ ನಾಯಕರು ಯಾವ ಕಾರಣಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ? ಎಂದು ಸಿದ್ದು ಪ್ರಶ್ನಿಸಿದ್ದಾರೆ.

ಬಿಜೆಪಿ ನಾಯಕರ ಆತ್ಮ ವಂಚನೆ ಬಯಲು

ಜಮೀನಿಗೆ ಸಂಬಂಧಿಸಿದ ವಿವಾದದಲ್ಲಿ ನೋಟಿಸ್ ನೀಡಿ ವಿವರ ಪಡೆಯುವುದು ಒಂದು ಸಾಮಾನ್ಯ ಆಡಳಿತಾತ್ಮಕ ಪ್ರಕ್ರಿಯೆ.  ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಬಿಜೆಪಿಯ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ ಮತ್ತು ಜಗದೀಶ್ ಶೆಟ್ಟರ್ ಹಾಗೂ ಜೆಡಿಎಸ್ ಪಕ್ಷದ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದ ಕಾಲದಲ್ಲಿಯೂ ನೋಟಿಸ್ ನೀಡಲಾಗಿತ್ತು. ಈ ವಿವರಗಳನ್ನು ನನ್ನ ಸಹದ್ಯೋಗಿಗಳಾಗಿರುವ ಎಂ.ಬಿ.ಪಾಟೀಲ್, ಪ್ರಿಯಾಂಕ ಖರ್ಗೆ ಮೊದಲಾದವರು ಮಾಧ್ಯಮಗಳಿಗೆ ನೀಡಿದ್ದಾರೆ.

ಬಿಜೆಪಿಯ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತಾ ‘‘ವಕ್ಫ್ ಆಸ್ತಿ ಅಲ್ಲಾಹುಗೆ ಸೇರಿದ್ದು, ಆ ಆಸ್ತಿಯನ್ನು ಹಲವರು ಕಬಳಿಸಿದ್ದಾರೆ, ಅದನ್ನು ಒಂದೊಂದು ಇಂಚು ಬಿಡದೆ ವಾಪಸು ಪಡೆಯಬೇಕು, ಇಲ್ಲದೆ ಇದ್ದರೆ ಅಲ್ಲಾಹುವಿನ ದೃಷ್ಟಿಯಲ್ಲಿ ನೀವು ತಪ್ಪಿತಸ್ಥರಾಗುತ್ತಿರಿ’’ ಎಂದು ಹೇಳಿರುವ ವೀಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ, ಇದು ಬಿಜೆಪಿ ನಾಯಕರ ಆತ್ಮವಂಚನೆಯ ನಡವಳಿಕೆಯನ್ನು ಬಯಲು ಮಾಡಿದೆ.

ಬಿಜೆಪಿ ನಾಯಕರಿಗೆ ಹೈಕಮಾಂಡಿನಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ

ರಾಜ್ಯ ಬಿಜೆಪಿಯಲ್ಲಿ  ಸರಣಿ ಪಟಾಕಿಗಳಂತೆ ಪ್ರತಿನಿತ್ಯ ಭಿನ್ನಮತ ಸ್ಪೋಟಗೊಳ್ಳುತ್ತಿದೆ. ಪರಸ್ಪರ ಆರೋಪಗಳನ್ನು ಮಾಡುವ ಮೂಲಕ ಈ ಪಕ್ಷದ ನಾಯಕರು ರಾಜ್ಯದ ಜನರ ಎದುರು ಬೆತ್ತಲಾಗುತ್ತಿದ್ದಾರೆ. ಈ ಜಗಳ ಬಗೆಹರಿಸುವ ಯಾವ ಪ್ರಯತ್ನವನ್ನೂ ಮಾಡದ ಅವರ ಪಕ್ಷದ ಹೈಕಮಾಂಡ್ ದೂರ ನಿಂತು ಚಂದ ನೋಡುತ್ತಿದೆ. ರಾಜ್ಯದ ಬಿಜೆಪಿ ನಾಯಕರಿಗೆ ಹೈಕಮಾಂಡಿನಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲದ ಹಾಗಿದೆ. ಈ ಮುಜುಗರದಿಂದ ತಪ್ಪಿಸಿಕೊಳ್ಳಲು ಬಿಜೆಪಿ ನಾಯಕರು ದಿನಕ್ಕೊಂದು ವಿವಾದಗಳನ್ನು ಸೃಷ್ಟಿಸಿ ಜನರ ಗಮನ ಬೇರೆ ಕಡೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ.

ಎಲ್ಲ ಜಾತಿ ಮತ್ತು ಧರ್ಮದಲ್ಲಿರುವ  ಬಡವರು, ರೈತರು, ಮಹಿಳೆಯರು, ಕಾರ್ಮಿಕರು ಫಲಾನುಭವಿಗಳಾಗಿರುವ ನಮ್ಮ ಗ್ಯಾರಂಟಿ ಯೋಜನೆಗಳು ಬಿಜೆಪಿ ನಾಯಕರ ನಿದ್ದೆಗೆಡಿಸಿದೆ. ತೆರಿಗೆ ಹಂಚಿಕೆ, ಜಿಎಸ್‌ಟಿ ಪರಿಹಾರ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗಳ ಅನುದಾನದಲ್ಲಿ ಕಡಿತ ಮಾಡಿ ರಾಜ್ಯವನ್ನು ಆರ್ಥಿಕ ಮುಗ್ಗಟ್ಟಿಗೆ ಸಿಕ್ಕಿಸಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವಂತೆ ಮಾಡಬೇಕೆನ್ನುವುದು ಬಿಜೆಪಿಯ ಹುನ್ನಾರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಗ್ಯಾರಂಟಿ ಕುರಿತು ಪ್ರಧಾನಿ ಮೋದಿ ಅಪಪ್ರಚಾರ

ಇದಕ್ಕಾಗಿ ಒಂದೆಡೆ ಪ್ರಧಾನಿ  ನರೇಂದ್ರ ಮೋದಿಯವರಿಂದ ಹಿಡಿದು ರಾಜ್ಯದ ಸಣ್ಣಪುಟ್ಟ ನಾಯಕರ ವರೆಗೆ ಎಲ್ಲರೂ  ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ, ಇನ್ನೊಂದೆಡೆ ಕೇಂದ್ರ ಸರ್ಕಾರದಿಂದ ನ್ಯಾಯಬದ್ಧವಾಗಿ ನಮಗೆ ಸಿಗಬೇಕಾಗಿರುವ ತೆರಿಗೆ ಹಂಚಿಕೆಯಲ್ಲಿನ ಪಾಲು ಮತ್ತು ಅನುದಾನ ನೀಡದೆ ಅನ್ಯಾಯ ಮಾಡುತ್ತಿದೆ. ಇಂತಹ ಬೆದರಿಕೆ ಮತ್ತು ಒತ್ತಡದ ತಂತ್ರಕ್ಕೆ ನಾವು ಬಗ್ಗುವುದೂ ಇಲ್ಲ, ಜಗ್ಗುವುದೂ ಇಲ್ಲ. ನುಡಿದಂತೆ ನಡೆಯುತ್ತೇವೆ ಮತ್ತು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ರಾಜಕೀಯವಾಗಿಯೇ ಎದುರಿಸುತ್ತೇವೆ.

TAGGED:BJP ProtestCM SiddaramaiahPrime Minister Narendra ModiWaqf Controversyಪ್ರಧಾನಿ ನರೇಂದ್ರ ಮೋದಿಬಿಜೆಪಿ ಪ್ರತಿಭಟನೆವಕ್ಫ್ ವಿವಾದಸಿಎಂ ಸಿದ್ದರಾಮಯ್ಯ
Share This Article
Twitter Email Copy Link Print
Previous Article DAVANAGERE Davanagere | ಕನ್ನಡ ಭಾಷೆ ಬಳಕೆಯಿಂದ  ಸೌಹಾರ್ಧತೆ ಹೆಚ್ಚಳ : ಮೇಯರ್‌ ಚಮನ್ ಸಾಬ್
Next Article ಅಟ್ಟದ ಮೇಲೆ ಕೂರುತ್ತಾರಾ ಸಂತೋಷ್?

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಶುದ್ದ ಆಹಾರ ಸೇವೆನೆಯಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ

ದಾವಣಗೆರೆ :  ಸಾತ್ವಿಕ ಶುದ್ಧ ಆಹಾರ ಪದಾರ್ಥಗಳ ಸೇವನೆಯಿಂದ ದೇಹದ ಆರೋಗ್ಯದ ಜೊತೆ ಮಾನಸಿಕ ಆರೋಗ್ಯ ಪಡೆಯಲು ಸಾಧ್ಯ ಎಂದು…

By Dinamaana Kannada News

ವೃತ್ತಿ ರಂಗಭೂಮಿ ರಂಗಾಯಣ: ದಾವಣಗೆರೆಯಲ್ಲಿ ನೂತನ ನಾಟಕಕ್ಕೆ ಕಲಾವಿದರ ಆಯ್ಕೆ

ದಾವಣಗೆರೆ: ನೂತನ ನಾಟಕದ ಸಿದ್ಧತೆಗಾಗಿ ವೃತ್ತಿ ರಂಗಭೂಮಿ ರಂಗಾಯಣ ದಾವಣಗೆರೆಯು ಕಲಾವಿದರನ್ನು ಆಹ್ವಾನಿಸಿ, ಸೆಪ್ಟೆಂಬರ್ 20, 2025 ರಂದು ನಡೆದ…

By Dinamaana Kannada News

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

ದಾವಣಗೆರೆ.ಸೆ.13. ಅನಧಿಕೃತ ಪಡಿತರ ಚೀಟಿದಾರರನ್ನು ಪತ್ತೆಹಚ್ಚಿ ಅರ್ಹ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ ವಹಿಸಲಾಗುತ್ತದೆ ಎಂದು ಆಹಾರ ಮತ್ತು…

By Dinamaana Kannada News

You Might Also Like

Political analysis
ರಾಜಕೀಯ

Political analysis|ರಾಜೀನಾಮೆ ಕೊಡ್ತೀನಿ ಅಂದ್ರಾ  ಮಂತ್ರಿ ಮಲ್ಲಿಕಾರ್ಜುನ್?

By Dinamaana Kannada News
P.R. Venkatesh
Blog

POEM|ನಸೀಬ್ ಅಪ್ನಾ ಅಪ್ನಾ:ಪಿ.ಆರ್.ವೆಂಕಟೇಶ್

By Dinamaana Kannada News
Davanagere
Blog

ದಾವಣಗೆರೆ|ರಕ್ತ ಕೇಂದ್ರಗಳಲ್ಲಿ ನಿಗದಿತ ದರಕ್ಕಿಂತ ಹೆಚ್ಚು ಪಡೆಯುವಂತಿಲ್ಲ : ಎಡಿಸಿ

By Dinamaana Kannada News
Davanagere
Blog

ಕನ್ನಡ ಕೇವಲ ಭಾಷೆಯಲ್ಲ,ಅದು ನಮ್ಮ ಬದುಕಿನ ಭಾಗ:ಡಾ.ಪುರುಷೋತ್ತಮ ಬಿಳಿಮಲೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?