ದಾವಣಗೆರೆ : ಪ್ರಸಕ್ತ ಸಾಲಿನಲ್ಲಿ ಭದ್ರಾ ಜಲಾಶಯದ ಮುಂಗಾರು ಹಂಗಾಮಿನ ಬೆಳೆಗಳಿಗೆ ಬಲದಂಡೆ ಹಾಗೂ ಎಡದಂಡೆ ಕಾಲುವೆಗಳಲ್ಲಿ ನೀರು ಹರಿಸಲಾಗುವುದು.
ಭದ್ರಾ ಜಲಾಶಯ ಯೋಜನೆ ಅಚ್ಚುಕಟ್ಟು ವ್ಯಾಪ್ತಿಯ ಮುಂಗಾರು ಬೆಳೆಗಳಿಗೆ ಭದ್ರಾ ಬಲದಂಡೆ ನಾಲೆಗೆ ಜುಲೈ 22 ರ ರಾತ್ರಿಯಿಂದ ನೀರನ್ನು ಹರಿಸಲಾಗಿದೆ ಮತ್ತು ಎಡದಂಡೆ ನಾಲೆಗೆ ನೀರು ಹರಿಸುವ ಕುರಿತು ಶೀಘ್ರದಲ್ಲಿಯೇ ದಿನಾಂಕವನ್ನು ಪ್ರಕಟಿಸಲಾಗುವುದು.
ಸಾರ್ವಜನಿಕ ಹಿತದೃಷ್ಟಿಯಿಂದ ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತ , ಬಿ.ಆರ್ ಪ್ರಾಜೆಕ್ಟ್ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
Read also : ದಾವಣಗೆರೆ ಜಿಲ್ಲೆಗೆ ಯೂರಿಯಾ ರಸಗೊಬ್ಬರ ಸಮರ್ಪಕ ಪೂರೈಕೆಗೆ ಸಂಸದೆ ಡಾ.ಪ್ರಭಾ ಮನವಿ