Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

Dinamaana Kannada News
Last updated: June 24, 2025 1:10 pm
Dinamaana Kannada News
Share
Davanagere
Davanagere
SHARE
ದಾವಣಗೆರೆ (Davanagere): ಜಿಲ್ಲೆಯ ಜೀವನಾಡಿ ಭದ್ರಾ ಜಲಾಶಯದ ನೀರು ಕೈ ತಪ್ಪುವ ಹಂತದಲ್ಲಿದೆ ಎನ್ನುವುದು ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರುಗಳಿಗೆ ಆತಂಕವಾಗಿದ್ದು, ಯಾವುದೇ ಸಂದರ್ಭದಲ್ಲಿಯು ನಿಮ್ಮೊಂದಿಗೆ ನಾವಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ ಅವರು ಅಭಯವನ್ನು ನೀಡಿದರು.
 ಗೃಹ ಕಚೇರಿಗೆ ಮಂಗಳವಾರ ಆಗಮಿಸಿದ ಭದ್ರಾ ಅಚ್ಚುಕಟ್ಟು ಭಾಗದ ರೈತರಗಳ ಮನವಿಗೆ ಸ್ಪಂದಿಸಿ ಸಚಿವರು ಮಾತನಾಡಿದರು.

2020 ರಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಜಲ ಸಂಪನ್ಮೂಲ ಇಲಾಖೆ ಅಧ್ಯಕ್ಷತೆಯಲ್ಲಿ ಸಭೆ ನಡೆದ ತೀರ್ಮಾನದಂತೆ, ಚಿತ್ರದುರ್ಗ ಜಿಲ್ಲೆಯ ಕೆಲವು ಪಟ್ಟಣಗಳು ಹಾಗೂ ಚಿಕ್ಕಮಗಳೂರು ತಾಲ್ಲೂಕಿನ ಕೆಲವು ಗ್ರಾಮಗಳ ಕುಡಿಯುವ ನೀರಿನ ವಿಷಯಕ್ಕೆ ಸಂಬಂಧ ಪಟ್ಟಂತೆ ಯೋಜನೆಯನ್ನು ರೂಪಿಸಲಾಗಿದ್ದು, ಪ್ರಸ್ತುತ ಕಾಮಗಾರಿಯನ್ನು ಕೈ ಗೆತ್ತಿಕೊಳ್ಳಲಾಗಿದೆ.  ಆದರೆ ಕಾಮಗಾರಿಯು ಅವೈಜ್ಞಾನಿಕವಾಗಿದೆ ಎನ್ನುವುದು ನಮ್ಮ ರೈತರ ಅಭಿಪ್ರಾಯವಾಗಿದ್ದು ನಾವು ಈ ಹಿಂದೆಯೇ ಕಾಮಗಾರಿಯನ್ನು ತಡೆ ಹಿಡಿಯುವಂತೆ ಕೋರಿದ್ದೇವು ಎಂದರು.
ನಮ್ಮ ಜಿಲ್ಲೆಯ ಅನ್ನದಾತರಿಂದ  ಕುಡಿಯುವ ನೀರಿನ ಬಗ್ಗೆ  ವಿರೋಧವಿಲ್ಲ. ಆದರೆ ಭದ್ರಾ ಕಾಲೂವೆ ಬಲದಂಡೆಯ (ಆರ್.ಬಿ.ಸಿ) 250 ಮೀಟರ್ ನಲ್ಲಿ ಚಾನಲ್ ಸೀಳಿ ನೀರು ತೆಗೆದುಕೋಳ್ಳುವ ವಿಚಾರಕ್ಕೆ ವಿರೋಧವಿದೆ ಎಂದರು.

ಒಟ್ಟು ಜಲಾಶಯದ ಹಿನ್ನೀರಿನಲ್ಲಿ ಕಾಮನ್ ಇಂಟ್ಯಾಕ್ ಜಾಕ್ ವೆಲ್ ನಿರ್ಮಿಸಿ ಪಂಪಿಂಗ್ ಮೂಲಕ ಕಚ್ಚಾ ಮೂಲಕ ತೆಗೆದುಕೊಳ್ಳುವುದು ಮತ್ತು ಒಟ್ಟು ಪ್ರಮಾಣದ ನೀರನ್ನು 9 ತಿಂಗಳುಗಳ ಜಲಾಶಯದ ಕ್ಯಾನಲ್ ನಿಂದ ಗ್ರಾವಟಿ ಮೂಲಕ ತೆಗೆದು ಕೊಳ್ಳುವುದು.  ಕ್ಯಾನಲ್ ನಲ್ಲಿ ನೀರು ಲಭ್ಯವಿಲ್ಲದಿರುವ ಮೂರು ತಿಂಗಳ ಅವಧಿಯಲ್ಲಿ ಭದ್ರಾ ಜಲಾಶಯ ಹಿನ್ನಿರಿನಲ್ಲಿ ಕಾಮನ್ ಇಂಟ್ಯಾಕ್ ಜಾಕ್ ವೆಲ್ ನಿರ್ಮಿಸಿ ಪಂಪಿಂಗ್ ಮೂಲಕ ಕಚ್ಚಾ ನೀರನ್ನು ತೆಗೆದುಕೊಳ್ಳುವುದರಿಂದ ಸರ್ಕಾರಕ್ಕೆ 9 ತಿಂಗಳು ವಿದ್ಯುತ್ ಶುಲ್ಕ ಉಳಿತಾಯ ಮತ್ತು ಗ್ರಾವಿಟಿ ಪ್ಲೋವನ್ನು ಸಮರ್ಥವಾಗಿ ಬಳಸಬಹುದಾಗಿದೆ ಎಂದು ತಿಳಿಸಲಾಗಿರುವುದು ಇವೆರಡು ನಮ್ಮ ಭಾಗದ ರೈತರಿಗೆ ಮಾರಕವಾಗಲಿದೆ ಎನ್ನುವುದು ಆರೋಪ.

ಜಲಾಶಯದ ಸ್ಥಳದಿಂದ ಕೇವಲ 500 ಮೀಟರ್ ದೂರದಲ್ಲಿ ಭದ್ರಾ ನದಿ ಇದ್ದು ಇಲ್ಲಿ ನೀರಿನ ಪ್ರಮಾಣ 365 ದಿನವು ಹರಿವು ಇರುವ ಕಾರಣ ನದಿ ಭಾಗದಿಂದ ಜಾಕ್‌ವೆಲ್ ನಿರ್ಮಿಸಿ ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸಿದ್ದಲ್ಲಿ ಭದ್ರಾ ಅಚ್ಚು ಕಟ್ಟಿನ ರೈತರಿಗೆ ಬೆಳೆ ಬೆಳೆಯಲು ಯಾವುದೇ ತೊಂದರೆಯಾಗುವುದಿಲ್ಲ ಎಂಬುದು ರೈತರುಗಳ ಬೇಡಿಕೆಯಾಗಿದೆ.

ಈ ಹಿನ್ನಲೆಯಲ್ಲಿ ಶೀಘ್ರದಲ್ಲಿ ಮುಖ್ಯಮಂತ್ರಿಗಳೊಂದಿಗೆ ಹಾಗೂ ಜಲ ಸಂಪನ್ಮೂಲ ಸಚಿವರ ಗಮನಕ್ಕೆ ತರಲಾಗುವುದು. ಭದ್ರಾ ಅಚ್ಚುಕಟ್ಟು ಭಾಗದ ರೈತರೊಂದಿಗೆ ನಾವಿದ್ದೇವೆ ಎಲ್ಲರೂ ಒಟ್ಟಾಗಿ ಸಮಸ್ಯೆ ಉಲ್ಬಣವಾಗದ ರೀತಿಯಲ್ಲಿ ಚರ್ಚಿಸೋಣ ಎಂದು ರೈತರಿಗೆ ಸಚಿವರು ಅಭಯವನ್ನು ನೀಡಿದರು.

Read also : ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ
ಈ ಸಂದರ್ಭದಲ್ಲಿ ಭದ್ರಾ ಮಹಾಮಂಡಳಿಯ ಅಧ್ಯಕ್ಷ ದ್ಯಾವಪ್ಪರೆಡ್ಡಿ, ಮುದೇಗೌಡ್ರು ಗಿರೀಶ್, ಮಾನಗಹಳ್ಳಿ ಪರಶುರಾಮ್, ನಂದಿಗಾವಿ ಶ್ರೀನಿವಾಸ್,  ಕಾಡಾ ಮಾಜಿ ನಿರ್ದೆಶಕು ಕೆ.ಆಂಜನೇಯ, ತಿಪ್ಪೆರುದ್ರಪ್ಪ ಸಿರಿಗೆರೆ, ಪ್ರಭು ಸಿರಿಗೆರೆ, ರೈತ ಸಂಘದ ಅಧ್ಯಕ್ಷ ನಂದಿತಾವರೆ ಮುರುಗೇಂದ್ರಪ್ಪ, ಹಳೇಬಾತಿ ಶಾಂತಪ್ಪ, ರವಿ, ಮಂಜುನಾಥ ರೆಡ್ಡಿ, ಕುಂಬಳೂರು ಗಿರೀಶ್, ಕುಂದೂರು ರಾಜಪ್ಪ, ಮಾಗೋಡ್ ದೇವೇಂದ್ರಪ್ಪ, ಅಂಜುಬಾಬು, ಕೆ.ಬಿ ಬಸವಲಿಂಗಪ್ಪ, ಕಲ್ಪನಹಳ್ಳಿ ನಾಗರಾಜ್, ಚೇತನ್, ಕೆ.ಎನ್ ಹಳ್ಳಿ ದಿವಾಕರಪ್ಪ, ಬಾತಿ ಉಮೇಶ್,  ಆಂಜನೇಯ, ಸೇರಿದಂತೆ ಕಾಡಜ್ಜಿ, ಬಿ.ಕಲ್ಪನಹಳ್ಳಿ, ಬೇತೂರು ಕಡ್ಲೇಬಾಳು, ಅರಸಾಪುರ, ಹಳೇಭಾತಿ, ದೊಡ್ಡಭಾತಿ, ನಾಗರಕಟ್ಟೆ, ರಾಂಪುರ ಹಾಗೂ ಇತರೆ ಗ್ರಾಮಗಳ ರೈತ ಮುಖಂಡರುಗಳು ಉಪಸ್ಥಿತರಿದ್ದರು.
TAGGED:Davanagere NewsDinamana.comKannada Newsದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ
Next Article Applications invited Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Political analysis|ಅರಸು, ಕೃಷ್ಣ,ಯಡಿಯೂರಪ್ಪ ಅವರಿಗೆ ನಸೀಬು ಇತ್ತು

ಇದು 1999 ರಲ್ಲಿ ನಡೆದ ಘಟನೆ. ಆ ಸಂದರ್ಭದಲ್ಲಿ ಕೆಪಿಸಿಸಿ  ಅಧ್ಯಕ್ಷ ಸ್ಥಾನಕ್ಕೆ ಲಿಂಗಾಯತ ನಾಯಕ ರಾಜಶೇಖರ ಮೂರ್ತಿ ಅವರನ್ನು…

By Dinamaana Kannada News

Davanagere | ನಶಿಸುತ್ತಿರುವ ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡಿ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ (Davanagere): ಅತೀ ಹೆಚ್ಚು ಯುವ ಸೇನಾನಿಗಳನ್ನು ದೇಶದ ಗಡಿ ಕಾಯಲು ಕಳುಹಿಸಿರುವ ಗ್ರಾಮದಲ್ಲಿ ಕ್ರೀಡೆಗೆ ಹೆಚ್ಚು ಒತ್ತು ನೀಡುತ್ತಿರುವುದು…

By Dinamaana Kannada News

Davangere | ತಾಯಿಯ ಎದೆಹಾಲಿನಷ್ಟೇ ಲಸಿಕೆಯು ಮಹತ್ವದು : ಡಾ ಅಬ್ದುಲ್ ಖಾದರ್

ಹರಿಹರ (Davangere District) :  ಬೆಂಕಿ ನಗರದ ಆರೋಗ್ಯ ಕೇಂದ್ರದಲ್ಲಿ, ರಾಷ್ಟ್ರೀಯ ಲಸಿಕಾ ಕಾರ್ಯಕ್ರಮಕ್ಕೆ ತಾಲೂಕು ಆರೋಗ್ಯ ಮತ್ತು ಕುಟುಂಬ…

By Dinamaana Kannada News

You Might Also Like

Daavanagere
ಅಪರಾಧ ಸುದ್ದಿ

ಮನೆ ಕಳ್ಳತನ ಪ್ರಕರಣ:12 ಗಂಟೆಯಲ್ಲಿ ಆರೋಪಿ ಬಂಧನ

By Dinamaana Kannada News
Daavanagere
ತಾಜಾ ಸುದ್ದಿ

ನಿಮ್ಹಾನ್ಸ್ ಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭೇಟಿ:ಸಮಗ್ರ ಪರಿಶೀಲನೆ

By Dinamaana Kannada News
Dr. D. Francis
ಅಭಿಪ್ರಾಯ

poem|ಮನವು ಹೇಳದ ಮಾತು:ಡಾ.ಡಿ. ಫ್ರಾನ್ಸಿಸ್

By Dinamaana Kannada News
B. Srinivas
ಅಭಿಪ್ರಾಯ

poem|ತಾಯಂದಿರು:ಬಿ.ಶ್ರೀನಿವಾಸ

By ಬಿ.ಶ್ರೀನಿವಾಸ
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?