Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಗ್ಯಾರಂಟಿ ಯೋಜನೆ  ಬಿಜೆಪಿ ಮೇಲೆ ಪರಿಣಾಮ ಬೀರಲ್ಲ
ತಾಜಾ ಸುದ್ದಿ

ಗ್ಯಾರಂಟಿ ಯೋಜನೆ  ಬಿಜೆಪಿ ಮೇಲೆ ಪರಿಣಾಮ ಬೀರಲ್ಲ

Dinamaana Kannada News
Last updated: April 17, 2024 5:21 am
Dinamaana Kannada News
Share
Yediyurappa
Yediyurappa.
SHARE

ದಾವಣಗೆರೆ:   ರಾಜ್ಯ ಸರಕಾರದ  ಗ್ಯಾರಂಟಿ ಯೋಜನೆಗಳು ಬಿಜೆಪಿ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಮೋದಿ ಅವರ ಹವಾದ ಮುಂದೆ  ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ನಡೆಯುವುದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆ  ನಂಬಿಕೊಂಡಿದೆ. ಇದು ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶದಲ್ಲಿ ನರೇಂದ್ರ ಮೋದಿಯವರು ಮಾಡಿರುವ ಕೆಲಸ ಕಾರ್ಯಗಳೇ ಜನರು ಮೆಚ್ಚಿದ್ದಾರೆ. ಗ್ಯಾರಂಟಿಗಳಿಗೆ ಜನರು ಮನ್ನಣೆ ನೀಡುವುದಿಲ್ಲ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಆಡಳಿತದ ವಿರುದ್ಧ ಪ್ರತಿನಿತ್ಯ ಟೀಕೆ ಮಾಡುತ್ತಿರುವ  ಕಾಂಗ್ರೆಸ್ಸಿಗರು ಮೊದಲು ಪ್ರಧಾನಿ ಅಭ್ಯರ್ಥಿ ಯಾರು ಎಂಬುದನ್ನು ಘೋಷಣೆ ಮಾಡಲಿ ಎಂದು  ಸವಾಲು ಹಾಕಿದರು.

ಜೆಡಿಎಸ್ ಮೈತ್ರಿ ಬಗ್ಗೆ ಪತ್ರಿಕ್ರಿಯಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ದೇವೇಗೌಡರ ನಿರ್ಧಾರದಿಂದ ಮೈತ್ರಿ ಮೂಲಕ ಲೋಕಸಭಾ ಚುನಾವಣೆಯನ್ನು ಎದುರಿಸುತ್ತಿದ್ದೇವೆ. ದೇವೇಗೌಡರ ಅನುಭವ, ಬಿಜೆಪಿಯ ಮೋದಿ ಅಲೆ ರಾಜ್ಯದಲ್ಲಿ ೨೮ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೈತ್ರಿಯಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿಗೆ ಅವಕಾಶ ನೀಡದೆ ಲೋಕಸಭಾ ಚುನಾವಣೆ ಸೇರಿದಂತೆ ಮುಂದೆ ಬರುವ ಸ್ಥಳೀಯ ಚುನಾವಣೆಗಳನ್ನು ಒಟ್ಟಾಗಿ ಎದುರಿಸುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮೋದಿಯವರು ಮೂರನೇ ಬಾರಿಯೂ ಪ್ರಧಾನಿ ಆಗುತ್ತಾರೆ. ರಾಜನಾಥ್ ಸಿಂಗ್ ನೇತೃತ್ವದಲ್ಲಿ ಮುಂದಿನ ಐದು ವರ್ಷಗಳ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಗಳನ್ನು ಈಗಾಗಲೇ ರೂಪಿಸಲಾಗಿದೆ. ಈ ಬಾರಿ ಲೋಕಸಭೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಹೇಳಿದರು.

ಕಾಂಗ್ರೆಸ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿರೋಧಿ ಧೋರಣೆ ಅನುಸರಿಸುತ್ತಿದೆ. ಅಂಬೇಡ್ಕರ್ ಅವರಿಗೆ ಭಾರತ ರತ್ನ ಕೊಡಲಿಲ್ಲ. ಇಂದಿರಾ ಗಾಂಧಿ ಸದಸ್ಯರೆಲ್ಲರಿಗೂ ಕೊಟ್ಟಿದೆ. ಅಂಬೇಡ್ಕರ್ ಅವರಿಗೆ ದೆಹಲಿಯಲ್ಲಿ ೬*೩ ಜಾಗ ಕೊಟ್ಟಿಲ್ಲ. ಹೀಗಾಗಿ ಮುಂಬೈನ ದಾದರ್ ನಲ್ಲಿ ಅವರ ಅಂತ್ಯ ಸಂಸ್ಕಾರ ಮಾಡಲಾಯಿತು.
ಅದೇ ದೆಹಲಿಯಲ್ಲಿ ನೆಹರೂ ೫೩  ಎಕರೆ, ಇಂದಿರಾ ಗಾಂಧಿ ಅವರಿಗೆ ೪೫ ಎಕರೆ, ರಾಜೀವ್ ಗಾಂಧಿ  ೧೫ ಎಕರೆ ಜಾಗ ಕೊಟ್ಟರು. ಅಂಬೇಡ್ಕರ್ ಅವರಿಗೆ ಜಾಗ ಕೊಡಲಿಲ್ಲ. ಇದು ಸರಿನಾ ಎಂದು ಪ್ರಶ್ನಿಸಿದರು.

ಮೋದಿ ಸರ್ಕಾರ ಅಂಬೇಡ್ಕರ್ ಊರು ಮತ್ತು ಮನೆಯನ್ನು ಅಭಿವೃದ್ಧಿ ಮಾಡಿದೆ.  ನಾಗಪುರದಲ್ಲಿ  ಅಂಬೇಡ್ಕರ್ ಅವರು ಬೌದ್ಧ ಧರ್ಮ ಸ್ವೀಕರಿಸಿದ ದೀಕ್ಷಭೂಮಿಯನ್ನು ಅಭಿವೃದ್ಧಿ ಮಾಡಿದೆ. ಹಾಗೆಯೇ ಲಂಡನ್ ನಲ್ಲಿ ಶಿಕ್ಷಣ ಪಡೆದ ಜಾಗವನ್ನು ಹಾಸ್ಟೆಲ್ ಮಾಡಿದೆ. ಅಂಬೇಡ್ಕರ್ ಅವರು ಸಂಸದರಾಗಿ ದೆಹಲಿಯಲ್ಲಿದ್ದ ಮನೆಯನ್ನು ಮ್ಯೂಸಿಯಂ ಆಗಿ ಮಾಡಿದೆ. ಕಾಂಗ್ರೆಸ್ ಎರಡು ಚುನಾವಣೆಗಳನ್ನು ಅಂಬೇಡ್ಕರ್ ಅವರನ್ನು ಅಪಮಾನ ಮಾಡಿದೆ ಎಂದು ಟೀಕಿಸಿದರು.

ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಎಸ್ ಸಿ- ಎಸ್ ಟಿ ಅಭಿವೃದ್ಧಿಗೆ ಮೀಸಲಿಟ್ಟ ಅನುಧಾನವನ್ನು ಬೇರೆ ಅಭಿವೃದ್ಧಿಗೆ ಬಳಜೆ ಮಾಡಿಕೊಂಡು ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಟೀಕಾ ಪ್ರಹರ ನಡೆಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಮುರುಗೇಶ್ ನಿರಾಣಿ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್,  ಸಂಸದ ಜಿ.ಎಂ.ಸಿದ್ದೇಶ್ವರ, ಜಿಲ್ಲಾಧ್ಯಕ್ಷ ಎನ್.ರಾಜಶೇಖರ್, ಹರಿಹರ ಶಾಸಕ ಬಿ.ಪಿ.ಹರೀಶ್, ಹರಿಹರ ಮಾಜಿ ಶಾಸಕ ಎಚ್.ಎಸ್.ಶಿವಶಂಕರ್ ಸೇರಿದಂತೆ ಇತರರಿದ್ದರು.

TAGGED:dinamaana.comKannada NewsYediyurappa.ಕನ್ನಡ ನ್ಯೂಸ್‌ದಿನಮಾನ.ಕಾಂಬಿ.ಎಸ್.ಯಡಿಯೂರಪ್ಪ.
Share This Article
Twitter Email Copy Link Print
Previous Article Seshagiri Rao Havaldar ಶೇಷಗಿರಿರಾವ್ ಹವಲ್ದಾರ್ ಎಂಬ ಬಡಜೋಗಿ
Next Article Dr. Siddanagowda Patil ದೇಶದ ಉತ್ತಮ ಭವಿಷ್ಯಕ್ಕಾಗಿ ಬಿಜೆಪಿ ಅಧಿಕಾರದಿಂದ ದೂರವಿಡಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davangere University | ತಂತ್ರಜ್ಞಾನ, ಸುಸ್ಥಿರತೆ ಅಳವಡಿಕೆಯಿಂದ ವಿಮೆ, ಬ್ಯಾಂಕಿಂಗ್ ಸುಭದ್ರ : ಪ್ರೊ.ಸಿ.ಎಂ.ತ್ಯಾಗರಾಜ್

ದಾವಣಗೆರೆ (Davangere)  : ಬ್ಯಾಂಕಿಂಗ್ ಮತ್ತು ವಿಮಾ ಕ್ಷೇತ್ರಗಳಲ್ಲಿ ಸುಸ್ಥಿರ ಅಭ್ಯಾಸಗಳನ್ನು ಸಂಯೋಜಿಸುವ ಮಾರ್ಗವು ಹಲವಾರು ಅಡಚಣೆಗಳಿಂದ ತುಂಬಿದ್ದರೂ, ಉತ್ತಮ…

By Dinamaana Kannada News

Davanagere | ನಕಲಿ ಪತ್ರಕರ್ತರ ಹಾವಳಿ ತಡೆಗೆ ಆಗ್ರಹ

ದಾವಣಗೆರೆ (Davanagere): ಮಾಧ್ಯಮಗಳ ಹೆಸರೇಳಿಕೊಂಡು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ನಕಲಿ ಪತ್ರಕರ್ತರ ಹಾವಳಿಯನ್ನು ತಡೆಗಟ್ಟುವಂತೆ ಕೋರಿ ಬುಧವಾರ ಜಿಲ್ಲಾ…

By Dinamaana Kannada News

Davanagere | ಕ್ರೀಡಾ ವಸತಿ ನಿಲಯದ ಖೋ-ಖೋ ತಂಡಕ್ಕೆ ಬೆಳ್ಳಿಪದಕ

ದಾವಣಗೆರೆ  (Davanagere);  ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಅಕ್ಟೋಬರ್ 3 ರಿಂದ 6 ರವರೆಗೆ ನಡೆದ ರಾಜ್ಯ ಮಟ್ಟದ ದಸರಾ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Harihara | ಮಾನವರೆಲ್ಲರೂ ಪರಸ್ಪರ ಸಹೋದರರು ಅಕ್ಬರ್ ಅಲಿ ಉಡುಪಿ

By Dinamaana Kannada News
Davanagere
ತಾಜಾ ಸುದ್ದಿ

ಜೂ.16 ರಂದು ನಗರಕ್ಕೆ ಸಿಎಂ ಸಂಚಾರ ಮಾರ್ಗದಲ್ಲಿ ಭಾರಿ ಬದಲಾವಣೆ : ಡಿಸಿ

By Dinamaana Kannada News
Davanagere
Blog

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಮುಖ್ಯೋಪಾಧ್ಯಾಯ ಆರ್.ಪ್ರಭು

By Dinamaana Kannada News
davanagere
Blog

Davanagere | ಹಲ್ಲೆ ಮಾಡಿದ ಪ್ರಕರಣ: ಆರೋಪಿಗೆ 6 ತಿಂಗಳು ಕಾರಾಗೃಹ ಶಿಕ್ಷೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?