ದಾವಣಗೆರೆ (Davanagere) : ಮೂಡಾ ಹಗರಣದಲ್ಲಿ ಸಿದ್ದರಾಮಯ್ಯನವರ ಪಾತ್ರ ಇಲ್ಲ ರಾಜ್ಯಪಾಲರ ವಜಾಗೆ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಹಾಲು ಮತ ಮಹಾಸಬಾದ ಜಿಲ್ಲಾ ಸಂಚಾಲಕ ನಿಟ್ಟುವಳ್ಳಿ ಪ್ರವೀಣ್ ಕುಮಾರ್. ಎಸ್ ಆಗ್ರಹಿಸಿದ್ದಾರೆ.
ರಾಜ್ಯಪಾಲರು ಬಿಜೆಪಿಯ ಏಜೆಂಟರಂತೆ ವರ್ತಿಸುತ್ತಿದ್ದು, ರಾಷ್ಟ್ರಪತಿಗಳು ಕೂಡಲೇ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.ಇದು ರಾಜಕೀಯ ಪಿತೂರಿ, ಬಿಜೆಪಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ. ರಾಜ್ಯದಲ್ಲಿ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ. ರಾಜ್ಯಪಾಲರು ಪಕ್ಷಪಾತ ನಡೆಸುತ್ತಿದ್ದು, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಅಥವಾ ರಾಷ್ಟ್ರಪತಿಗಳು ಕೂಡಲೇ ಅವರನ್ನು ಪದಚ್ಯುತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿದ್ದಾರೆ ರಾಜಭವನವು ಬಿಜೆಪಿಯ ಕಚೇರಿಯಾಗಿ ಮಾರ್ಪಟ್ಟಿದೆ. ಸಿಎಂ ವಿರುದ್ಧ ಕಾರ್ಯಕರ್ತ ಟಿಜೆ ಅಬ್ರಹಾಂ ದೂರು ಸಲ್ಲಿಸಿದಾಗ, ಮುಖ್ಯ ಕಾರ್ಯದರ್ಶಿ ರಾಜಭವನಕ್ಕೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಒದಗಿಸಿದ್ದಾರೆ.
ಇದೀಗ ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿರುವುದನ್ನು ರಾಜ್ಯದ ಜನತೆ ಸಹಿಸುವುದಿಲ್ಲ. ಬಿಜೆಪ ಪಕ್ಷದವರಿಗೆ ಹಿಂದುಳಿದ ಸಮುದಾಯದ ಏಳಿಗೆ ಸಹಿಸದೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ಸೇರಿ ಸಿದ್ದರಾಮಯ್ಯನವರಿಗೆ ಇನ್ನಿಲ್ಲದ ಕಿರುಕುಳ ನೀಡುವುದು ಸರಿಯಲ್ಲ ಎಂದು ಕಟುವಾಗಿ ಟೀಕಿಸಿದ್ದಾರೆ.