ದಾವಣಗೆರೆ : ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್‌ನ ನೂತನ ಅಧ್ಯಕ್ಷ ಮಂಜುನಾಥ್ ಗೌಡ ಅವರು ಜೂ. 27 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾದ ತಾಹೀರ್ ಸಮೀರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ದೀಪಿಕಾ ರೆಡ್ಡಿ ರವರು ಹಾಗೂ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ ರವರು ಸಹ ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಹಾಗೂ ಜಿಲ್ಲೆಯ ಎಲ್ಲಾ ಶಾಸಕರುಗಳು ಭಾಗವಹಿಸಲಿದ್ದಾರೆ.
Read also : Channagiri | ಅಪಘಾತ : ಓರ್ವ ಸಾವು, 8 ಜನರಿಗೆ ಗಂಭೀರ ಗಾಯ
ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಈ ಭೇಟಿಯನ್ನು ಸ್ಮರಣೀಯ ಹಾಗೂ ಯಶಸ್ವಿಯಾಗಿಸಲು ಸಕಲ ರೀತಿಯ ಸಿದ್ಧತೆಗಳನ್ನು ಮಾಡಲಾಗುತ್ತಿದ್ದು, ಜಿಲ್ಲೆಯ ಎಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ತಾಹೀರ್ ಸಮೀರ್ ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ತಾಹೀರ್ ಸಮೀರ್ [9886828185] ಮನವಿ ಮಾಡಿದ್ದಾರೆ.