ದಾವಣಗೆರೆ : ಪ್ರಸ್ತುತ ಸ್ಫರ್ಧಾತ್ಮಕ ಯುಗದಲ್ಲಿ ಹಲವಾರು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯನ್ನು ತೆಗೆದುಕೊಳ್ಳಲು, ಪುಸ್ತಕ ಖರೀದಿಸಲು, ಮತ್ತು ಅರ್ಜಿ ಸಲ್ಲಿಸಲು ಹಣಕಾಸಿನ ಅವಶ್ಯಕತೆ ತುಂಬಾ ಮುಖ್ಯ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಶಾಮನೂರು ಟಿ. ಬಸವರಾಜು ಹೇಳಿದರು.
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಮತ್ತು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಆಶ್ರಯದಲ್ಲಿ ಯುವನಿಧಿ ಯೋಜನೆಯ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
Read also : 90 ದಿನಗಳ ಮಧ್ಯಸ್ಥಗಾರಿಕೆ ಅಭಿಯಾನ ಸದ್ಬಳಕೆಗೆ ನ್ಯಾ. ಮಹಾವೀರ ಕರೆಣ್ಣವರ್ ಕರೆ
ಡಿಪ್ಲೋಮ, ಪದವಿ ಪೂರೈಸಿಕೊಂಡು ಉದ್ಯೋಗ ಸಿಗಲಾರದೆ ಸಂದರ್ಶನಗಳಿಗೆ ಹಾಜರಾಗಲು ಹಣಕಾಸಿನ ತೊಂದರೆಗಳ ಕುರಿತಂತೆ ಸರ್ಕಾರ ಗಮನಿಸಿದ್ದು, ಅಂತಹ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಯುವನಿಧಿ ಯೋಜನೆಯನ್ನು ಜಾರಿಗೆ ತಂದಿದೆ. 2024-25ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲೋಮಾ ಅರ್ಹತೆ ಹೊಂದಿದವರು ಯುವನಿಧಿ ಯೋಜನೆಯ ನಿರುದ್ಯೋಗಿ ಭತ್ಯೆ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ, ಡಿ, ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ನಂಜನಾಯ್ಕ, ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಬಿ. ಉಮೇಶ್, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ|| ಕರಿಬಸಪ್ಪ ಟಿ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಶಿವಶಂಕರ ಕೈದಾಳೆ, ಎಸ್.ಎಸ್. ಗಿರೀಶ್, ಚಂದ್ರಶೇಖರ್ ಸಿ.ವಿ, ಎಂ.ಕೆ.ಲಿಯಾಕತ್ ಆಲಿ, ಅಂಜಿನಪ್ಪ ಬಿ.ಹೆಚ್, ಮನೋಜ್.ಎಸ್, ಮಲ್ಲಿಕಾರ್ಜುನ.ಎಸ್ ಉಪಸ್ಥಿತರಿದ್ದರು.